ಸಾಂದರ್ಭಿಕ ಚಿತ್ರ 
ರಾಜ್ಯ

ಬಿಹಾರ ನಂತರ ರಾಜ್ಯದಲ್ಲೂ 'ಜಾತಿಗಣತಿ' ವರದಿ ಬಹಿರಂಗಕ್ಕೆ ಕೂಗು, ಸಿದ್ದು ಸರ್ಕಾರದ ಮೇಲೆ ಹೆಚ್ಚಿದ ಒತ್ತಡ!

ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆಯಾದ ಬೆನ್ನಲ್ಲೇ ರಾಜ್ಯದಲ್ಲೂ ಜಾತಿಗಣತಿ ವರದಿ ಬಿಡುಗಡೆಗೆ ಒತ್ತಡಗಳು ಹೆಚ್ಚಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆಸಲಾದ ಸಾಮಾಜಿಕ- ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರಿದಿಯನ್ನು ಬಿಡುಗಡೆ ಮಾಡಬೇಕು ಎಂಬ ಕೂಗು ಕೇಳಿಬಂದಿದೆ.

ಬೆಂಗಳೂರು: ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆಯಾದ ಬೆನ್ನಲ್ಲೇ ರಾಜ್ಯದಲ್ಲೂ ಜಾತಿಗಣತಿ ವರದಿ ಬಿಡುಗಡೆಗೆ ಒತ್ತಡಗಳು ಹೆಚ್ಚಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆಸಲಾದ ಸಾಮಾಜಿಕ- ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರಿದಿಯನ್ನು ಬಿಡುಗಡೆ ಮಾಡಬೇಕು ಎಂಬ ಕೂಗು ಕೇಳಿಬಂದಿದೆ.

 2015ರಲ್ಲಿ ಆಗಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ 170 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಚಾಲನೆ ನೀಡಿತ್ತು. ಅದರ ವರದಿ ಇನ್ನೂ ಬಹಿರಂಗವಾಗಿಲ್ಲ.  ಆಗಿನ  ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಹೆಚ್.ಕಾಂತರಾಜ್ ಅವರ ನೇತೃತ್ವದಲ್ಲಿ ಜಾತಿಗಣತಿ ನಡೆಸಲಾಗಿತ್ತು.

ಸಮೀಕ್ಷೆಯಲ್ಲಿ ರಾಜ್ಯದಲ್ಲಿ ಪ್ರಬಲವಾಗಿರುವ ಲಿಂಗಾಯತ ಹಾಗೂ ಒಕ್ಕಲಿಗರ ಸಂಖ್ಯೆ ಅಂದುಕೊಂಡಷ್ಟು ಹೆಚ್ಚಾಗಿರದ ಹಿನ್ನೆಲೆಯಲ್ಲಿ ಈವರೆಗೂ ಆಡಳಿತ ನಡೆಸಿದ ಮುಖ್ಯಮಂತ್ರಿಗಳು ವರದಿ ಬಿಡುಗಡೆಗೆ ಆಸಕ್ತಿ ತೋರುತ್ತಿಲ್ಲ ಎಂದು ಕೆಲವು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ. ಇದರಿಂದ ಜಾತಿ ಗಣತಿ ಒಪ್ಪಿಕೊಳದೆ ಅಥವಾ ಬಹಿರಂಗಪಡಿಸದೆ ರಾಜಕೀಯ ಪಕ್ಷಗಳು ಹಲವು ವರ್ಷಗಳಿಂದ ರಾಜಕೀಯ ಆಟದಲ್ಲಿ ತೊಡಗಿವೆ. 

ಜಾತಿ ಗಣತಿ ವರದಿ ಬಿಡುಗಡೆ ಹಿನ್ನೆಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಅಭಿನಂದಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಬಿ ಕೆ ಹರಿಪ್ರಸಾದ್,  ಕರ್ನಾಟಕದಲ್ಲೂ  ಬಹುದಿನಗಳ ಬೇಡಿಕೆಯಾಗಿರುವ ಜಾತಿಗಣತಿ ಮಾಹಿತಿಯನ್ನು ಆದಷ್ಟು ಬೇಗ ಬಹಿರಂಗಗೊಳಿಸುವಂತೆ ತಮ್ಮ ಪಕ್ಷದ ಸರ್ಕಾರವನ್ನು ಒತ್ತಾಯಿಸಿದರು. 

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಕೆ ಹರಿಪ್ರಸಾದ್, ರಾಜ್ಯ ಮತ್ತು ದೇಶ ಎರಡರಲ್ಲೂ ಜಾತಿ ಗಣತಿ ನಡೆಯಬೇಕು ಮತ್ತು ಅದರ ಆಧಾರದ ಮೇಲೆ ಜನಸಂಖ್ಯಾ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂಬುದು  ರಾಹುಲ್ ಗಾಂಧಿಯವರ ಬಹುದಿನಗಳ ಬಯಕೆಯಾಗಿದೆ. ಅದು ಫಲಪ್ರದವಾಗಬೇಕಾದರೆ ಕಾಂತರಾಜ್ ಆಯೋಗದ ವರದಿಯನ್ನು ಸಾರ್ವಜನಿಕಗೊಳಿಸಬೇಕು, ಒಂದು ವೇಳೆ ಆ ವರದಿಯಲ್ಲಿನ ಲೋಪದೋಷಗಳಿದ್ದರೆ ಅದನ್ನು ಸರಿಪಡಿಸಿ ಅನುಷ್ಠಾನಗೊಳಿಸಬೇಕಿದೆ ಎಂದು ಹೇಳಿದರು. 

ಬೆಂಗಳೂರಿನಲ್ಲಿ ಮಾತನಾಡಿದ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ ಜಯಪ್ರಕಾಶ್ ಹೆಗ್ಡೆ, ಮುಂದಿನ ತಿಂಗಳೊಳಗೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆಯಿರುವುದಾಗಿ ತಿಳಿಸಿದರು.ತಾಂತ್ರಿಕ ಸಮಸ್ಯೆ ಇತ್ತು, ಈ ಹಿಂದೆ ಸಿದ್ದವಾಗಿದ್ದ ವರದಿಗೆ ಸದಸ್ಯ ಕಾರ್ಯದರ್ಶಿಗಳ ಸಹಿ ಇರಲಿಲ್ಲ. ಈಗ ವರದಿ ನಮ್ಮ ಮುಂದಿದ್ದು, ಅಂತಿಮಗೊಳಿಸುತ್ತಿದ್ದೇವೆ, ಬಹುಶಃ ಮುಂದಿನ ತಿಂಗಳು ಸರಕಾರಕ್ಕೆ ಸಲ್ಲಿಸುತ್ತೇವೆ ಎಂದು ಹೇಳಿದರು. 

ಈ ಮಧ್ಯೆ ರಾಜ್ಯ ಖಾಯಂ ಹಿಂದುಳಿದ ವರ್ಗಗಳ ಆಯೋಗವು ವರದಿ ಸಲ್ಲಿಸಿದ ನಂತರ ತಮ್ಮ ಸರ್ಕಾರ ಅದನ್ನು ನಿರ್ಧರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  'ಜಾತಿ ಗಣತಿಗೆ ಆದೇಶ ನೀಡಿದ ಬಳಿಕ ಕಾಂತರಾಜ್ ಅವರ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಆಯೋಗಕ್ಕೆ ವರದಿ ಸಿದ್ಧಪಡಿಸುವ ಜವಾಬ್ದಾರಿ ನೀಡಲಾಗಿತ್ತು.  ನಮ್ಮ ಸರಕಾರದ ಅವಧಿ ಮುಗಿಯುವ ವೇಳೆಗೆ ವರದಿ ಪೂರ್ಣಗೊಂಡಿರಲಿಲ್ಲ. ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರ  ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್ ಡಿ ಕುಮಾರಸ್ವಾಮಿ ವರದಿಯನ್ನು ಸ್ವೀಕರಿಸಲಿಲ್ಲ, ನಂತರ ಕಾಂತರಾಜ್ ಅವರ ಅಧಿಕಾರವೂ ಕೊನೆಗೊಂಡಿತು ಎಂದು ಅವರು ವಿವರಿಸಿದರು.

ಹಾಲಿ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರನ್ನು ಬಿಜೆಪಿ ಸರ್ಕಾರ ನೇಮಿಸಿದ್ದು, ಸದಸ್ಯ ಕಾರ್ಯದರ್ಶಿ ಸಹಿ  ಹಾಕಿದ ನಂತರ ವರದಿ ಸಲ್ಲಿಸುವುದಾಗಿ ಹೇಳಿದ್ದಾರೆ. ಅವರು ವರದಿ ಸಲ್ಲಿಸಿದ ನಂತರ ಜಾತಿಗಣತಿ ವರದಿ ಬಿಡುಗಡೆ ಕುರಿತು ನೋಡೋಣ ಎಂದರು. 

ಮತ್ತೊಂದೆಡೆ ಬಿಹಾರ ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಇದೊಂದು ಉತ್ತಮ ಬೆಳವಣಿಗೆಯಾಗಿದ್ದು, ರಾಜ್ಯದಲ್ಲೂ ಇದೇ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ತಮ್ಮ ಆಶಯವಾಗಿದೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT