ಹೆಜ್ಜೇನು ದಾಳಿ (ಸಾಂದರ್ಭಿಕ ಚಿತ್ರ) 
ರಾಜ್ಯ

ತುಮಕೂರು: ಹೆಜ್ಜೇನು ದಾಳಿಗೆ ಓರ್ವ ಬಲಿ, 20ಕ್ಕೂ ಹೆಚ್ಚು ಮಂದಿಗೆ ಗಾಯ

ಹೆಜ್ಜೇನು ದಾಳಿಯಿಂದ ಒಬ್ಬರು ಮೃತಪಟ್ಟು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು: ಹೆಜ್ಜೇನು ದಾಳಿಯಿಂದ ಒಬ್ಬರು ಮೃತಪಟ್ಟು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಲಕ್ಕೇನಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದ್ದು, ನಾಮಕರಣ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಜನರ ಮೇಲೆ ಏಕಾಏಕಿ ಹೆಜ್ಜೇನು ದಾಳಿ (Honeybee Attack) ಮಾಡಿದ್ದರಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು 47 ವರ್ಷದ ವೀರಭದ್ರಯ್ಯ ಎಂದು ಗುರುತಿಸಲಾಗಿದೆ.

ಕಡಬ ಹೋಬಳಿ ಬೆಲವತ್ತ ಗ್ರಾಮದ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ನಾಮಕರಣ ನಡೆಯುತ್ತಿದ್ದಾಗ ದಿಢೀರನೆ ಹೆಜ್ಜೇನು ನೋಣಗಳು ದಾಳಿ ನಡೆಸಿವೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ವೀರಭದ್ರಯ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಗುಬ್ಬಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ವಾರಸುದಾರರಿಗೆ ಹಿಂದಿರುಗಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT