ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆರೆಯಲು ಅವಕಾಶ ಇಲ್ಲ: ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಚಿತ್ರದುರ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಸಾವಿರ ಮದ್ಯದಂಗಡಿಗಳನ್ನು ತೆರೆಯಲು ಚಿಂತನೆ ನಡೆಸುತ್ತಿರುವುದಾಗಿ ಅಬಕಾರಿ ಸಚಿವರು ಹೇಳಿರುವುದು ಸತ್ಯಕ್ಕೆ ದೂರವಾದ ಮಾತು, ಯಾವುದೇ ಹೊಸ ಮದ್ಯದಂಗಡಿ ತೆರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮದ್ಯದಂಗಡಿ ಹೊಸ ಪರವಾನಗಿ ನೀಡುವುದಕ್ಕೆ ಮಹಿಳೆಯರ ವಿರೋಧ ಇದೆ. ಹಣಕಾಸಿನ ಕೊರತೆ ಇದ್ದರೂ ಮದ್ಯದಂಗಡಿ ಹೊಸ ಲೈಸೆನ್ಸ್ ನೀಡಲು ನಾನು ಅನುಮತಿ ನೀಡುವುದಿಲ್ಲ ಎಂದು ವಾಗ್ದಾನ ಮಾಡಿದರು. ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯುವ ಪ್ರಸ್ತಾಪ ಸರ್ಕಾರದ ಮುಂದಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.