ಸಿಎಂ ಸಿದ್ದರಾಮಯ್ಯ 
ರಾಜ್ಯ

ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸನ್ನು ಹಿಂಪಡೆಯುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: ಸಿಎಂ ಸಿದ್ದರಾಮಯ್ಯ

ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ: ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಇಂದು ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕುರುಬ ಸಮಾವೇಶ ನಡೆಯುತ್ತಿದ್ದು ಅದರಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು. 2022ರ ಏಪ್ರಿಲ್‌ 16ರಂದು ನಡೆದ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಸುಮಾರು 40 ಮಂದಿಯನ್ನು ಬಂಧಿಸಲಾಗಿತ್ತು. ಇದೀಗ ಈ ಪ್ರಕರಣವನ್ನು ಕೈಬಿಡುವ ಬಗ್ಗೆ ಪ್ರಕ್ರಿಯೆಗಳು ನಡೆಯತ್ತಿವೆ. ಇದಕ್ಕೆ ಇಂಬು ನೀಡುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿ ಗೃಹ ಇಲಾಖೆಗೆ ಪತ್ರ ಬರೆದು, ಅಮಾಯಕರನ್ನು ಬಿಡುವ ವಿಚಾರದ ಮನವಿಯನ್ನು ಮಾಡಿದ್ದಾರೆ ಎಂದು ತಿಳಿದುಬಂದಿದೆ ಎಂದು ಸುದ್ದಿಗಾರರು ಕೇಳಿದರು. 

ಇದಕ್ಕೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿಗಳು, ಪ್ರಕರಣಗಳನ್ನು ಹಿಂಪಡೆಯುವ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ. ವಕೀಲರು ಹಾಗೂ ಹೋರಾಟಗಾರರು ಒಂದು ಪತ್ರ ಬರೆದಿದ್ದಾರೆ. ಅದರ ಮೇಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದಾರೆ. ಆ ಪತ್ರವನ್ನ ನಾನು ಇವತ್ತೇ ನೋಡಿದ್ದು. ಯಾವುದೇ ಕೇಸ್​ ಹಿಂಪಡೆಯುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದರು.

ಮಾಜಿ ಸಚಿವ ತನ್ವಿರ್​ ಸೇಠ್​ ನಂತರ ಡಿಸಿಎಂ ಡಿಕೆ ಶಿವಕುಮಾರ್ ಅವರು ಹಳೆ ಹುಬ್ಬಳ್ಳಿ ಕೋಮುಗಲಭೆ ಪ್ರಕರಣ ಕೈಬಿಡುವಂತೆ ಗೃಹ ಇಲಾಖೆಗೆ ಶಿಫಾರಸು ಪತ್ರ ಬರೆದಿದ್ದಾರೆ. ಡಿಸಿಎಂ ಡಿಕೆಶಿ ಶಿಫಾರಸು ಆಧಾರಿಸಿ ಹಳೆ ಹುಬ್ಬಳ್ಳಿ ಪ್ರಕರಣ ಸೇರಿ ವಿವಿಧ ಪ್ರಕರಣ ಹಿಂಪಡೆಯುವ ಬಗ್ಗೆ ದಾಖಲೆ ಸಹಿತ ಎಡಿಜಿಪಿ ಅಭಿಪ್ರಾಯ ಕೇಳಿದ್ದಾರೆ.

ಬಿಜೆಪಿಯವರಿಗೆ ಆರೋಪ ಮಾಡುವುದು ಬಿಟ್ಟು ಬೇರೆ ಏನು ಕೆಲಸ ಇದೆ?: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಕೋಮುಗಲಭೆಗಳು ಹೆಚ್ಚಾಗುತ್ತಿವೆ ಎಂಬ ಬಿಜೆಪಿ ನಾಯಕರ ಟೀಕಗೆ ಉತ್ತರಿಸಿದ ಸಿಎಂ, ಬಿಜೆಪಿಯವರಿಗೆ ಆರೋಪ ಮಾಡುವುದು ಬಿಟ್ಟು ಬೇರೆ ಏನು ಕೆಲಸ ಇದೆ? ಆರೋಪ ಮಾಡುವುದೇ ಅವರ ಕೆಲಸ, ಎಲ್ಲವೂ ಸುಳ್ಳು ಆರೋಪಗಳು. ಕೋಮು ಗಲಭೆ ಎಲ್ಲಿ ಆಗಿದೆ. ಶಿವಮೊಗ್ಗ ನಗರದಲ್ಲಿ ಯಾರೋ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ. ಆರೋಪಿಗಳನ್ನು ಬಂಧಿಸಿ ಕಾನೂನಿನಡಿ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದರು. 

ನಾವು ಕೋಮುಗಲಭೆಯನ್ನು ತಕ್ಷಣ ಹತ್ತಿಕ್ಕುವ ಕೆಲಸ ಮಾಡುತ್ತೇವೆ. ಯಾರೇ ಕೋಮುಗಲಭೆ ಮಾಡಿದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಬಿಜೆಪಿಯವರು ಪ್ರತಿಭಟನೆ ಮಾಡಲಿ, ಅವರ ಪ್ರತಿಭಟನೆಗೆ ಅಡ್ಡಿ ಮಾಡುವುದಿಲ್ಲ. ಆದರೆ, ಯಾವುದೇ ಪ್ರತಿಭಟನೆ ಶಾಂತಿಯುತವಾಗಿ ಆಗಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT