ಸಂಗ್ರಹ ಚಿತ್ರ 
ರಾಜ್ಯ

ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ: ಸಿಡಬ್ಲ್ಯುಎಂಎಗೆ ರಾಜ್ಯ ಸರ್ಕಾರ ಸ್ಪಷ್ಟನೆ, ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಮನವಿ

ನೆರೆ ರಾಜ್ಯ ತಮಿಳುನಾಡಿಗೆ ನೀರು ಬಿಡುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಬಳಿ ಅಸಮರ್ಥತೆ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ, ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ. ಅಲ್ಲದೆ, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅನುಮತಿ ನೀಡುವಂತೆಯೂ ಮನವಿ ಸಲ್ಲಿಸಿದೆ.

ಬೆಂಗಳೂರು: ನೆರೆ ರಾಜ್ಯ ತಮಿಳುನಾಡಿಗೆ ನೀರು ಬಿಡುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಬಳಿ ಅಸಮರ್ಥತೆ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ, ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ. ಅಲ್ಲದೆ, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅನುಮತಿ ನೀಡುವಂತೆಯೂ ಮನವಿ ಸಲ್ಲಿಸಿದೆ.

ಅಕ್ಟೋಬರ್ 15 ರವರೆಗೆ ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡುವಂತೆ ರಾಜ್ಯಕ್ಕೆ ಕಾವೇರಿ ನೀರು ನಿಯಂತ್ರಣ ಆಯೋಗದ ನೀಡಿದ್ದ ನಿರ್ದೇಶನವನ್ನು ಸಿಡಬ್ಲ್ಯುಎಂಎಗೆ ಎತ್ತಿಹಿಡಿದಿತ್ತು.  ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಕಾನೂನು ತಜ್ಞರ ಜತೆಗೆ ಸಮಾಲೋಚನೆ ನಡೆಸಿದ್ದರು. ಪ್ರಾಧಿಕಾರಕ್ಕೆ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿತ್ತು.

ರಾಜ್ಯದ ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳಲ್ಲಿ 49 ಟಿಎಂಸಿ ಅಡಿಯಷ್ಟು ಮಾತ್ರ ನೀರಿದೆ. ಈ ನೀರು ರಾಜ್ಯದ ಕುಡಿಯುವ ನೀರು ಹಾಗೂ ನೀರಾವರಿಗೆ ಸಾಲದು. ಇಂತಹ ಸನ್ನಿವೇಶದಲ್ಲಿ ಪ್ರಾಧಿಕಾರ ನೀಡಿರುವ ಆದೇಶ ಅವೈಜ್ಞಾನಿಕ. ಆದೇಶವನ್ನು ಮರುಪರಿಶೀಲಿಸಬೇಕು ಎಂದು ರಾಜ್ಯವು ಅರ್ಜಿಯಲ್ಲಿ ಕೋರಿದೆ.

ಈ ಎಲ್ಲ ಸಮಸ್ಯೆಗಳಿಗೆ ಮೇಕೆದಾಟು ಯೋಜನೆಯೇ ಪರಿಹಾರ. ಮಳೆಗಾಲದಲ್ಲಿ ಸಂಗ್ರಹವಾಗುವ ಹೆಚ್ಚುವರಿ ನೀರನ್ನು ಈ ಜಲಾಶಯದಲ್ಲಿ ಸಂಗ್ರಹಿಸಬಹುದು. ಸಂಕಷ್ಟದ ಸನ್ನಿವೇಶದಲ್ಲಿ ತಮಿಳುನಾಡಿಗೆ ಸಹ ನೀರು ಬಿಡುಗಡೆ ಮಾಡಬೇಕು. ಹೀಗಾಗಿ, ಈ ಯೋಜನೆಗೆ ತುರ್ತಾಗಿ ಅನುಮೋದನೆ ನೀಡಬೇಕು ಎಂದು ಒತ್ತಾಯಿಸಿದೆ.

ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗಕ್ಕೆ ರಾಜ್ಯ ಸರ್ಕಾರ 2019ರಲ್ಲೇ ಸಲ್ಲಿಸಿದೆ. ಈ ಯೋಜನೆಗೆ ಕಾವೇರಿ ಪ್ರಾಧಿಕಾರದಿಂದ ಒಪ್ಪಿಗೆ ಸಿಗಬೇಕಿದೆ. ಕಳೆದ ಒಂದೂವರೆ ವರ್ಷಗಳಲ್ಲಿ ಪ್ರಾಧಿಕಾರದ ಕಾರ್ಯಸೂಚಿಯಲ್ಲಿ ಮೇಕೆದಾಟು ಯೋಜನೆಯ ಪ್ರಸ್ತಾವ 13 ಸಲ ಸೇರ್ಪಡೆಯಾಗಿದೆ. ಆದರೆ, ಕೊನೆಯ ಕ್ಷಣದಲ್ಲಿ ಕಾರ್ಯಸೂಚಿಯಿಂದ ಕೈಬಿಡಲಾಗುತ್ತಿದೆ. ಪ್ರಾಧಿಕಾರದ ಮುಂದಿನ ಸಭೆಯಲ್ಲಿ ಮೇಕೆದಾಟು ವಿಷಯವನ್ನು ಕಾರ್ಯಸೂಚಿಯಲ್ಲಿ ಸೇರ್ಪಡೆ ಮಾಡಬೇಕು. ಜತೆಗೆ ಯೋಜನೆಗೆ ತುರ್ತಾಗಿ ಅನುಮೋದನೆ ನೀಡಬೇಕು ಎಂದು ರಾಜ್ಯ ಮನವಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುವುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಸಂಪೂರ್ಣ ಬದ್ಧ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ: ಟಿ.ಬಿ ಜಯಚಂದ್ರ ಹಂಗಾಮಿ ಸಭಾಧ್ಯಕ್ಷ

ರಷ್ಯಾ-ಭಾರತ ನಡುವೆ ನೇರ ರೈಲು ಸಂಪರ್ಕ? ರಷ್ಯಾದಿಂದ ಮಹತ್ವದ ಪ್ರಸ್ತಾವನೆ!