ಸಂಗ್ರಹ ಚಿತ್ರ 
ರಾಜ್ಯ

ತಂದೆ ಬದುಕಿದ್ದರೂ ದತ್ತಿ ಇಲಾಖೆ ದೇಗುಲಗಳಲ್ಲಿ ಅರ್ಚರಾಗಲು ಪುರೋಹಿತರ ಮಕ್ಕಳಿಗೆ ಅವಕಾಶ!

ಪುರೋಹಿತರ (ಅರ್ಚಕರ) ಮಕ್ಕಳಿಗೂ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನಗಳಲ್ಲಿ ಅರ್ಚಕರಾಗಿ ಕೆಲಸ ಮಾಡುವ ಅವಕಾಶವನ್ನು ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಕಲ್ಪಿಸಿದೆ.

ಬೆಂಗಳೂರು: ಪುರೋಹಿತರ (ಅರ್ಚಕರ) ಮಕ್ಕಳಿಗೂ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನಗಳಲ್ಲಿ ಅರ್ಚಕರಾಗಿ ಕೆಲಸ ಮಾಡುವ ಅವಕಾಶವನ್ನು ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಕಲ್ಪಿಸಿದೆ.

ತಂದೆಯ ಜೀವಂತವಾಗಿರುವವರೆಗೂ ಅವರ ಮಕ್ಕಳು ದೇವಸ್ಥಾನಗಳಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸಲು ಈ ಹಿಂದೆ ಅವಕಾಶ ಇರಲಿಲ್ಲ. ಇದೀಗ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಪುರೋಹಿತರ ಮಕ್ಕಳು, ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದೆ.

ರಾಜ್ಯದಲ್ಲಿ ದತ್ತಿ ಇಲಾಖೆಯ 34,000 ದೇವಾಲಯಗಳಿವೆ. ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ದತ್ತಿ ಕಾಯಿದೆ 1997, ಸೆಕ್ಷನ್ 9(1) ಪ್ರಕಾರ, ಸಿ ದರ್ಜೆಯ ದೇವಾಲಯಗಳಲ್ಲಿ ಕೆಲಸ ಮಾಡುವ ಪುರೋಹಿತರ ಪುತ್ರರು ಈವರೆಗೂ ತಂದೆಯ ನಿಧನದ ನಂತರವಷ್ಟೇ ಅರ್ಚಕರಾಗಿ ನೇಮಕಗೊಳ್ಳುತ್ತಿದ್ದರು. ಅನಾರೋಗ್ಯ ನಿಮಿತ್ತ ಅರ್ಚಕರು ದೇವಾಲಯಗಳಲ್ಲಿ ಸೇವೆ ಸಲ್ಲಿಕೆಗೆ ಹಾಜರಾಗದಿದ್ದರೂ ಮಕ್ಕಳಿಗೆ ಅವಕಾಶ ನೀಡಲಾಗುತ್ತಿರಲಿಲ್ಲ.

ಆದರೆ, ಇದೀಗ ಸರ್ಕಾರ ಆದೇಶ ಹೊರಡಿಸಿದ್ದು, ಪುರೋಹಿತರು ಮೃತಪಟ್ಟರೆ, ಅನಾರೋಗ್ಯ ಮತ್ತು ವಯೋಸಹಜ ಸಮಸ್ಯೆಗಳಿಂದಾಗಿ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ವಂಶಪಾರಂಪರ್ಯ ಹಕ್ಕುಗಳನ್ನು ಮಕ್ಕಳಿಗೆ ನೀಡಲಾಗುವುದು ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT