ಮಟ್ರೋ ರಿ ರೈಲ್ ವಾಹನ ಮೇಲೆತ್ತಿದ ಕ್ರೇನ್ 
ರಾಜ್ಯ

ನಮ್ಮ ಮೆಟ್ರೊ: ಹಳಿ ತಪ್ಪಿದ್ದ ಆರ್‌ಆರ್‌ವಿ ತೆರವು ಯಶಸ್ವಿ, ಹಸಿರುಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಪುನಾರಂಭ

‘ನಮ್ಮ ಮೆಟ್ರೊ’ದ ಹಸಿರು ಮಾರ್ಗದಲ್ಲಿ ಹಳಿತಪ್ಪಿದ್ದ ರೀ ರೈಲ್ (ಆರ್‌ಆರ್‌ವಿ) ವಾಹನವನ್ನು ಮಂಗಳವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ತೆರವು ಮಾಡಲಾಗಿದೆ.

ಬೆಂಗಳೂರು: ‘ನಮ್ಮ ಮೆಟ್ರೊ’ದ ಹಸಿರು ಮಾರ್ಗದಲ್ಲಿ ಹಳಿತಪ್ಪಿದ್ದ ರೀ ರೈಲ್ (ಆರ್‌ಆರ್‌ವಿ) ವಾಹನವನ್ನು ಮಂಗಳವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ತೆರವು ಮಾಡಲಾಗಿದೆ.

ಆ ಮೂಲಕ ಬೆಳಗ್ಗೆಯಿಂದ ಹಸಿರು ಮಾರ್ಗದಲ್ಲಿ ಸ್ಥಗಿತವಾಗಿದ್ದ ಮೆಟ್ರೋ ರೈಲು ಸಂಚಾರ ಮಧ್ಯಾಹ್ನ 3.40ರಿಂದ ಪುನಾರಂಭಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ನಮ್ಮ ಮೆಟ್ರೋ ಇಎ-ಪಿಪಿಆರ್ ಶ್ರೀವಾಸ್ ರಾಜಗೋಪಾಲನ್ ಅವರು, ಇಂದು ಗ್ರೀನ್ ಲೈನ್‌ನಲ್ಲಿ ಮೆಟ್ರೋ ಸೇವೆಗಳ ಅಡಚಣೆಯ ಕುರಿತು ಮಾಧ್ಯಮ ಬಿಡುಗಡೆಯಾಗಿದೆ. ವಿವರಗಳು ಮಾಧ್ಯಮ ಪ್ರಕಟಣೆಯಲ್ಲಿವೆ. 15.40 ಗಂಟೆಯಿಂದ ಸಹಜ ಸ್ಥಿತಿಗೆ ಮರಳಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಹಳಿ ದುರಸ್ತಿಗೆ ತೆರಳುತ್ತಿದ್ದ ವೇಳೆ, ಆರ್ ಆರ್ ವಿ ವಾಹನವು ಹಳಿ ತಪ್ಪಿತ್ತು. ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಸರಿಪಡಿಸಲು ಬಳಸುವ ರೀ ರೈಲ್ ರಾಜಾಜಿನಗರ ನಿಲ್ದಾಣದ ತಿರುವಿನಲ್ಲಿ ಹಳಿ ತಪ್ಪಿದ ಪರಿಣಾಮ ಈ ಸಮಸ್ಯೆ ಎದುರಾಗಿತ್ತು. ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ನಮ್ಮ ಮೆಟ್ರೊ ಪ್ರಯಾಣಿಕರು ಪರದಾಡಿದ್ದರು. ಯಶವಂತಪುರದಿಂದ ಮಂತ್ರಿ ಸ್ಕ್ವೇರ್‌ ವರೆಗೆ ಒಂದು ಮಾರ್ಗದಲ್ಲಿ ಮಾತ್ರ ಅರ್ಧ ಗಂಟೆಗೆ ಒಮ್ಮೆ ಮೆಟ್ರೊ ಸಂಚಾರವಿತ್ತು. 

ಇದರಿಂದ ನಿಗದಿತ ಸಮಯಕ್ಕೆ ಪ್ರಯಾಣಿಕರು ಕೆಲಸಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ. ವಿದ್ಯಾರ್ಥಿಗಳು ಸಮಸ್ಯೆಗೆ ಸಿಲುಕಿದ್ದರು. ಯಶವಂತಪುರ ರೈಲ್ವೆ ನಿಲ್ದಾಣ ಸಮೀಪದಿಂದ ಬಿಎಂಟಿಸಿ ಹೆಚ್ಚುವರಿ ಬಸ್‌ ವ್ಯವಸ್ಥೆ ಮಾಡಿತ್ತು. ಮೆಟ್ರೊ ರೈಲು ಮಾರ್ಗದಲ್ಲಿ ತಾಂತ್ರಿಕ ತೊಂದರೆಯಾದಾಗ ಅದನ್ನು ಸರಿಪಡಿಸಲು ಈ ವಾಹನ ಬಳಸಲಾಗುತ್ತದೆ. ಸೋಮವಾರ ಮಧ್ಯರಾತ್ರಿ ರಾಜಾಜಿನಗರದ ಸಮೀಪ ಸಂಚರಿಸುತ್ತಿದ್ದಾಗ ಈ ವಾಹನ ಹಳಿತಪ್ಪಿ ಸಮಸ್ಯೆ ಉಂಟಾಗಿತ್ತು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್