ರಾಜ್ಯ

ಕಾವೇರಿ ವಿವಾದ: ಕೆಆರ್'ಎಸ್ ಗೆ ಮುತ್ತಿಗೆ ಹಾಕಲು ಕನ್ನಡಪರ ಹೋರಾಟಗಾರರ ಯತ್ನ

Manjula VN

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೆಂಗಳೂರಿನ ಸಾವಿರಾರು ಕನ್ನಡಪರ ಕಾರ್ಯಕರ್ತರು ಗುರುವಾರ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಜಲಾಶಯದ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಕಾರ್ಯಕರ್ತರು ಜಲಾಶಯದ ಪ್ರದೇಶಕ್ಕೆ ಆಗಮಿಸುತ್ತಿದ್ದಂತೆಯೇ ಪೊಲೀಸರು ಅವರನ್ನು ತಡೆದರು.

ಈ ವೇಳೆ ಕರ್ನಾಟಕವು ಬರಗಾಲದಂತಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಈ ಸಂದರ್ಭದಲ್ಲಿ ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರು ಬಿಡುಗಡೆ ಮಾಡುವ ಒತ್ತಡಕ್ಕೆ ಮಣಿಯುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಅವರು, ನಮ್ಮ ಜಲಾಶಯಗಳಲ್ಲಿ ಸಮರ್ಪಕ ನೀರಿಲ್ಲದಿರುವಾಗ ತಮಿಳುನಾಡಿಗೆ ಕಾವೇರಿ ನೀರು ಬಿಡುವುದು ಹೇಗೆ? ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಬೆಂಗಳೂರಿನಿಂದ ಬಿಡದಿ, ರಾಮನಗರ ಚನ್ನಪಟ್ಟಣ, ಮದ್ದೂರು, ಮಂಡ್ಯ ಮೂಲಕ ಕೆಆರ್‌ಎಸ್ ಜಲಾಶಯದವರೆಗೆ ವಾಹನ ರ್ಯಾಲಿ ನಡೆಸುತ್ತಿದ್ದೇವೆ ಎಂದು ಹೇಳಿದ್ದರು.

SCROLL FOR NEXT