ಎಲ್.ಕೆ ಅತೀಕ್ 
ರಾಜ್ಯ

ಸಿಎಂ ಅಪರ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಎಲ್.ಕೆ ಅತೀಕ್‌ ನೇಮಕ

ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಎಲ್‌.ಕೆ.ಅತೀಕ್‌ ಅವರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು: ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಎಲ್‌.ಕೆ.ಅತೀಕ್‌ ಅವರನ್ನು ನೇಮಕ ಮಾಡಲಾಗಿದೆ.

ಈವರೆಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅತೀಕ್‌ ಅವರು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಜತೆಗೆ ಹಣಕಾಸು ಇಲಾಖೆಯ ಹುದ್ದೆಯಲ್ಲೂ ಮುಂದುವರಿಯಲಿದ್ದಾರೆ.

ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯರ್ಶಿಯಾಗಿದ್ದ ರಜನೀಶ್‌ ಗೋಯಲ್‌ ಅವರನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿದೆ. ನವೆಂಬರ್‌ 30ರಂದು ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್‌ ಗೋಯಲ್‌ ಅಧಿಕಾರ ವಹಿಸಿಕೊಳ್ಳಲಿದ್ಧಾರೆ.

ಲುತಾಫುಲ್ಲಾ ಖಾನ್‌ ಅವರು ತುಮಕೂರು ಜಿಲ್ಲೆ ಪಾವಗಡದವರು. 1991ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿ. ಮಂಗಳೂರು ಎಸಿಯಾಗಿ ನಂತರ ಮಂಡ್ಯ, ಹಾಸನ ಡಿಸಿಯಾಗಿದ್ದವರು. ಸರ್ವ ಶಿಕ್ಷಾ ಅಭಿಯಾನದ ಯೋಜನಾ ನಿರ್ದೇಶಕರೂ ಆಗಿದ್ದರು.

ಕೇಂದ್ರ ಸರ್ಕಾರದ ಸೇವೆಯಲ್ಲಿ ಪ್ರಧಾನ ಮಂತ್ರಿಗಳ ಕಚೇರಿಯಲ್ಲಿಯೂ ಸೇವೆ ಸಲ್ಲಿಸಿದರು. ವಿಶ್ವ ಬ್ಯಾಂಕ್‌ ಕಾರ್ಯ ನಿರ್ವಾಹಕ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ ಅನುಭವವಿದೆ. ಕರ್ನಾಟಕದಲ್ಲಿ ಪಂಚಾಯತ್‌ ರಾಜ್‌ ಇಲಾಖೆ ಪ್ರಧಾನ ಕಾರ್ಯದರ್ಶಿಯೂ ಸೇರಿ ಹಲವು ಇಲಾಖೆಗಳಲ್ಲಿ ಕೆಲಸ ಮಾಡಿದ್ದಾರೆ. 2025ರ ಜನವರಿಯಲ್ಲಿ ನಿವೃತ್ತರಾಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 60 ಸಾವಿರ ರೂ.ಗಳ ಆರ್ಥಿಕ ಬಲ- ಸಿಎಂ ಸಿದ್ದರಾಮಯ್ಯ

ಯೋಗ್ಯತಾ ಪರವಾನಗಿ ಇಲ್ಲದೆ ಎಂಟು ಬಾರಿ ವಿಮಾನ ಹಾರಾಟ: ಏರ್ ಇಂಡಿಯಾಕ್ಕೆ 1 ಕೋಟಿ ರೂ.ದಂಡ!

T-20 ವಿಶ್ವಕಪ್ 2026: ನೆದರ್ ಲ್ಯಾಂಡ್ಸ್ ವಿರುದ್ಧ 93 ರನ್ ಅಂತರದಿಂದ ಗೆದ್ದ ಅಮೆರಿಕ!

ಅಧಿಕಾರಿ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯರ ನಕಲಿ ಟಿಪ್ಪಣಿ: ಪೊಲೀಸ್ ಕೇಸ್ ದಾಖಲು!

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

SCROLL FOR NEXT