ಸಾಂದರ್ಭಿಕ ಚಿತ್ರ 
ರಾಜ್ಯ

ನಾಲ್ವರ ಹತ್ಯೆ ಪ್ರಕರಣ: ದ್ವೇಷ ಪ್ರಚೋದನೆಗಾಗಿ ಯುವಕನ ವಿರುದ್ಧ ಎಫ್ ಐಆರ್ ದಾಖಲು

ಮುಸ್ಲಿಂ ಕುಟುಂಬದ ಹಂತಕನನ್ನು ‘ಮುಗಿಸುವ' ಅವಕಾಶ ಕೈತಪ್ಪಿ ಹೋಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಹಾಕಿದ್ದಕ್ಕಾಗಿ ಜಿಲ್ಲೆಯ ಯುವಕನೊಬ್ಬನ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಉಡುಪಿ: ಮುಸ್ಲಿಂ ಕುಟುಂಬದ ಹಂತಕನನ್ನು ‘ಮುಗಿಸುವ' ಅವಕಾಶ ಕೈತಪ್ಪಿ ಹೋಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಹಾಕಿದ್ದಕ್ಕಾಗಿ ಜಿಲ್ಲೆಯ ಯುವಕನೊಬ್ಬನ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಆರೋಪಿಯನ್ನು ಶಿವಮೊಗ್ಗದ ಹಫೀಜ್ ಮೊಹಮ್ಮದ್ ಎಂದು ಗುರುತಿಸಲಾಗಿದೆ. ಆತನ ವಿರುದ್ಧ  ಐಪಿಸಿ ಸೆಕ್ಷನ್ 155 (ಗಲಭೆ ನಡೆದ ವ್ಯಕ್ತಿಯ ಹೊಣೆಗಾರಿಕೆ) ಮತ್ತು 505 (2) (ನಿರ್ದಿಷ್ಟ ಉದ್ದೇಶದಿಂದ ಸುಳ್ಳು ಹೇಳಿಕೆ ಅಥವಾ ಮಾಹಿತಿ ನೀಡುವುದು ಅಥವಾ ಪ್ರಸಾರ ) ಅಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ. 

ಉಡುಪಿ ಜಿಲ್ಲೆಯ ನೇಜಾರು ನಿವಾಸಿಗಳು ಯಾವುದೇ ಸಿದ್ಧತೆಯಿಲ್ಲದೆ ಪ್ರವೀಣ್ ಚೌಗಲೆಯನ್ನು ಹತ್ಯೆ ಮಾಡುವ ಸುಲಭದ ಅವಕಾಶ ಕಳೆದುಕೊಂಡಿದ್ದಾರೆ ಎಂದು ಆರೋಪಿ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾನೆ. 

ಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ಕೊಂದ ಆರೋಪದ ಮೇಲೆ ಬಂಧಿತನಾಗಿದ್ದ ಪ್ರವೀಣ್ ಚೌಗಲೆಯನ್ನು ಪೊಲೀಸರು ತನಿಖೆಯ ಭಾಗವಾಗಿ ಸಂತ್ರಸ್ತರ ನಿವಾಸಕ್ಕೆ ಕರೆದೊಯ್ದಾಗ ಹತ್ಯೆ ಮಾಡಬೇಕಿತ್ತು ಎಂದು ಆರೋಪಿ ಹೇಳಿದ್ದಾನೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಉಡುಪಿ ಸೈಬರ್, ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT