ರಾಜ್ಯ

ಪೊಲೀಸರಿಂದ ಕಿರುಕುಳಕ್ಕೊಳಗಾದ ಕಾರ್ಯಕರ್ತರಿಗೆ ನೆರವಾಗಲು ಕಂಟ್ರೋಲ್ ರೂಂ ಸ್ಥಾಪನೆಗೆ ಬಿಜೆಪಿ ನಿರ್ಧಾರ!

Ramyashree GN

ಬೆಂಗಳೂರು: ಪ್ರತಿಪಕ್ಷ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರನ್ನು ಗುರಿಯಾಗಿಸಿಕೊಂಡು ಪೊಲೀಸರು ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳನ್ನು ಸ್ವೀಕರಿಸಲು ರಾಜ್ಯ ಹಾಗೂ ಜಿಲ್ಲೆಗಳ ಪಕ್ಷದ ಕಚೇರಿಗಳಲ್ಲಿ ಕಂಟ್ರೋಲ್ ರೂಂಗಳನ್ನು ತೆರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾನುವಾರ ಹೇಳಿದ್ದಾರೆ.

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ. ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತರಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ ಎಂದು ಅವರು ತಿಳಿಸಿದ್ದಾರೆ. 

'ಈ ಕುರಿತು ಟ್ವೀಟ್ ಮಾಡಿರುವ ಅವರು, 'ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜ ಬೇಕಿಲ್ಲ, ಎದೆಗುಂದ ಬೇಕಿಲ್ಲ' ಎಂದಿದ್ದಾರೆ.

ಸಂವಿಧಾನವು ಜನರಿಗೆ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಕಾನೂನು ಪೊಲೀಸರಿಗೆ ಅಧಿಕಾರ ನೀಡಿಲ್ಲ. ಈ ನಿಟ್ಟಿನಲ್ಲಿ ನಮ್ಮ ಕಾರ್ಯಕರ್ತರ ಬಂಧು’ಗಳಿಗೆ ಯಾವುದೇ ತೊಂದರೆ, ಬೆದರಿಕೆ, ಕಿರುಕುಳ ಎದುರಾದರೆ ತಕ್ಷಣವೇ ಪಕ್ಷವು ನೆರವಿಗೆ ಬರುತ್ತದೆ ಎಂದರು.

'ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಛೇರಿಗಳಲ್ಲಿ ಶೀಘ್ರದಲ್ಲೇ ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು. ಇದು ದೂರುಗಳನ್ನು ಸ್ವೀಕರಿಸಲು ಮತ್ತು ನಮ್ಮ ಕಾರ್ಯಕರ್ತರಿಗೆ ಕಾನೂನು ನೆರವು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತದೆ' ಎಂದು ವಿಜಯೇಂದ್ರ ಹೇಳಿದರು.

SCROLL FOR NEXT