ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ವರದಕ್ಷಿಣೆ ತರಲಿಲ್ಲವೆಂದು ಪತ್ನಿಯ ಖಾಸಗಿ ಅಂಗಗಳ ಮೇಲೆ ಆ್ಯಸಿಡ್ ಎರಚಿದ ಪತಿ!

ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿಯ ಖಾಸಗಿ ಅಂಗಗಳ ಮೇಲೆ ಟಾಯ್ಲೆಟ್ ಕ್ಲೀನಿಂಗ್ ಆ್ಯಸಿಡ್ ಎರಚಿರುವ ಆಘಾತಕಾರಿ ಘಟನೆ ನಡೆದಿದೆ. ಬೆಂಗಳೂರು ಹೊರವಲಯದ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಈ ಘಟನೆ ನಡೆದಿದೆ. ಪತ್ನಿ ನೀಡಿದ ದೂರಿನ ಮೇರೆಗೆ ಪೊಲೀಸರು ಪತಿ ಮತ್ತು ಅತ್ತೆ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಬೆಂಗಳೂರು: ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿಯ ಖಾಸಗಿ ಅಂಗಗಳ ಮೇಲೆ ಟಾಯ್ಲೆಟ್ ಕ್ಲೀನಿಂಗ್ ಆ್ಯಸಿಡ್ ಎರಚಿರುವ ಆಘಾತಕಾರಿ ಘಟನೆ ನಡೆದಿದೆ. ಬೆಂಗಳೂರು ಹೊರವಲಯದ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಈ ಘಟನೆ ನಡೆದಿದೆ. ಪತ್ನಿ ನೀಡಿದ ದೂರಿನ ಮೇರೆಗೆ ಪೊಲೀಸರು ಪತಿ ಮತ್ತು ಅತ್ತೆ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿಯು ಇದೇ ವರ್ಷ ಮೇ 19 ರಂದು 23 ವರ್ಷದ ಸಂತ್ರಸ್ತೆಯನ್ನು ವಿವಾಹವಾಗಿದ್ದ. ಆರೋಪಿಯು ಮದ್ಯವ್ಯಸನಿಯಾಗಿದ್ದು, ಅಪರೂಪಕ್ಕೆ ಕೆಲಸಕ್ಕೆ ಹೋಗುತ್ತಿದ್ದ ಎನ್ನಲಾಗಿದೆ. ಬದಲಾಗಿ ಪತ್ನಿಯಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದು, ಪದೇ ಪದೇ ಜಗಳವಾಗುತ್ತಿತ್ತು. ನಿತ್ಯವೂ ಕುಡಿದ ಅಮಲಿನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಆರೋಪಿ ತನ್ನ ಹೆಂಡತಿಗೆ ದೈಹಿಕ ಮತ್ತು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ.

ಆಗಾಗ ತಲೆಗೂದಲು ಹಿಡಿದು ಎಳೆದಾಡುವ ಮೂಲಕ ಕೊಲೆ ಬೆದರಿಕೆ ಹಾಕುತ್ತಿದ್ದ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಮನೆ ಬಾಡಿಗೆ ಪಾವತಿಸದ ಕಾರಣ, ತಮ್ಮನ್ನು ಅವರ ನಿವಾಸದಿಂದ ಹೊರಹಾಕಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇತ್ತೀಚೆಗಷ್ಟೇ ಆರೋಪಿಯು ಆಕೆಯ ಬೆನ್ನು ಮತ್ತು ಖಾಸಗಿ ಭಾಗಗಳ ಮೇಲೆ ಟಾಯ್ಲೆಟ್ ಕ್ಲೀನಿಂಗ್ ಆ್ಯಸಿಡ್ ಸುರಿದಿದ್ದಾನೆ. ಇದರಿಂದಾಗಿ ಸಂತ್ರಸ್ತೆ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಆರೋಪಿ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ದೈಹಿಕ ಹಲ್ಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮುಂದಿನ ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ಎಚ್ಚರಿಕೆ ನಡುವೆ ವೆನೆಜುವೆಲಾ ರಾಜಧಾನಿ ಕ್ಯಾರಕಾಸ್‌ ಕನಿಷ್ಠ 7 ಸ್ಫೋಟ: ತಗ್ಗಿನಲ್ಲಿ ಹಾರುವ ವಿಮಾನಗಳು ಪತ್ತೆ, ತುರ್ತು ಪರಿಸ್ಥಿತಿ ಘೋಷಣೆ

ಬಾಂಗ್ಲಾದೇಶದ ಆಟಗಾರ ಮುಸ್ತಾಫಿಜುರ್ ರೆಹಮಾನ್ ಅವರನ್ನು ಬಿಡುಗಡೆ ಮಾಡಲು ಕೆಕೆಆರ್‌ಗೆ ಬಿಸಿಸಿಐ ಸೂಚನೆ

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಪ್ರಚಾರಕ್ಕೂ ಮುನ್ನವೇ ಮಹಾಯುತಿ ಮೇಲುಗೈ; 70 ಸ್ಥಾನಗಳಿಗೆ ಅವಿರೋಧ ಆಯ್ಕೆ

ಗೃಹಲಕ್ಷ್ಮಿ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿಸಿದ ರಾಯಚೂರು ಮಹಿಳೆ: ಖುಷಿ ಹಂಚಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬಿಹಾರ: ವೃದ್ಧರಿಗೆ 'ಮನೆ ಬಾಗಿಲಿಗೆ ಆರೋಗ್ಯ ಸೇವೆ' ಘೋಷಿಸಿದ ನಿತೀಶ್ ಸರ್ಕಾರ

SCROLL FOR NEXT