ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಶಿಕ್ಷಕನ ವಿರುದ್ಧ ಪೋಷಕರ ಪ್ರತಿಭಟನೆ 
ರಾಜ್ಯ

ತುಮಕೂರು: ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ; ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೋಷಕರ ಪ್ರತಿಭಟನೆ

ತುಮಕೂರು ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪೋಷಕರ ಗುಂಪೊಂದು ಮಂಗಳವಾರ ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿತು.

ತುಮಕೂರು: ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪೋಷಕರ ಗುಂಪೊಂದು ಮಂಗಳವಾರ ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿತು.

ಮಧುಗಿರಿ ತಾಲೂಕಿನ ರಂಟವಾಳ ಗ್ರಾಮದಲ್ಲಿ ಘಟನೆ ವರದಿಯಾಗಿದೆ. ಶಿಕ್ಷಕ ಲಕ್ಷ್ಮೀಕಾಂತ ಕುಡಿದ ಅಮಲಿನಲ್ಲಿ ಶಾಲೆಗೆ ಬಂದು ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಆರೋಪಿ ಶಿಕ್ಷಕನು ವಿದ್ಯಾರ್ಥಿನಿಯರಿಗೆ ಹಣದ ಆಮಿಷವೊಡ್ಡುತ್ತಿದ್ದನು ಮತ್ತು ತನಗೆ ಅವರ ತಂದೆಯ ಪರಿಚಯವಿದೆ ಎಂದು ಹೇಳುವ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿದ್ದನು ಎಂದು ಪೋಷಕರು ಆರೋಪಿಸಿದ್ದಾರೆ. 

ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಆರೋಪಿ ಶಿಕ್ಷಕನನ್ನು ಕೂಡಲೇ ವರ್ಗಾವಣೆ ಮಾಡಿ, ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದ ಪೋಷಕರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT