ಸಾಂದರ್ಭಿಕ ಚಿತ್ರ 
ರಾಜ್ಯ

ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಅಡುಗೆಯವನ ಬಂಧನ

ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮತ್ತು ಅದನ್ನು ವಿಡಿಯೋ ಮಾಡುತ್ತಿದ್ದ ಆರೋಪದ ಮೇಲೆ ಒಡಿಶಾದ 47 ವರ್ಷದ ಅಡುಗೆ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಹುಬ್ಬಳ್ಳಿ: ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮತ್ತು ಅದನ್ನು ವಿಡಿಯೋ ಮಾಡುತ್ತಿದ್ದ ಆರೋಪದ ಮೇಲೆ ಒಡಿಶಾದ 47 ವರ್ಷದ ಅಡುಗೆ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಆರೋಪಿ ಪ್ರಭಂಜನ ಪಾಲನಿಂದ ಲೈಂಗಿಕ ದೌರ್ಜನ್ಯ ಮತ್ತು ಬೆದರಿಕೆಗೆ ಒಳಗಾದ ಇಬ್ಬರು ಅಪ್ರಾಪ್ತರ ಪೋಷಕರು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪೊಲೀಸರ ಪ್ರಕಾರ, ನಗರದ ಪ್ರಮುಖ ಹೋಟೆಲ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಮೊದಲು ಅಪ್ರಾಪ್ತ ಬಾಲಕರೊಂದಿಗೆ ಸ್ನೇಹ ಬೆಳೆಸುತ್ತಿದ್ದ ಮತ್ತು ತಿಂಡಿ, ಚಾಕೊಲೇಟ್ ಮತ್ತು ಹಣದ ಆಮಿಷ ಒಡ್ಡಿ ಇಲ್ಲಿನ ಸಿದ್ದಲಿಂಗೇಶ್ವರ ಕಾಲೋನಿಯಲ್ಲಿರುವ ತನ್ನ ಬಾಡಿಗೆ ನಿವಾಸಕ್ಕೆ ಕರೆದೊಯ್ಯುತ್ತಿದ್ದ.

ಬಳಿಕ ಅವರನ್ನು ತನ್ನ ಕೋಣೆಗೆ ಕರೆದೊಯ್ದು ಚಾಕುವಿನಿಂದ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅಸ್ವಾಭಾವಿಕ ಲೈಂಗಿಕ ಕ್ರಿಯೆಗಳಿಗೆ ಒತ್ತಾಯಿಸುತ್ತಿದ್ದ ಆರೋಪಿ, ಮತ್ತೊಬ್ಬ ಹುಡುಗನ ಸಹಾಯದಿಂದಲೇ ಅದನ್ನು ತನ್ನ ಮೊಬೈಲ್ ಫೋನಿನಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯನ್ನು ಬೇರೆಯವರಿಗೆ ತಿಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರೋಪಿ ಬಾಲಕರಿಗೆ ಬೆದರಿಕೆ ಹಾಕಿದ್ದಾನೆ. ಬಾಲಕರ ಮೇಲೆ ಅನೇಕ ಸಂದರ್ಭಗಳಲ್ಲಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಅವರು ಹೇಳಿದರು.

ಈ ವಿಚಾರ ಸಾರ್ವಜನಿಕರ ಗಮನಕ್ಕೆ ಬರುತ್ತಲೇ, ಸ್ಥಳೀಯರು ಆರೋಪಿಯನ್ನು ಹಿಡಿದು ಥಳಿಸಿದ್ದಾರೆ. ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.

ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 (ನೈಸರ್ಗಿಕವಲ್ಲದ ಅಪರಾಧಗಳು), 506 (2) (ಕ್ರಿಮಿನಲ್ ಬೆದರಿಕೆ), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಮತ್ತು ಐಟಿ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT