ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲಿ ಬಸ್ ತಂಗುದಾಣ ನಾಪತ್ತೆಯಾಗಿರುವುದು. 
ರಾಜ್ಯ

ಬೆಂಗಳೂರು: ವಿಧಾನಸೌಧದಿಂದ 1 ಕಿಲೋಮೀಟರ್‌ ಅಂತರದಲ್ಲಿ ಬಸ್‌ ನಿಲ್ದಾಣವನ್ನೇ ಹೊತ್ತೊಯ್ದ ಖದೀಮರು!

ಬೆಂಗಳೂರಿನಲ್ಲಿ ಖದೀಮರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಬೆಲೆಬಾಳುವ ವಸ್ತುಗಳಿಗೆ ಕೈ ಹಾಕುತ್ತಿದ್ದ ಕಳ್ಳರು ಇದೀಗ ಬಸ್ ಶೆಲ್ಟರ್ (ಬಸ್ ತಂಗುದಾಣ) ಅನ್ನೇ ಕದ್ದು ಪರಾರಿಯಾಗಿರುವ ಘಟನೆ ವರದಿಯಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಖದೀಮರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಬೆಲೆಬಾಳುವ ವಸ್ತುಗಳಿಗೆ ಕೈ ಹಾಕುತ್ತಿದ್ದ ಕಳ್ಳರು ಇದೀಗ ಬಸ್ ಶೆಲ್ಟರ್ (ಬಸ್ ತಂಗುದಾಣ) ಅನ್ನೇ ಕದ್ದು ಪರಾರಿಯಾಗಿರುವ ಘಟನೆ ವರದಿಯಾಗಿದೆ.

ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಸ್ಟೇನ್‌ಲೆಸ್ ಸ್ಟೀಲ್ ರಚನೆಯಿಂದ ಭದ್ರವಾಗಿದ್ದ ಹೊಚ್ಚಹೊಸ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ಶೆಲ್ಟರ್ ಅನ್ನು ಕದೀಮರು ಕಳ್ಳತನ ಮಾಡಿದ್ದಾರೆ.

ಈ ಸಂಬಂಧ ತಂಗುದಾಣ ನಿರ್ಮಾಣ ಮಾಡಿದ್ದ ಖಾಸಗಿ ಸಂಸ್ಥೆಯ ಉಪಾಧ್ಯಕ್ಷ ಎನ್ ರವಿ ರೆಡ್ಡಿ ಎಂಬುವರು ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಿಬಿಎಂಪಿ ಅನುಮತಿ ಪಡೆದು ತಮ್ಮ ಕಂಪನಿಯ ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿರುವ ಕಾಫಿ ಡೇ ಮುಂಭಾಗ 10 ಲಕ್ಷ ರೂ. ವೆಚ್ಚದಲ್ಲಿ ಆಗಸ್ಟ್​ 21 ರಂದು ಸ್ಟೇನ್ ಲೇಸ್ ಸ್ಟೀಲ್ ಬಳಸಿ ಬಸ್ ತಂಗುದಾಣ ನಿರ್ಮಾಣ ಮಾಡಲಾಗಿತ್ತು. ಆ. 28ರಂದು ಎಲ್ಲ ಬಸ್ ನಿಲ್ದಾಣಗಳನ್ನು ಪರೀಕ್ಷಣೆ ಮಾಡುವಂತೆ ಇಲ್ಲಿಗೂ ಬಂದು ನೋಡಿದಾಗ ಬಸ್ ನಿಲ್ದಾಣವೇ ನಾಪತ್ತೆಯಾಗಿರುವುದು ಕಂಡು ಬಂದಿದೆ. ಬಿಬಿಎಂಪಿ ಅಧಿಕಾರಿಗಳಿಗೆ ಕರೆ ಮಾಡಿ ವಿಚಾರಿಸಿದಾಗ ತಾವು ಬಸ್ ನಿಲ್ದಾಣ ತೆರವುಗೊಳಿಸಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಇದರಿಂದ ಅಚ್ಚರಿಕೊಂಡ ರವಿ ರೆಡ್ಡಿ ಅವರು, ಸೆ. 30ರಂದು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ. ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಂಗ್ರಹಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು, ಬಿಎಂಟಿಸಿ ಯಾವುದೇ ಬಸ್ ನಿಲ್ದಾಣಗಳನ್ನೂ ನಿರ್ಮಿಸುತ್ತಿಲ್ಲ. ಬಿಬಿಎಂಪಿ ನಿರ್ಮಿಸುತ್ತಿದೆ. ಯಾರೋ ಬಸ್ ನಿಲ್ದಾಣವನ್ನು ಹೊತ್ತೊಯ್ದಿದ್ದಾರೆ. ಈ ಬಗ್ಗೆ ಪೊಲೀಸ್ ಆಯುಕ್ತರೊಂದಿಗೆ ಮಾತನಾಡುತ್ತೇನೆ. ಹೊಸ ಬಸ್ ನಿಲ್ದಾಣವನ್ನು ಸ್ಥಾಪಿಸಲಾಗಿತ್ತೇ ಎಂಬುದರ ಕುರಿತು ಮಾಹಿತಿ ಪಡೆಯಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ