ರಾಜ್ಯ

ಸಿಎಂ ಅಧಿಕಾರವಧಿ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತೆ: ಶಿವಲಿಂಗೇಗೌಡರಿಗೆ ಸಂಪುಟದಲ್ಲಿ ಸ್ಥಾನ ಫಿಕ್ಸ್: ಜಮೀರ್

Shilpa D

ಹಾಸನ: ಮುಖ್ಯಮಂತ್ರಿ ಅಧಿಕಾರವಧಿ ಬಗ್ಗೆ ಕಾಂಗ್ರೆಸ ಹೈಕಮಾಂಡ್ ಅಣತಿಯಂತೆ ನಡೆಯುವ ಪಕ್ಷ, ಎಲ್ಲ ತೀರ್ಮಾನಗಳನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಮತ್ತು ಪಕ್ಷದ ಸದಸ್ಯರೆಲ್ಲ ಅದಕ್ಕೆ ಬದ್ಧರಾಗಿರುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಹಾಸನದ ಮೌಲಾನಾ ಆಜಾದ್ ಮಾದರಿ ವಸತಿ ಶಾಲೆಯನ್ನು ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್, ಮುಂದಿನ 15 ವರ್ಷಗಳ ಕಾಲ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರುತ್ತದೆ ಎಂದು ಭವಿಷ್ಯ ನುಡಿದರು. ಇನ್ನು ಎರಡೂವರೆ ವರ್ಷದಲ್ಲಿ ಹಾಸನ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದರು.

ವಸತಿ ಯೋಜನೆಗಳನ್ನು ಕಾಲಮಿತಿಯಲ್ಲಿ ಜಾರಿಗೊಳಿಸಲು ಕೇಂದ್ರವು ರಾಜ್ಯದೊಂದಿಗೆ ಸಹಕರಿಸುತ್ತಿಲ್ಲ ಎಂದು ಜಮೀರ್ ಆರೋಪಿಸಿದರು. ಜೆಡಿಎಸ್-ಬಿಜೆಪಿ ಮೈತ್ರಿಯನ್ನು ಲೇವಡಿ ಮಾಡಿದ ಜಮೀರ್, ಎಚ್‌ಡಿ ದೇವೇಗೌಡರ ಆಶಯಕ್ಕೆ ವಿರುದ್ಧವಾಗಿ ಜೆಡಿಎಸ್ ಈಗ ಅಧಿಕೃತವಾಗಿ ಬಿಜೆಪಿ ಪಕ್ಷದೊಂದಿಗೆ ಕೈಜೋಡಿಸಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಏಕೈಕ ಜಾತ್ಯತೀತ ಪಕ್ಷವಾಗಿದೆ ಎಂದು ಹೇಳಿದರು. ಎಚ್‌ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯದಲ್ಲಿ ಅಲ್ಪಸಂಖ್ಯಾತರ ಬೆಳವಣಿಗೆಗೆ ಕೊಡುಗೆ ಏನು ಎಂದು ಪ್ರಶ್ನಿಸಿದರು.

SCROLL FOR NEXT