ಸುವರ್ಣ ವಿಧಾನಸೌಧ 
ರಾಜ್ಯ

ಡಿ. 4 ರಿಂದ ಚಳಿಗಾಲದ ಅಧಿವೇಶನ: ಬೆಳಗಾವಿಯಲ್ಲಿ ಹೋಟೆಲ್‌, ರೆಸಾರ್ಟ್‌ಗಳು ಬುಕ್!

ರಾಜ್ಯ ವಿಧಾನಮಂಡಲದ 10 ದಿನಗಳ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಈಗಾಗಲೇ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳು ಬುಕ್ ಆಗಿವೆ ಎನ್ನಲಾಗಿದೆ. 

ಬೆಳಗಾವಿ: ರಾಜ್ಯ ವಿಧಾನಮಂಡಲದ 10 ದಿನಗಳ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಈಗಾಗಲೇ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳು ಬುಕ್ ಆಗಿವೆ ಎನ್ನಲಾಗಿದೆ. 

ಡಿಸೆಂಬರ್ 9 ಮತ್ತು 10 (ಶನಿವಾರ ಮತ್ತು ಭಾನುವಾರ) ಹೊರತುಪಡಿಸಿ ಡಿಸೆಂಬರ್ 4 ರಿಂದ 15ರವರೆಗೆ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆಯ ಸಚಿವಾಲಯ ತಿಳಿಸಿದೆ.

ಇದೇ ವೇಳೆ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನದ ಸಿದ್ಧತೆಗಳು ಭರದಿಂದ ಸಾಗಿದ್ದು, ಅಧಿವೇಶನ ಸುಗಮವಾಗಿ ನಡೆಯಲು ಬೆಳಗಾವಿ ಜಿಲ್ಲಾಡಳಿತ ಹಲವು ಉಪ ಸಮಿತಿಗಳನ್ನು ರಚಿಸಿದೆ.

ಬೆಳಗಾವಿಯ ಬಹುತೇಕ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳು ಈಗಾಗಲೇ ಬುಕ್ ಆಗಿದ್ದು, ಅಧಿವೇಶನಕ್ಕೆ ಆಗಮಿಸುವವರನ್ನು ಹೊರತುಪಡಿಸಿ ಇತರರಿಗೆ ಕೊಠಡಿಗಳನ್ನು ಬಾಡಿಗೆಗೆ ನೀಡದಂತೆ ಹೋಟೆಲ್ ಮಾಲೀಕರಿಗೆ ಸೂಚನೆ ನೀಡಲಾಗಿದೆ.

ಜಿಲ್ಲಾಡಳಿತ ರಚಿಸಿರುವ ಸಮಿತಿಗಳು ಸುವರ್ಣ ವಿಧಾನಸೌಧದಲ್ಲಿ ಆಹಾರ, ಸಾರಿಗೆ, ಮಾಧ್ಯಮ, ಮುದ್ರಣ ಸೇರಿದಂತೆ ವಿವಿಧ ಸೌಲಭ್ಯಗಳ ಉಸ್ತುವಾರಿ ವಹಿಸಲಿವೆ. ಅಧಿವೇಶನದ ವೇಳೆ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಬೆಳಗಾವಿ ಪೊಲೀಸ್ ಆಯುಕ್ತ ಸಿದ್ರಾಮಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!