ಸಾಲುಮರದ ತಿಮ್ಮಕ್ಕ 
ರಾಜ್ಯ

ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ: ಸಾವಿನ ವದಂತಿಗಳಿಗೆ ತೆರೆ ಎಳೆದ ದತ್ತುಪುತ್ರ ಉಮೇಶ್‌ ವನಸಿರಿ

ಕರ್ನಾಟಕ ಸರ್ಕಾರದ ಪರಿಸರ ರಾಯಭಾರಿಯಾಗಿರುವ ವೃಕ್ಷ ಮಾತೆ, ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬೆಂಗಳೂರು: ಕರ್ನಾಟಕ ಸರ್ಕಾರದ ಪರಿಸರ ರಾಯಭಾರಿಯಾಗಿರುವ ವೃಕ್ಷ ಮಾತೆ, ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಸಂಬಂಧ ಅವರ ದತ್ತು ಪುತ್ರ ಉಮೇಶ್ ವಿಡಿಯೊ ಹಂಚಿಕೊಂಡಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಮೂರು ತಿಂಗಳ ಹಿಂದೆ ಅವರು ಬೆಂಗಳೂರಿನ ತಮ್ಮ ಮನೆಯಲ್ಲಿ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದಿದ್ದರು. ನಂತರ ಬೇಲೂರು ಸಮೀಪದ ಬಳ್ಳೂರಿನಲ್ಲಿರುವ ಉಮೇಶ್ ಅವರ ಮನೆಗೆ ತೆರಳಿದ್ದರು.

ಸೆಪ್ಟೆಂಬರ್‌ 26ರಂದು ಅವರ ಉಸಿರಾಟದಲ್ಲಿ ಏರುಪೇರಾಗಿದ್ದರಿಂದ ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಸೋಮವಾರ ರಾತ್ರಿಯಿಂದ ಉಸಿರಾಟದಲ್ಲಿ ತೀವ್ರ ಏರು ಪೇರಾಗಿದ್ದರಿಂದ ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ಮಂಗಳವಾರ ದಾಖಲಿಸಲಾಗಿತ್ತು. ಚಿಕಿತ್ಸೆ ಮುಂದುವರಿದಿದೆ.

ಅವರ ಆರೋಗ್ಯ  ಸ್ಥಿತಿ ಸ್ಥಿರವಾಗಿದೆ. ಆಕೆಗೆ ಆಸ್ತಮಾದ ಇತಿಹಾಸವಿದೆ, ಆದರೆ ಚಿಂತಿಸುವ ಅಗತ್ಯವಿಲ್ಲ. ನಾವು ಇನ್ನೂ 2-3 ದಿನಗಳವರೆಗೆ ಅವರ ಆರೋಗ್ಯದ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ಅಪೊಲೊದಲ್ಲಿ ಅವರಿಗೆ ಚಿಕಿತ್ಸೆ ನೀಡುತ್ತಿರುವ  ವೈದ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾಪ ಅತ್ಯಂತ ಅಪಾಯಕಾರಿ ಹಾಗೂ ಸಂವಿಧಾನದ ಮೇಲಿನ ದಾಳಿ: ಸೋನಿಯಾ ಗಾಂಧಿ

ರಾಜ್ಯದಲ್ಲಿ ರಣ ಬಿಸಿಲು: 35 ಡಿಗ್ರಿ ತಲುಪಿದ ತಾಪಮಾನ, ಮಳೆ ಮುನ್ಸೂಚನೆ ಇಲ್ಲ ಎಂದ IMD

ಆಗ VOLVO, ಈಗ BMW; ಹಾರುಬೂದಿ ಸಾಗಿಸುತ್ತಿದ್ದ ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ, Video

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

SCROLL FOR NEXT