ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರು: 15ಕ್ಕೂ ಹೆಚ್ಚು ಕಡೆಗಳಲ್ಲಿ ಉದ್ಯಮಿಗಳ ನಿವಾಸ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ರಾಜಧಾನಿ ಬೆಂಗಳೂರಿನ 15ಕ್ಕೂ ಹೆಚ್ಚು ಕಡೆ ಬುಧವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಭ್ರಷ್ಟರಿಗೆ ಶಾಕ್ ನೀಡಿದ್ದಾರೆ.

ಐಟಿ ದಾಳಿ
Sumana Upadhyaya
Updated On : 4 Oct 2023, 2:28 pm

ಬೆಂಗಳೂರು: ರಾಜಧಾನಿ ಬೆಂಗಳೂರಿನ 15ಕ್ಕೂ ಹೆಚ್ಚು ಕಡೆ ಬುಧವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಭ್ರಷ್ಟರಿಗೆ ಶಾಕ್ ನೀಡಿದ್ದಾರೆ.

ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಉದ್ಯಮಿಗಳ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತಡೊಗಿದ್ದಾರೆ. ವಿಜಯನಗರ, ಬಿಟಿಎಂ ಲೇಔಟ್ , ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

15ಕ್ಕೂ ಹೆಚ್ಚು ಕಡೆ ದಾಳಿ: ಬೆಂಗಳೂರಿನ ವಿಜಯನಗರದಲ್ಲಿ ವೈದ್ಯೆ ನಿವಾಸದ ಮೇಲೆ ಐಟಿ ದಾಳಿಯಾಗಿದೆ. ಶಾಂತಿನಗರದ ವೈದ್ಯೆ ಮನೆಯಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Advertisement

ಇದನ್ನೂ ಓದಿ: ತೆರಿಗೆ ವಂಚನೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರಿನ ಮೇಖ್ರಿ ವೃತ್ತ ಬಳಿಯ ಗಜರಾಜ ಜ್ಯುವೆಲರಿ ಶಾಪ್​ ಮೇಲೂ ಐಟಿ ಅಧಿಕಾರಿಗಳ ದಾಳಿ ನಡೆದಿದೆ. ಅಂಗಡಿ ಬಾಗಿಲು ಮುಚ್ಚಿ ಒಳಗಡೆ ಪರಿಶೀಲನೆ ನಡೆಸಲಾಗುತ್ತಿದೆ. ಎರಡು ಇನ್ನೋವಾ ಕಾರಿನಲ್ಲಿ ಬಂದಿರುವ ಐಟಿ ಅಧಿಕಾರಿಗಳ ಟೀಂ ತಲಾಶ್ ನಡೆಸುತ್ತಿದೆ.

ಕಳೆದ ತಿಂಗಳು ಸೆಪ್ಟೆಂಬರ್ 27ರಂದು ಬೆಂಗಳೂರಿನ ಹಲವು ಕಂಪೆನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಆದಾಯ ತೆರಿಗೆ ತಪ್ಪು ಮಾಹಿತಿ, ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ದಾಳಿ ನಡೆದಿತ್ತು. ಅದಾಗಿ ಭರ್ತಿ ವಾರದ ನಂತರ ಮತ್ತೊಮ್ಮೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments