ವಿಧಾನಸೌಧ ಮುಂದೆ ಶಕ್ತಿ ಯೋಜನೆ ಆರಂಭ ದಿನ 
ರಾಜ್ಯ

ಶಕ್ತಿ ಯೋಜನೆ ಮೈಲಿಗಲ್ಲು: ಮಹಿಳೆಯರಿಂದ 100 ಕೋಟಿ ಉಚಿತ ಬಸ್ ಪ್ರಯಾಣ; 2,397.80 ಕೋಟಿ ರೂ. ಮೌಲ್ಯ

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ ಬಳಿಕ ಜಾರಿಯಾದ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ನೂತನ ಮೈಲಿಗಲ್ಲು ಸ್ಥಾಪಿಸಿದ್ದು, 2,397.80 ಕೋಟಿ ರೂ ಟಿಕೆಟ್ ಮೌಲ್ಯದ 100 ಕೋಟಿ ಉಚಿತ ಬಸ್ ಪ್ರಯಾಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ ಬಳಿಕ ಜಾರಿಯಾದ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ನೂತನ ಮೈಲಿಗಲ್ಲು ಸ್ಥಾಪಿಸಿದ್ದು, 2,397.80 ಕೋಟಿ ರೂ ಟಿಕೆಟ್ ಮೌಲ್ಯದ 100 ಕೋಟಿ ಉಚಿತ ಬಸ್ ಪ್ರಯಾಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಹೌದು.. ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ 'ಶಕ್ತಿ' ಯೋಜನೆಯು ಐಷಾರಾಮಿ ಅಲ್ಲದ ಸಾರ್ವಜನಿಕ ಸಾರಿಗೆ ಬಸ್‌ಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ಹೊಸ ಮೈಲಿಗಲ್ಲು ನಿರ್ಮಿಸಿದ್ದು, 2,397.80 ಕೋಟಿ ರೂ ಟಿಕೆಟ್ ಮೌಲ್ಯದ 100 ಕೋಟಿ ಉಚಿತ ಬಸ್ ಪ್ರಯಾಣ ದಾಖಲಾಗಿದೆ.

ಈ ಬಗ್ಗೆ ಸಾರಿಗೆ ಇಲಾಖೆ ಮಾಹಿತಿ ನೀಡಿದ್ದು, ಯೋಜನೆಯು ಪ್ರಾರಂಭವಾದ ಜೂನ್ 11 ರಿಂದ ಇಲ್ಲಿಯವರೆಗೆ 100,47,56,184 ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಯೋಜನೆಯು ಪ್ರಾರಂಭವಾದಾಗಿನಿಂದ ರಾಜ್ಯದ ಬೊಕ್ಕಸಕ್ಕೆ 2,397.80 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ದತ್ತಾಂಶಗಳು ತೋರಿಸಿದೆ.

ಈ ಸಾಧನೆಯನ್ನು ಆಚರಿಸಲು ಸರ್ಕಾರವು ಶುಕ್ರವಾರ ವಿಧಾನಸೌಧದಲ್ಲಿ “ಶಕ್ತಿ ಖಾತರಿಗೆ ಶತಕೋಟಿ ಸಂಭ್ರಮ” ಎಂಬ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಶಕ್ತಿ ಯೋಜನೆಯು ಕಾಂಗ್ರೆಸ್ ಸರ್ಕಾರ ನೀಡಿದ್ದ ಐದು ಭರವಸೆಗಳಲ್ಲಿ (ಚುನಾವಣಾ ಪೂರ್ವ ಭರವಸೆಗಳು) ಒಂದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು