ಸಂಗ್ರಹ ಚಿತ್ರ 
ರಾಜ್ಯ

ಪತ್ನಿ ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ: ಆರೋಪಿ ಬಂಧನ

ಪತ್ನಿಯ ಹತ್ಯೆಗೈದ ಪತಿಯೊಬ್ಬ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ಘಟನೆಯೊಂದು ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಪತ್ನಿಯ ಹತ್ಯೆಗೈದ ಪತಿಯೊಬ್ಬ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ಘಟನೆಯೊಂದು ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ರೇಖಾ (23) ಎಂದು ಗುರ್ತಿಸಲಾಗಿದೆ. ಆರೋಪಿಯನ್ನು ಸಂತೋಷ್ ಎಂದು ಗುರ್ತಿಸಲಾಗಿದೆ. ನಗರದಲ್ಲಿ ಆಸ್ತಿ ಖರೀದಿಗೆ ತನಗೆ ಹಾಗೂ ತನ್ನು ಕುಟುಂಬಸ್ಥರಿಗೆ ಹಣ ನೀಡದ ಕಾರಣಕ್ಕೆ ರೇಖಾ ಅವರನ್ನು ಹತ್ಯೆ ಮಾಡಿದ್ದಾನೆಂದು ತಿಳಿದುಬಂದಿದೆ.

ಹಣದ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಇದರಿಂದ ಕೆಂಡಾಮಂಡಲಗೊಂಡ ಆರೋಪಿ ಸಂತೋಷ್ ಪತ್ನಿಗೆ ಕಬ್ಬಿಣದ ರಾಡ್ ನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ನಂತರ ಸೀಲಿಂಗ್ ಫ್ಯಾನ್'ಗೆ ಸೀರೆ ಕಟ್ಟಿ, ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ಬಿಂಬಿಸಿದ್ದಾನೆ. ನಾನು ಸ್ನಾನಕ್ಕೆ ತೆರಳಿದ್ದ ಸಂದರ್ಭದಲ್ಲಿ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಳು ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಪ್ರೌಢಶಾಲೆಯಿಂದಲೂ ರೇಖಾ ಹಾಗೂ ಸಂಜಯ್ ಪರಿಚಿತರಾಗಿದ್ದು, ಎರಡು ವರ್ಷಗಳ ಹಿಂದಷ್ಟೇ ವಿವಾಹವಾಗಿದ್ದರು. ದಂಪತಿಗಳಿಗೆ 7 ತಿಂಗಳ ಮಗುವಿದೆ.

ಅನುಮಾನಗೊಂಡ ಪೊಲೀಸರು ಸಂಜಯ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 304 ಬಿ (ವರದಕ್ಷಿಣೆ ಕಿರುಕುಳ), 302 (ಕೊಲೆ), ಮತ್ತು 34 ಅಡಿಯಲ್ಲಿ ಯಲಹಂಕ ನ್ಯೂ ಟೌನ್ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ