ಕಳೆದ ಎರಡು ದಿನಗಳಲ್ಲಿ ಆರು ಅಂತಾರಾಷ್ಟ್ರೀಯ ಪ್ರಯಾಣಿಕರಿಂದ ವಶಪಡಿಸಿಕೊಂಡಿರುವ ಚಿನ್ನ. 
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ: 1.25 ಕೋಟಿ ರೂ. ಮೌಲ್ಯದ 2 ಕೆಜಿ ಚಿನ್ನ ವಶ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಒಟ್ಟು 1.25 ಕೋಟಿ ರೂ. ಮೌಲ್ಯದ 2 ಕೆಜಿ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಒಟ್ಟು 1.25 ಕೋಟಿ ರೂ. ಮೌಲ್ಯದ 2 ಕೆಜಿ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಸ್ಕತ್‌ನಿಂದ ಓಮನ್ ಏರ್ ವಿಮಾನದಲ್ಲಿ (ಡಬ್ಲ್ಯುವೈ 281) ಬಂದಿದ್ದ ಪ್ರಯಾಣಿಕರೊಬ್ಬರಿಂದ 1113.07 ಗ್ರಾಂ ಚಿನ್ನಾಭರಣವನ್ನು ಶುಕ್ರವಾರ ವಶಕ್ಕೆ ಪಡೆಯಲಾಗಿದೆ.

ಈತ ತನ್ನ ಸೊಂಟದ ಬೆಲ್ಟ್ ನಲ್ಲಿದ್ದ ಪೌಚ್ ಹಾಗೂ ಹ್ಯಾಂಡ್ ಬ್ಯಾಗ್ ನಲ್ಲಿ ರೂ.68.18 ಲಕ್ಷ ಮೌಲ್ಯದ ಚಿನ್ನ ಅಡಗಿಸಿಟ್ಟಿದ್ದ ಎಂದು ಅಧಿಕಾರಿಗಳಉ ಮಾಹಿತಿ ನೀಡಿದ್ದಾರೆ.

ಗುರುವಾರ ಕೂಡ ಬ್ಯಾಂಕಾಕ್ ನಿಂದ ಬಂದಿದ್ದ ಮೂವರು ಪುರುಷರು ಹಾಗೂ ಕೊಲಂಬೋದಿಂದ ಬಂದಿದ್ದ ಇಬ್ಬರು ಮಹಿಳೆಯರಿಂದ 966ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.

ಬ್ಯಾಂಕಾಕ್‌ನಿಂದ ಬಂದ ಇಂಡಿಗೋ ವಿಮಾನ 6E 1056 ರಲ್ಲಿ ಮೂವರು ಪ್ರತ್ಯೇಕ ಪ್ರಯಾಣಿಕರಿಂದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಯಾಣಿಕರು ತಮ್ಮ ಕುತ್ತಿಗೆಯಲ್ಲಿ ಎರಡು ಕಚ್ಚಾ ಚಿನ್ನದ ಸರವನ್ನು ಧರಿಸಿದ್ದರು. ಈ ಸರಗಳು 18,13,800 ರೂ ಮೌಲ್ಯವುಳ್ಳದ್ದಾಗಿದ್ದು, ಒಟ್ಟು 300 ಗ್ರಾಂ ತೂಕವಿತ್ತು.
 
ಇನ್ನಿಬ್ಬರು ಮಹಿಳೆಯರು ಒಳ ಉಡುಪು ಸೇರಿದಂತೆ ಇತರೆಡೆ 1,20,920 ರೂ ಮೌಲ್ಯದ ಚಿನ್ನಾಭರಣವನ್ನು ಬಚ್ಚಿದ್ದರು. ಮತ್ತೋರ್ವ ಮಹಿಳೆ ಸಾಕ್ಸ್ ಹಾಗೂ ಪ್ಯಾಂಟ್ ನಲ್ಲಿ  2,78, 116 ರೂಪಾಯಿ ಮೌಲ್ಯದ ಒಟ್ಟು 46 ಗ್ರಾಂ ಚಿನ್ನವನ್ನು ಬಚ್ಚಿಟ್ಟಿದ್ದರು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT