ರಾಜ್ಯ

ಇನ್‌ಸ್ಟಾಗ್ರಾಂನಲ್ಲಿ ಪಾರ್ಟಿ ವಿಡಿಯೋ ಹಂಚಿಕೆ; ಬಾರ್ ಮೇಲೆ ದಾಳಿ ನಡೆಸಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರು

Ramyashree GN

ಉಡುಪಿ: ಕೆಲವು ವಿದ್ಯಾರ್ಥಿಗಳು ಬಾರ್‌ನಲ್ಲಿ ಪಾರ್ಟಿ ಮಾಡಿದ ಚಿತ್ರಗಳು ಮತ್ತು ವಿಡಿಯೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ ನಂತರ, ಪೊಲೀಸರು ಬಾರ್ ಮೇಲೆ ದಾಳಿ ನಡೆಸಿದ್ದು, ಗುಂಪೊಂದನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಣಿಪಾಲ ಸಮೀಪದ ವಿದ್ಯಾನಗರದಲ್ಲಿರುವ ಎಸ್ ಸ್ಟೇಸಿ ಬಾರ್‌ನಲ್ಲಿ ಅನುಮತಿಯಿಲ್ಲದೆ ವಿದ್ಯಾರ್ಥಿಗಳು ಹುಕ್ಕಾ ಸೇದಿ, ಮದ್ಯ ಸೇವಿಸಿ ಪಾರ್ಟಿ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ತಮ್ಮ ಇನ್‌ಸ್ಟಾಗ್ರಾಮ್ ಖಾತೆಗಳಲ್ಲಿ ತಡರಾತ್ರಿ ಪಾರ್ಟಿಯ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. ವಾರಾಂತ್ಯದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು ಘಟನೆ ಬಗ್ಗೆ ಎಚ್ಚೆತ್ತು ಬಾರ್ ಮೇಲೆ ದಾಳಿ ನಡೆಸಿದ್ದಾರೆ.

ಮಣಿಪಾಲ ಸರ್ಕಲ್ ಇನ್ಸ್ ಪೆಕ್ಟರ್ ನೇತೃತ್ವದ ತಂಡ ದಾಳಿ ನಡೆಸಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ. ಡಿಜೆ ಪಾರ್ಟಿಗೆ ಅನುಮತಿ ನೀಡಿದ್ದಕ್ಕಾಗಿ ಬಾರ್ ಮಾಲೀಕನ ಮೇಲೆ ಪ್ರಕರಣ ದಾಖಲಾಗಿದೆ.

ಮಣಿಪಾಲದ ಪ್ರತಿಷ್ಠಿತ ಕಾಲೇಜಿಗೆ ಸೇರಿದ ವಿದ್ಯಾರ್ಥಿಗಳಾಗಿದ್ದು, ಇವರೆಲ್ಲರೂ ದೇಶದ ವಿವಿಧ ಭಾಗಗಳಿಂದ ಬಂದವರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

SCROLL FOR NEXT