ಬೆಂಗಳೂರು ಕಂಬಳ ಪದಕ ಗೆದ್ದ ಕಾಂತಾರ ಕೋಣಗಳು 
ರಾಜ್ಯ

ಬೆಂಗಳೂರು ಕಂಬಳ: ಓಟದಲ್ಲಿ ಚಿನ್ನದ ಪದಕ ಗೆದ್ದ 'ಕಾಂತಾರ' ಕೋಣಗಳು!

ಬೆಂಗಳೂರಿನಲ್ಲಿ ನಡೆದ ಕಂಬಳದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದಲ್ಲಿ ಬಳಸಿಕೊಂಡಿದ್ದ ಕೋಣಗಳಿಗೆ ಚಿನ್ನದ ಪದಕ ಗೆದ್ದಿವೆ.

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಕಂಬಳದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದಲ್ಲಿ ಬಳಸಿಕೊಂಡಿದ್ದ ಕೋಣಗಳಿಗೆ ಚಿನ್ನದ ಪದಕ ಗೆದ್ದಿವೆ.

ಪರಮೇಶ್ವರ ಭಟ್ ಮಾಲೀಕತ್ವದ ಕೋಣಗಳು ಇಂದು 6.5 ಕೋಲು ನೀರು ಎತ್ತರಕ್ಕೆ ನೀರು ಚಿಮ್ಮಿಸಿ ಚಿನ್ನದ ಪದಕ ಪಡೆದಿವೆ. ಬಾನೆತ್ತರಕ್ಕೆ ನೀರು ಚಿಮ್ಮಿಸುತ್ತಾ ಈ ಕೋಣಗಳ ಓಟವನ್ನು ಅಲ್ಲಿ ನೆರೆದಿದ್ದವರು ಕಣ್ತುಂಬಿಕೊಂಡರು.

ಅರಮನೆ ಮೈದಾನದಲ್ಲಿ ನಿರ್ಮಿಸಿರುವ ರಾಜ-ಮಹಾರಾಜ ಕೆರೆಯಲ್ಲಿ ಬೆಂಗಳೂರು ಕಂಬಳದ ಮೊದಲ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಅಪ್ಪು, ಕಿಟ್ಟು ಜೋಡಿ ಕೋಣಗಳು ಇತಿಹಾಸ ಬರೆದಿವೆ.

ಏಳು ಬಲಿಷ್ಠ ಕೋಣಗಳ ಹಿಂದಿಕ್ಕಿದ ಕಾಂತಾರ ಜೋಡಿ ಕೋಣವು ಒಂದು ಲಕ್ಷ ನಗದು ಹಾಗೂ 16 ಗ್ರಾಂ ಚಿನ್ನ ತನ್ನದಾಗಿಸಿಕೊಂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT