ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರು: ಎಲ್‌ಪಿಜಿ ಸಿಲಿಂಡರ್ ಸ್ಫೋಟ, ಐವರಿಗೆ ಗಾಯ

ಎಲ್​ಪಿಜಿ ಸಿಲಿಂಡರ್ ಸ್ಫೋಟಗೊಂಡು ಐವರು ಗಾಯಗೊಂಡಿರುವ ಘಟನೆ ನಗರದ ವೀವರ್ಸ್ ಕಾಲೋನಿ ಸಮೀಪದ ಮಾರುತಿ ಬಡಾವಣೆಯಲ್ಲಿ ಬುಧವಾರ ನಡೆದಿದೆ.

ಸಂಗ್ರಹ ಚಿತ್ರ
Manjula VN
Updated On : 22 Nov 2023, 1:01 pm

ಬೆಂಗಳೂರು: ಎಲ್​ಪಿಜಿ ಸಿಲಿಂಡರ್ ಸ್ಫೋಟಗೊಂಡು ಐವರು ಗಾಯಗೊಂಡಿರುವ ಘಟನೆ ನಗರದ ವೀವರ್ಸ್ ಕಾಲೋನಿ ಸಮೀಪದ ಮಾರುತಿ ಬಡಾವಣೆಯಲ್ಲಿ ಬುಧವಾರ ನಡೆದಿದೆ.

ಉತ್ತರ ಪ್ರದೇಶದ ಬನಾರಸ್ ಮೂಲದ ಜಮಾಲ್(32) ನಾಜಿಯಾ(22) ಇರ್ಫಾನ್ (21)ಗುಲಾಬ್(18) ಶಹಜಾದ್(9) ಗಾಯಗೊಂಡವರಾಗಿದ್ದಾರೆ.

ಮಾರ್ಟಿನ್ ಎಂಬುವವರಿಗೆ ಸೇರಿದ ಮನೆಯಲ್ಲಿ ಕುಟುಂಬ ವಾಸವಾಗಿತ್ತು. ಆಡುಗೆ ಅನಿಲ ಸೋರಿಕೆಯಾಗಿರುವುದು ತಿಳಿಯದೆ ಇಂದು (ನ.22) ಮುಂಜಾನೆ 5:30 ರ ಸುಮಾರಿಗೆ ಲೈಟ್​ನ ಸ್ವಿಚ್ ಆನ್ ಮಾಡಿದಾಗ ಸಿಲಿಂಡರ್​ ಸ್ಫೋಟಗೊಂಡಿದೆ.

Advertisement

Advertisement

ಇದನ್ನೂ ಓದಿ: ಸಿಲಿಂಡರ್ ಸ್ಫೋಟ, ಭಾರಿ ಬೆಂಕಿ; ಪ್ರಾಣ ರಕ್ಷಣೆಗೆ 4ನೇ ಅಂತಸ್ತಿನಿಂದ ಜಿಗಿದ ವ್ಯಕ್ತಿ ಗಂಭೀರ: ಇಷ್ಟಕ್ಕೂ ಆಗಿದ್ದೇನು?

ಸ್ಪೋಟದ ತೀವ್ರತೆಗೆ ಮನೆಯ ಕಿಡಕಿ ಬಾಗಿಲುಗಳು ಛಿದ್ರಗೊಂಡಿವೆ. ಅಲ್ಲದೆ, ಮನೆಯ ಮುಂಭಾಗ ನಿಲ್ಲಿಸಿದ್ದ ಕಾರಿನ ಗಾಜು ಕೂಡ ಪುಡಿ ಪುಡಿಯಾಗಿವೆ.

ಸುದ್ದಿ ತಿಳಿಯುತ್ತದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಕೋಣನಕುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement