ಹುತಾತ್ಮ ಯೋಧ ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌ ಅಂತ್ಯಕ್ರಿಯೆ 
ರಾಜ್ಯ

ಸೇನಾ ಗೌರವಗಳೊಂದಿಗೆ ನೆರವೇರಿದ ಹುತಾತ್ಮ ಯೋಧ ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌ ಅಂತ್ಯಕ್ರಿಯೆ

ಜಮ್ಮು-ಕಾಶ್ಮೀರದಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಅಂತ್ಯ ಕ್ರಿಯೆ ಸೇನಾ ಗೌರವಗಳೊಂದಿಗೆ ಇಂದು ನೆರವೇರಿತು.

ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಅಂತ್ಯ ಕ್ರಿಯೆ ಸೇನಾ ಗೌರವಗಳೊಂದಿಗೆ ಇಂದು ನೆರವೇರಿತು.
 
ಸಾವಿರಾರು ಮಂದಿ ಆಗಮಿಸಿ ಹುತಾತ್ಮರಾದ ವೀರಯೋಧನಿಗೆ ಅಂತಿಮ ನಮನ ಸಲ್ಲಿಸಿದರು. ಅಮರ್ ರಹೇ ಘೋಷಣೆಯೊಂದಿಗೆ ಹುತಾತ್ಮ ಯೋಧನ ಅಂತ್ಯಕ್ರಿಯೆ ನೆರವೇರಿತು.

ಶನಿವಾರ ಬೆಳಗ್ಗೆ 8ರಿಂದಲೂ ಜಿಗಣಿ ಸಮೀಪದ ನಂದನವದಲ್ಲಿನ ಪ್ರಾಂಜಲ್‌ ಅವರ ನಿವಾಸದ ಮುಂಭಾಗದಲ್ಲಿ ಪ್ರಾಂಜಲ್ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು.

ಪೊಲೀಸ್‌ ಮತ್ತು ಮಿಲಿಟರಿ ಪಡೆಗಳು ಹುತಾತ್ಮ ಯೋಧನಿಗೆ ಗೌರವ ವಂದನೆ ಸಲ್ಲಿಸಿದರು. ಗೌರವ ವಂದನೆಯ ನಂತರ ಪಾರ್ಥೀವ ಶರೀರವನ್ನು ಪ್ರಾಂಜಲ್‌ ಅವರ ಮನೆಗೆ ಕೊಂಡೊಯ್ಯಲಾಯಿತು. ಕುಟುಂಬ ಸದಸ್ಯರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದ ಬಳಿಕ  ಸೋಮಸುಂದರಪಾಳ್ಯದಲ್ಲಿನ ವಿದ್ಯುತ್‌ ಚಿತಾಗಾರದಲ್ಲಿ ಪ್ರಾಂಜಲ್‌ ಅವರ ಅಂತ್ಯಕ್ರಿಯೆ ನೆರವೇರಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ; ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಚುನಾವಣಾ ಆಯೋಗಕ್ಕೆ ಸಲ್ಲಿಸಿದ 89 ಲಕ್ಷ ದೂರುಗಳು ತಿರಸ್ಕೃತ; ಮತ್ತೆ ಎಸ್‌ಐಆರ್ ನಡೆಸಿ: ಕಾಂಗ್ರೆಸ್ ಆಗ್ರಹ

ಉಪ್ಪಾರ ಸಮುದಾಯ STಗೆ ಸೇರ್ಪಡೆ: ಶೀಘ್ರದಲ್ಲೇ ಕೇಂದ್ರಕ್ಕೆ ಶಿಫಾರಸು - ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್, ಚಾಮುಂಡಿ ಬೆಟ್ಟವನ್ನು 'ಟೂಲ್‌ಕಿಟ್' ಆಗಿ ಬಳಸುತ್ತಿದೆ: ಆರ್ ಅಶೋಕ್

SCROLL FOR NEXT