ಸಾಂದರ್ಭಿಕ ಚಿತ್ರ 
ರಾಜ್ಯ

ಕೋಲಾರ ಲಾಕಪ್‌ ಡೆತ್ ಪ್ರಕರಣ: ನಂಗಲಿ ಪಿಎಸ್‌ಐ ಸೇರಿ ಮೂವರ ಅಮಾನತು

ಲಾಕಪ್‌ ಡೆತ್ ಪ್ರಕರಣವೊಂದರಲ್ಲಿ ಪಿಎಸ್‌ಐ ಸೇರಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದ್ದು, ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಕೋಲಾರ: ಲಾಕಪ್‌ ಡೆತ್ ಪ್ರಕರಣವೊಂದರಲ್ಲಿ ಪಿಎಸ್‌ಐ ಸೇರಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದ್ದು, ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್‌ ಠಾಣೆಯಲ್ಲಿ ವಿಚಾರಣೆಗೆಂದು ಕರೆತಂದಿದ್ದ ಆರೋಪಿಯೊಬ್ಬರು ಅಕ್ಟೋಬರ್ 1ರಂದು ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ಠಾಣೆಯ ಪಿಎಸ್‌ಐ ಪ್ರದೀಪ್ ಸಿಂಗ್ ಹಾಗೂ ಪೊಲೀಸ್ ಪೇದೆ ಮಂಜುನಾಥ್, ಮಹಾಂತೇಶ್ ಪೂಜಾರಿ ಎಂಬವರನ್ನು ಅಮಾನತು ಮಾಡಲಾಗಿದೆ.

ಕಳ್ಳತನ ಪ್ರಕರಣದಲ್ಲಿ ಆಂಧ್ರಪ್ರದೇಶದ ಮದನಪಲ್ಲಿ ಮೂಲದ ಮುನಿರಾಜು ಮತ್ತು ಬಾಲಾಜಿ ಎಂಬ ಯುವಕರನ್ನು ವಿಚಾರಣೆಗೆಂದು ಸೆಪ್ಟೆಂಬರ್ 17ರಂದು ಠಾಣೆಗೆ ಕರೆತಂದಿದ್ದರು. ಅವರನ್ನು ಹಿರಿಯ ಅಧಿಕಾರಿಗಳ ಗಮನಕ್ಕೂ ತಾರದೆ, ಬೇರೆ-ಬೇರೆ ಸ್ಥಳಗಳಲ್ಲಿ ಇರಿಸಿ, 15 ದಿನಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು.

ಆದರೆ, ಅಕ್ಟೋಬರ್ 1ರಂದು ಪೊಲೀಸ್‌ ಸುಪರ್ದಿಯಲ್ಲೇ ಮುನಿರಾಜು ಎಂಬವರು ಸಾವನ್ನಪ್ಪಿದ್ದರು. ಬಳಿಕ, ಪ್ರಕರಣವನ್ನು ತನಿಖೆಗೆ ಆದೇಶಿಸಲಾಗಿತ್ತು. ಇಲಾಖೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದೆ ಅರೋಪಿಗಳನ್ನ ವಿಚಾರಣೆ ಮಾಡಿ, ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪದ ಮೇಲೆ ಮೂವರನ್ನು ಅಮಾನತು ಮಾಡಿ ಕೋಲಾರ ಎಸ್‌ಒಇ ನಾರಾಯಣ ಅಮಾನತು ಮಾಡಿದ್ದಾರೆ. ಮೂವರ ವಿರುದ್ಧವೂ ಎಫ್‌ಐಆರ್‌ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT