ಡಿ.ಕೆ ಶಿವಕುಮಾರ್ 
ರಾಜ್ಯ

ಟೆಂಡರ್ ಶ್ಯೂರ್ ರಸ್ತೆ ಅಗೆಯಬೇಡಿ; ನಗರದ ಸೌಂದರ್ಯ ಹೆಚ್ಚಿಸಲು ನೆಲದಡಿಯಲ್ಲಿ ಕೇಬಲ್ ಹಾಕಿ: ಡಿಸಿಎಂ ಸೂಚನೆ

ಟೆಂಡರ್ ಶ್ಯೂರ್ ರಸ್ತೆಗಳಿಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದ್ದು, ಕೇಬಲ್ ಹಾಕುವ ಸಲುವಾಗಿ ರಸ್ತೆಗಳನ್ನು ಅಗೆಯದಂತೆ ನೋಡಿಕೊಳ್ಳಿ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರು: ಟೆಂಡರ್ ಶ್ಯೂರ್ ರಸ್ತೆಗಳಿಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದ್ದು, ಕೇಬಲ್ ಹಾಕುವ ಸಲುವಾಗಿ ರಸ್ತೆಗಳನ್ನು ಅಗೆಯದಂತೆ ನೋಡಿಕೊಳ್ಳಿ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಸಂತನಗರದ ಅಯ್ಯಪ್ಪ ಸ್ವಾಮಿ ದೇಗುಲದ ಪಕ್ಕದ ಒಳಚರಂಡಿ ಕಾಮಗಾರಿ, ಜಯಮಹಲ್ ಅರಮನೆ ರಸ್ತೆ ಅಗಲೀಕರಣ, ಭೂಗತ ಕೇಬಲ್ ಅಳವಡಿಕೆ ಕಾಮಗಾರಿ ಪರಿಶೀಲಿಸಿದ ಬಳಿಕ ಮಾತನಾಡಿದ ಡಿಸಿಎಂ, ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಟೆಂಡರ್ ಶ್ಯೂರ್ ಕಾಮಗಾರಿ ನಡೆದಿದೆ. ಇನ್ನು ಮುಂದೆ ಯಾರೂ ಟೆಂಡರ್ ಶ್ಯೂರ್ ರಸ್ತೆಗಳನ್ನು ಅಗೆಯಬಾರದು. ಪಕ್ಕದ ಚರಂಡಿಯಿಂದ ಕೇಬಲ್ ಹಾಕಲು ವ್ಯವಸ್ಥೆ ಮಾಡಿದ್ದೇವೆ ಆದರೆ ಯಾರೂ ಬಳಸುತ್ತಿಲ್ಲ. ನಾವು ಈ ವ್ಯವಸ್ಥೆಯನ್ನು ಎಲ್ಲಿ ಸ್ಥಾಪಿಸಿದ್ದೇವೆಯೋ ಅಲ್ಲೆಲ್ಲಾ, ಅದನ್ನು ಕಾನೂನುಬದ್ಧವಾಗಿ ಬಳಸಬೇಕು. ಬೆಂಗಳೂರಿನ ಸೌಂದರ್ಯ ಹೆಚ್ಚಿಸಲು ನೆಲದಡಿಯಲ್ಲಿ ಕೇಬಲ್ ಹಾಕಬೇಕು ಎಂದು ಸಲಹೆ ನೀಡಿದ್ದಾರೆ.

ಇದೇ ವೇಳೆ ಹೊರ ವರ್ತುಲ ರಸ್ತೆಯನ್ನು ಪರಿಶೀಲಿಸಿ ಸಂಚಾರ ಸಮಸ್ಯೆ ಬಗೆಹರಿಸುವ ಕುರಿತು ಚರ್ಚೆ ನಡೆಸಲಾಗುವುದು ಎಂದು ಶಿವಕುಮಾರ್ ತಿಳಿಸಿದರು. ಸೆ.27ರಂದು ಒಆರ್‌ಆರ್‌ನಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಸಂಚಾರ ದಟ್ಟಣೆ ಉಂಟಾಗಿರುವುದ್ದನ್ನು ಇಲ್ಲಿ ಸ್ಮರಿಸಬಹುದು.

ಬಾಕಿ ಉಳಿದಿರುವ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಮತ್ತೆ ನೀರು ಪೋಲಾಗುವ ಘಟನೆಗಳು ಮರುಕಳಿಸಬಾರದು ಎಂದರು. ರಸ್ತೆ  ಗುಂಡಿಗಳ ಬಗ್ಗೆ ಸಾರ್ವಜನಿಕರು ಅಧಿಕಾರಿಗಳಿಗೆ ದೂರು ನೀಡಬಹುದು. ಗುಂಡಿಗಳನ್ನು ಸರಿಪಡಿಸಲು ಬಿಬಿಎಂಪಿ ಹಾಗೂ ಪೊಲೀಸರು ಒಟ್ಟಾಗಿ ಶ್ರಮಿಸಲಿದ್ದಾರೆ. ಈ ಕೆಲಸವನ್ನು ಆದ್ಯತೆಯ ಮೇಲೆ ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಬಿಬಿಎಂಪಿ ಗುತ್ತಿಗೆದಾರರ ಬಾಕಿ ಬಿಲ್‌ಗಳ ಕುರಿತು ಮಾತನಾಡಿದ ಅವರು, ನಗರೋತ್ಥಾನ ಅನುದಾನದಲ್ಲಿ 5,000 ಕೋಟಿ ವೆಚ್ಚದ 352 ಪ್ಯಾಕೇಜ್ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಕಾಮಗಾರಿಗಳ ತನಿಖೆಯೂ ಮುಂದುವರಿದು ವರದಿ ಸಲ್ಲಿಸಲಾಗುವುದು. ಬಿಲ್ ಪಾವತಿಗೆ ಸರಕಾರ 675 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಶೇ. 50-75 ರಷ್ಟು ಬಿಲ್‌ಗಳು ಕ್ಲಿಯರ್ ಆಗಿದ್ದು, 432 ಕೋಟಿ ರೂ. ಬಿಬಿಎಂಪಿ ಅನುದಾನವೂ ಬಿಡುಗಡೆಯಾಗಲಿದೆ. ಉಳಿದ ಬಾಕಿಯನ್ನು ಪಾವತಿಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT