ಸಿಎಂ ಸಿದ್ದರಾಮಯ್ಯ 
ರಾಜ್ಯ

ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ಘೋಷಣೆ: ಮೊದಲ ಕಂತಿನಲ್ಲಿ 2,000 ರೂ. ವರೆಗೆ ನೆರವು

ಮೊದಲನೇ ಕಂತಿನಲ್ಲಿ ರೂ.2,000ವರೆಗೆ ಬೆಳೆ ಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಸುದ್ದಿಗೋಷ್ಠಿಯಲ್ಲಿಂದು ಈ ಘೋಷಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಈಗ ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ 2,000 ರೂ. ವರೆಗೆ ಬೆಳೆ ಪರಿಹಾರ ಹಣ ನೀಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

ಬೆಂಗಳೂರು: ಮೊದಲನೇ ಕಂತಿನಲ್ಲಿ ರೂ.2,000ವರೆಗೆ ಬೆಳೆ ಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಸುದ್ದಿಗೋಷ್ಠಿಯಲ್ಲಿಂದು ಈ ಘೋಷಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದೆ. ಕೇಂದ್ರಕ್ಕೆ ಬರೆದ ಪತ್ರಗಳಿಗೂ ಪ್ರತಿಕ್ರಿಯೆ ಇಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ.ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನ ಉದ್ಯೋಗ ಕೊಡಲು ಅನುಮತಿ ಕೋರಲಾಗಿತ್ತು. ಕೇಂದ್ರ ಇನ್ನೂ ಅನುಮತಿ ನೀಡಿಲ್ಲ ಎಂದರು. 

ಈಗ ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ 2,000 ರೂ ವರೆಗೆ ಬೆಳೆ ಪರಿಹಾರ ಹಣ ನೀಡಲು ನಿರ್ಧರಿಸಿದ್ದೇವೆ. ಕೇಂದ್ರದಿಂದ ಹಣ ಬರುವವರೆಗೂ ಕಾಯಲು ಸಾಧ್ಯವಿಲ್ಲ ಎನ್ನುವ ಕಾರಣದಿಂದ ರಾಜ್ಯ ಸರ್ಕಾರ ಮೊದಲ ಕಂತು ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. 

ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಮೂರು ಹಂತದಲ್ಲಿ ಘೋಷಿಸಿದ್ದೇವೆ‌.48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. 18171.44 ಕೋಟಿ ಪರಿಹಾರದ ಆರ್ಥಿಕ ನೆರವು ನೀಡಲು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ನಮ್ಮ ತೆರಿಗೆ ಹಣದ ಪಾಲನ್ನು ನಮಗೆ ವಾಪಾಸ್ ಕೊಟ್ಟರೂ ಸಾಕು  ಎಂದರು. 

ದೇಶದಲ್ಲಿ 12 ರಾಜ್ಯಗಳಲ್ಲಿ ಬರಗಾಲದ ಸ್ಥಿತಿ ಇದೆ. ರೂ. 4, 663 ಕೋಟಿ ಬೆಳೆ ನಷ್ಟ  ಪರಿಹಾರ ಕೇಂದ್ರಕ್ಕೆ ಕೇಳಿದ್ದೆವು. ಕೇಂದ್ರ ಸಚಿವರಿಗೂ ಮನವಿ ಮಾಡಿದ್ದೇವೆ. ಇವತ್ತಿನವರೆಗೂ ಕೇಂದ್ರ ಸಭೆಯನ್ನೇ ನಡೆಸಿಲ್ಲ. ಸಮಯ ಕೇಳಿದರೂ ಭೇಟಿಗೆ ಅವಕಾಶ ಕೊಟ್ಟಿಲ್ಲ. ಹಣಕಾಸು ಸಚಿವರನ್ನು  ನಮ್ಮ ಸಚಿವರು ಭೇಟಿ ಮಾಡಿದಾರೆ. ಕೇಂದ್ರ ಇವತ್ತಿನವರೆಗೆ ಸಭೆ ನಡೆಸಿಲ್ಲ. ಪರಿಹಾರ ನೀಡುವ‌ ಪ್ರಕ್ರಿಯೆಯನ್ನೇ ಶುರು ಮಾಡಿಲ್ಲ ಎಂದು ಆರೋಪಿಸಿದರು. 

ರಾಜ್ಯದ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ಕೇಂದ್ರ ಕೃಷಿ ಮತ್ತು ಗೃಹ ಸಚಿವರನ್ನು ನಾನೇ ಭೇಟಿ ಮಾಡ್ತೀನಿ, ಸಮಯ ಕೊಡಿ ಎಂದು  ಪತ್ರ ಬರೆದಿದ್ದೀನಿ. ಇವತ್ತಿನವರೆಗೂ ಸಮಯ ಕೊಟ್ಟಿಲ್ಲ. ಬಿತ್ತನೆ ವೈಫಲ್ಯ ಮತ್ತು ಮಧ್ಯಂತರ ವಿಮೆ ಪರಿಹಾರಕ್ಕೆ ರಾಜ್ಯ ಸರ್ಕಾರ ಈಗಾಗಲೇ 6.5 ಲಕ್ಷ ರೈತರಿಗೆ 460 ಕೋಟಿ ನಮ್ಮ ಸರ್ಕಾರ ಬಿಡುಗಡೆ ಮಾಡಿದೆ. ಕುಡಿಯುವ ನೀರು , ಮೇವಿಗೆ 327 ಕೋಟಿ ಬಿಡುಗಡೆ, 780 ಕೋಟಿ DC ಗಳ PD ಖಾತೆಯಲ್ಲಿದೆ. ಅವರೂ ತಹಶೀಲ್ದಾರ್ ಗಳಿಗೆ ಬಿಡುಗಡೆ ಮಾಡಿದ್ದಾರೆ ಎಂದು ತಿಳಿಸಿದರು. 

ಯಾವ ತಾಲ್ಲೂಕುಗಳಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಇಲ್ಲದಂತೆ ನಿರ್ವಹಿಸಿದ್ದೇವೆ, ಹಲವು ತಾಲ್ಲೂಕುಗಳ 60 ಹಳ್ಳಿಗಳಲ್ಲಿ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಿದ್ದೇವೆ. ಹೊರ ರಾಜ್ಯಕ್ಕೆ ಮೇವು ಹೋಗದಂತೆ ತಡೆದಿದ್ದೇವೆ. ಮೇವಿನ‌ ಬೀಜ ವಿತರಣೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT