ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಮಂಜುನಾಥ್ ಗೌಡ ಮನೆ, ಕಚೇರಿ ಮೇಲೆ ಇ.ಡಿ ದಾಳಿ 
ರಾಜ್ಯ

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಮಂಜುನಾಥ್ ಗೌಡ ಮನೆ, ಕಚೇರಿ ಮೇಲೆ ಇ.ಡಿ ದಾಳಿ

ಬ್ಯಾಂಕ್‌ನಲ್ಲಿ ನಡೆದ ನಕಲಿ ಚಿನ್ನಾಭರಣ ಅಡವಿಟ್ಟುಕೊಂಡು ಸಾಲ ನೀಡಿದ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ಕಾಂಗ್ರೆಸ್ ಮುಖಂಡ ಮತ್ತು ಶಿವಮೊಗ್ಗ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್‌ನ ಅಧ್ಯಕ್ಷ ಆರ್‌ಎಂ ಮಂಜುನಾಥ್ ಗೌಡ ಅವರ ಮನೆ, ಕಚೇರಿ ಮೇಲೆ ದಾಳಿ ನಡೆಸಿತು.

ಶಿವಮೊಗ್ಗ: ಬ್ಯಾಂಕ್‌ನಲ್ಲಿ ನಡೆದ ನಕಲಿ ಚಿನ್ನಾಭರಣ ಅಡವಿಟ್ಟುಕೊಂಡು ಸಾಲ ನೀಡಿದ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಕಾಂಗ್ರೆಸ್ ಮುಖಂಡ ಮತ್ತು ಶಿವಮೊಗ್ಗ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್‌ನ ಅಧ್ಯಕ್ಷ ಆರ್‌ಎಂ ಮಂಜುನಾಥ್ ಗೌಡ ಅವರ ಮನೆ, ಕಚೇರಿ ಮೇಲೆ ಗುರುವಾರ ದಾಳಿ ನಡೆಸಿತು.

ಶಿವಮೊಗ್ಗದ ಶರಾವತಿ ನಗರದಲ್ಲಿನ ನಿವಾಸ ಮತ್ತು ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕರಕುಚ್ಚಿ ಬಳಿಯ ಅವರ ತೋಟದ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಗಳು ಇನ್ನೂ ಶೋಧ ನಡೆಸುತ್ತಿದ್ದಾರೆ.

ನಕಲಿ ಚಿನ್ನದ ಆಭರಣ ಅಡವಿಟ್ಟುಕೊಂಡ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಇತ್ತೀಚೆಗಷ್ಟೇ ಶಿವಮೊಗ್ಗ ಡಿಸಿಸಿ ಬ್ಯಾಂಕಿನಿಂದ ಕೆಲವು ದಾಖಲೆಗಳನ್ನು ಕೇಳಿತ್ತು. 

ಕಳೆದ ಎರಡೂವರೆ ವರ್ಷದಿಂದ ಬ್ಯಾಂಕ್ ಚಟುವಟಿಕೆಗಳಿಂದ ದೂರವಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸಹಕಾರಿ ವಿಭಾಗದ ರಾಜ್ಯ ಸಂಯೋಜಕರೂ ಆಗಿರುವ ಮಂಜುನಾಥ ಗೌಡ ಅವರು ಸೆಪ್ಟೆಂಬರ್ 28ರಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.  1997ರಿಂದಲೂ ಅವರು ಈ ಹುದ್ದೆಯಲ್ಲಿದ್ದಾರೆ.

ಮಂಜುನಾಥ್ ಗೌಡ ಅವರು ನಕಲಿ ಚಿನ್ನವನ್ನು ಅಡವಿಟ್ಟುಕೊಂಡು ಸಾಲ ನೀಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ. ಈ ಅಕ್ರಮಗಳಿಂದ ಬ್ಯಾಂಕ್‌ಗೆ 62 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ತನಿಖೆಯಲ್ಲಿ ಹೇಳಲಾಗಿದೆ. 

ಶಿವಮೊಗ್ಗ ಪೊಲೀಸರು 2014ರ ಆಗಸ್ಟ್‌ನಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ ಮಂಜುನಾಥ ಗೌಡ ಸೇರಿದಂತೆ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ (ಎಸ್‌ಡಿಸಿಸಿಬಿ) 18 ಸಿಬ್ಬಂದಿಯನ್ನು ಬಂಧಿಸಿದ್ದರು.

ಮಂಜುನಾಥ ಗೌಡ ಮತ್ತು ಬ್ಯಾಂಕ್ ಉದ್ಯೋಗಿಗಳ ವಿರುದ್ಧ ನಕಲಿ ಚಿನ್ನವನ್ನು ಅಡವಿಟ್ಟುಕೊಂಡು ಸಾಲ ನೀಡಿದ ಆರೋಪ ಹೊರಿಸಲಾಗಿತ್ತು ಮತ್ತು ಇನ್ನೂ ಕೆಲವು ಪ್ರಕರಣಗಳಲ್ಲಿ ಸಾಲ ಪಡೆಯಲು ಚಿನ್ನವನ್ನು ಅಡವಿಟ್ಟಿರಲಿಲ್ಲ.

ಮಂಜುನಾಥ ಗೌಡ ಅವರು ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತ ಬಳಗದಲ್ಲಿ ಪ್ರಮುಖರು ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT