ಸಿಎಂ ಸಿದ್ದರಾಮಯ್ಯ ಮತ್ತಿತರರು 
ರಾಜ್ಯ

ತುಳುವನ್ನು ರಾಜ್ಯದ 2ನೇ ಭಾಷೆಯನ್ನಾಗಿ ಮಾಡುವ ಬೇಡಿಕೆ ಪರಿಶೀಲನೆ- ಸಿಎಂ ಸಿದ್ದರಾಮಯ್ಯ

ಕಂಬಳ ಸಮಿತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಕರಾವಳಿಯ ಜಾನಪದ ಕ್ರೀಡೆ "ಕಂಬಳ ಉತ್ಸವ" ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ  ಉದ್ಘಾಟಿಸಿದರು. 

ಬೆಂಗಳೂರು: ಕಂಬಳ ಸಮಿತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಕರಾವಳಿಯ ಜಾನಪದ ಕ್ರೀಡೆ "ಕಂಬಳ ಉತ್ಸವ" ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ  ಉದ್ಘಾಟಿಸಿದರು. 

ನಂತರ ಮಾತನಾಡಿದ ಮುಖ್ಯಮಂತ್ರಿ, ತುಳುವನ್ನು ಎರಡನೇ ಭಾಷೆಯನ್ನಾಗಿ ಮಾಡುವ ಬೇಡಿಕೆಯನ್ನು  ಪರಿಶೀಲಿಸುತ್ತೇವೆ ಎಂದು ತಿಳಿಸಿದರು. ಕರಾವಳಿಯ ಲಕ್ಷಾಂತರ ಜನರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇಲ್ಲಿಯೂ ಪ್ರತಿವರ್ಷ ಕಂಬಳ ಮುಂದುವರಿಸುವ ಕೆಲಸ ಮಾಡಿದರೆ ಬೆಂಗಳೂರಿನ ನಿವಾಸಿಗಳಿಗೂ ಮನೋರಂಜನೆಯ ಕ್ರೀಡೆ ಆಗುತ್ತೆ ಎಂದರು.

ಕಂಬಳ ಮತ್ತು ಜಲ್ಲಿಕಟ್ಟು ಕ್ರೀಡೆಗಳನ್ನು ನಿಷೇಧಿಸಲು ಬೇಡಿಕೆ ಇತ್ತು ಆದರೆ ಕಾಂಗ್ರೆಸ್ ಸರ್ಕಾರವು ಈ ಹಿಂದೆಯೂ ಕಂಬಳವನ್ನು ಬೆಂಬಲಿಸಿದೆ. ಈಗ ಕಂಬಳ ಕ್ರೀಡೆ ಪ್ರೋತ್ಸಾಹಿಸಲು  ಸರ್ಕಾರ ಒಂದು ಕೋಟಿ ರೂಪಾಯಿ ಘೋಷಣೆ ಮಾಡಿದ್ದು, ತಕ್ಷಣವೇ ಐದು ಲಕ್ಷ ರೂಪಾಯಿ ಬಿಡುಗಡೆ ಮಾಡಲಿದೆ ಎಂದು ಸಿಎಂ ಹೇಳಿದರು.

 ಸಮುದಾಯ ಭವನ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ ಅವರು, ಬೆಂಗಳೂರಿನ ಸುತ್ತಮುತ್ತ ಸಿಎ ನಿವೇಶನಗಳನ್ನು ಹುಡುಕುವಂತೆ ಮನವಿ ಮಾಡಿದರು. ಬೆಂಗಳೂರು ಕಂಬಳ ಸಮಿತಿಯು ಅಧಿಕೃತವಾಗಿ ಸಿಎಂಗೆ ಮನವಿ ಪತ್ರವನ್ನು ನೀಡಿ ತುಳುವನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಮಾಡುವಂತೆ ಮನವಿ ಮಾಡಿತು.

ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಕಂಬಳ ಮತ್ತು ಯಕ್ಷಗಾನ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಕಣ್ಣುಗಳು. ಮಂಗಳೂರಲ್ಲಿದ್ದೇನಾ ಅಥವಾ ಬೆಂಗಳೂರಲ್ಲಿದ್ದೇನಾ ಎಂಬ ಸಂಶಯ ಬಂತು. ತುಳು ಭಾಷೆ ರಾಜ್ಯದ ಹೆಚ್ಚುವರಿ ಭಾಷೆಯಾಗಿ ಸೇರ್ಪಡೆ ಮಾಡಬೇಕು. ಈ ಕುರಿತು ಸಿಎಂ ಸಿದ್ದರಾಮಯ್ಯಗೆ ಮನವರಿಕೆ ಮಾಡಿರುವುದಾಗಿ ತಿಳಿಸಿದರು. 

ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅಶ್ವಿನಿ ಪುನೀತ್ ರಾಜ್‌ಕುಮಾರ್ ಕಂಬಳ ಉದ್ಘಾಟಿಸಿದರು. ಭಾನುವಾರ ಮಧಾಹ್ನದವರೆಗೂ ನಿರಂತರವಾಗಿ ಕಂಬಳ ಕೋಣಗಳ ಓಟದ ಸ್ಪರ್ಧೆ ನಡೆಯಲಿದೆ. ಇತ್ತ ಕಂಬಳ ಕಣ್ತುಂಬಿಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನ ಜನ ಅರಮನೆ ಮೈದಾನಕ್ಕೆ ಆಗಮಿಸಿದ್ದಾರೆ. ಬೆಳಿಗ್ಗೆಯಿಂದಲೇ ಒಂದು ಲಕ್ಷಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.

ಪ್ರಥಮ ಬಹುಮಾನ ವಿಜೇತರಿಗೆ 16 ಗ್ರಾಂ ಚಿನ್ನ ಮತ್ತು ಒಂದು ಲಕ್ಷ ನಗದು ನೀಡುವುದಾಗಿ ಸಂಘಟಕರು ಘೋಷಿಸಿದ್ದಾರೆ. ಅದೇ ರೀತಿ ದ್ವಿತೀಯ ಮತ್ತು ತೃತೀಯ ಸ್ಥಾನ ವಿಜೇತರು ಕ್ರಮವಾಗಿ 8 ಗ್ರಾಂ ಚಿನ್ನ ಮತ್ತು ರೂ.50,000 ನಗದು ಮತ್ತು 4 ಗ್ರಾಂ ಚಿನ್ನ ಮತ್ತು ರೂ.25,000 ನಗದು ಬಹುಮಾನವನ್ನು ಪಡೆಯುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT