ಚಾಕು 
ರಾಜ್ಯ

ಹಾಸನ: ವೈವಾಹಿಕ ಸಮಾಲೋಚನೆ ವೇಳೆ ಪೊಲೀಸ್ ಠಾಣೆಯೊಳಗೆ ಪತ್ನಿಗೆ ಚೂರಿ ಇರಿದ ಪತಿ, ಬಂಧನ!

ವೈವಾಹಿಕ ಸಮಾಲೋಚನೆ ವೇಳೆ ಮಹಿಳಾ ಪೊಲೀಸ್ ಠಾಣೆಯೊಳಗೆ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಾಸನ: ವೈವಾಹಿಕ ಸಮಾಲೋಚನೆ ವೇಳೆ ಮಹಿಳಾ ಪೊಲೀಸ್ ಠಾಣೆಯೊಳಗೆ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಡನಿಂದ ಚಿತ್ರಹಿಂಸೆ ಮತ್ತು ಕಿರುಕುಳದಿಂದ ಬೇಸತ್ತ ಮಹಿಳೆ ಠಾಣೆಗೆ ತೆರಳಿ ದೂರು ದಾಖಲಿಸಿದ್ದರು. ಈ ವಿಚಾರವಾಗಿ ಭಾನುವಾರ ಮಧ್ಯಾಹ್ನ ದಂಪತಿಯನ್ನು ಪೊಲೀಸ್ ಠಾಣೆಗೆ ಕೌನ್ಸೆಲಿಂಗ್‌ಗಾಗಿ ಕರೆಸಲಾಗಿತ್ತು. ಈ ವೇಳೆ ಪತ್ನಿಗೆ ವಿವಾಹೇತರ ಸಂಬಂಧವಿದೆ ಎಂಬ ಶಂಕೆ ಮೇರೆಗೆ ಹಿಂಸೆ ನೀಡಿದ್ದಾರೆ ಎಂದು ಪೊಲೀಸರು ಪ್ರಶ್ನಿಸಿದರು.

ವಿಚಾರಣೆ ವೇಳೆ ತನಗೆ ಅನೈತಿಕ ಸಂಬಂಧವಿದೆ ಎಂಬ ಅನುಮಾನದ ಮೇಲೆ ಗಂಡ ತನ್ನೊಂದಿಗೆ ಆಗಾಗ್ಗೆ ಅನುಚಿತವಾಗಿ ವರ್ತಿಸುತ್ತಾನೆ. ತನ್ನನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಾನೆ ಎಂದು ಮಹಿಳೆ ಆರೋಪಿಸುತ್ತಲೇ ಇದ್ದಳು. ವಿಚಾರಣೆ ನಂತರ ಮಹಿಳೆ ಪತಿಯೊಂದಿಗೆ ಮನೆಗೆ ಹೋಗಲು ನಿರಾಕರಿಸಿದಳು.

ಠಾಣೆಯಲ್ಲಿ ಪತ್ನಿ ತನ್ನ ಮೇಲೆ ಆರೋಪ ಮಾಡಿದ್ದು ಅಲ್ಲದೆ ಮನೆಗೆ ಬರಲು ನಿರಾಕರಿಸಿದ್ದರಿಂದ ಕೋಪಗೊಂಡ ವ್ಯಕ್ತಿ ಮನೆಯಿಂದ ತಂದಿದ್ದ ಚಾಕುವಿನಿಂದ ಪೊಲೀಸ್ ಠಾಣೆಯಲ್ಲೇ ಪತ್ನಿ ಕತ್ತು ಕೊಯ್ದು ಹತ್ಯೆ ಮಾಡಲು ಯತ್ನಿಸಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವೇಳೆ ವ್ಯಕ್ತಿಯನ್ನು ತಡೆದ ಪೊಲೀಸ್ ಆತನನ್ನು ವಶಕ್ಕೆ ಪಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಆಕೆ ಅಪಾಯದಿಂದ ಪಾರಾಗಿದ್ದಾಳೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT