ರಾಜ್ಯ

ಶಿವಮೊಗ್ಗ ಗಲಭೆ: ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ; ಡಿಕೆ ಶಿವಕುಮಾರ್

Ramyashree GN

ಬೆಂಗಳೂರು: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಯಾರೇ ಕಾನೂನನ್ನು ಕೈಗೆತ್ತಿಕೊಂಡರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ಕಾನೂನನ್ನು ಕೈಗೆ ತೆಗೆದುಕೊಂಡರೂ ಕ್ರಮ ಕೈಗೊಳ್ಳಲು ನಾವಿದ್ದೇವೆ. ಇಂತಹ ಘಟನೆಗಳನ್ನು ನಾವು ಖಂಡಿಸುತ್ತೇವೆ. ನಾವು ಶಾಂತಿಯನ್ನು ಬಯಸುತ್ತೇವೆ. ನಾವು ಅಂತಹ ಯಾವುದೇ ಚಟುವಟಿಕೆಗಳನ್ನು ಪ್ರೋತ್ಸಾಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಸ್ಥಿತಿ ಹತೋಟಿಯಲ್ಲಿದ್ದು, ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 40 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಇಂತಹ ಚಟುವಟಿಕೆಗಳನ್ನು ಸರ್ಕಾರ ಸಹಿಸುವುದಿಲ್ಲ. ಈದ್ ಮಿಲಾದ್ ಮೆರವಣಿಗೆ ವೇಳೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ಇಲ್ಲಿಯವರೆಗೆ 40 ಮಂದಿಯನ್ನು ಬಂಧಿಸಲಾಗಿದೆ. ಇಂತಹ ಚಟುವಟಿಕೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ಸೆಕ್ಷನ್ 144 ಜಾರಿಗೊಳಿಸಿದೆ.
ಪೊಲೀಸರ ಪ್ರಕಾರ, ಶಾಂತಿನಗರ-ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ದುಷ್ಕರ್ಮಿಗಳ ಗುಂಪು ಕೆಲವು ವಾಹನಗಳು ಮತ್ತು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದೆ.

SCROLL FOR NEXT