ಡಿಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ಬಿಜೆಪಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಜೋಡಿಸುತ್ತಿದೆ: ಡಿಸಿಎಂ ಡಿಕೆ ಶಿವಕುಮಾರ್

ಬಿಜೆಪಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅದನ್ನು ಜೋಡಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. 

ಬೆಂಗಳೂರು: ಬಿಜೆಪಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅದನ್ನು ಜೋಡಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. 

ಶಿವಮೊಗ್ಗದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿ ಭಯದ ವಾತಾವರಣ ಉಂಟು ಮಾಡಲಾಗಿದೆ ಎನ್ನುವ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ, ಕಬ್ಬಿಣದಿಂದ ಸೂಜಿ ಮತ್ತು ಕತ್ತರಿ ತಯಾರಿಸಬಹುದು. ಕಾಂಗ್ರೆಸ್ ಸೂಜಿಯಿಂದ ಹೊಲಿಯುವ ಕೆಲಸ ಮಾಡುತ್ತಿದ್ದರೆ, ಬಿಜೆಪಿಯವರು ಕತ್ತರಿಯಿಂದ ಕತ್ತರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು. 

 “ಎಸ್.ಎಂ. ಕೃಷ್ಣ ಅವರ ಕಾಲದಲ್ಲಿ ಕುವೆಂಪು ಅವರ ಜಯ ಭಾರತ ಜನನಿಯ ತನುಜಾತೆ ಹಾಡನ್ನು ನಾಡಗೀತೆಯಾಗಿ ಘೋಷಣೆ ಮಾಡಿದೆವು. ಈ ಹಾಡೇ ಕಾಂಗ್ರೆಸ್ ಪಕ್ಷ ಕರ್ನಾಟಕಕ್ಕೆ ನೀಡಿರುವ ಸಂದೇಶ." "ಕುವೆಂಪು ಅವರ ಸರ್ವಜನಾಂಗದ ಶಾಂತಿಯ ತೋಟ ನಿರ್ಮಾಣ ಮಾಡುವುದೇ ನಮ್ಮ ಗುರಿ ಹಾಗೂ ಉದ್ದೇಶ. ಬಿಜೆಪಿಯವರು ಸತ್ಯಶೋಧನ ಸಮಿತಿಯ ಮೂಲಕ ಅವರಿಗೆ ಏನು ಬೇಕೋ ಅದನ್ನು ಹೇಳುತ್ತಿದ್ದಾರೆ. ನಾವು ಸಮಾಜ ಜೋಡಿಸುತ್ತಿದ್ದರೆ, ಅವರು ಒಡೆಯುತ್ತಿದ್ದಾರೆ. ಇದೇ ಕಾಂಗ್ರೆಸ್ ಹಾಗೂ ಬಿಜೆಪಿಗೆ ಇರುವ ವ್ಯತ್ಯಾಸ ಎಂದರು. 

 ಜಿಲ್ಲಾ ಉಸ್ತುವಾರಿ ಸಚಿವರು ಹಿಂದೂ ಮತ್ತು ಮುಸ್ಲಿಂ ಇಬ್ಬರನ್ನೂ ಭೇಟಿ ಮಾಡಿ ಮಾತನಾಡಿದ್ದಾರೆ. ಅವರ ಸಮಸ್ಯೆ ಆಲಿಸಿದ್ದಾರೆ. ಯಾರು ತಪ್ಪು ಕೆಲಸ ಮಾಡಿದ್ದಾರೋ, ಅದನ್ನು ಖಂಡಿಸಿದ್ದಾರೆ, ಇಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಮೇಯ ಬರುವುದೇ ಇಲ್ಲ. ಯಾರು ಕಾನೂನು ಮೀರಿ ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ನೀಡುವ ಕೆಲಸ ಮಾಡುತ್ತೇವೆ. ಆದರೆ ಬಿಜೆಪಿಯವರು ಪಟ್ಟಿ ಇಟ್ಟುಕೊಂಡು ಕೆಲವರ ಮನೆಗೆ ಹೋಗಿದ್ದಾರೆ ಎಂದು ಆರೋಪಿಸಿದ ಶಿವಕುಮಾರ್,ನಾವು ನಿಜವಾದ ಹಿಂದುಗಳು, ಬಿಜೆಪಿಯವರು ನಕಲಿ ಹಿಂದುಗಳು ಎನ್ನುವ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಮಾತಿಗೆ ಸಹಮತ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣವಚನ ಡೌಟ್; ಮತ್ತೆ ಸಂಖ್ಯಾಬಲ ಇಲ್ಲ ಎಂದ ಗವರ್ನರ್!

Google Trends ನಲ್ಲಿಯೂ ವಿಜಯ್- TVK ಅರ್ಭಟ! ಮತಗಳು, ಗೆಲುವಿನ ಬಗ್ಗೆ ಹೆಚ್ಚಿನ ಹುಡುಕಾಟ

IPL 2026: ಫಿನ್ ಅಲೆನ್ ಶತಕದ ಅಬ್ಬರ, ಡೆಲ್ಲಿ ವಿರುದ್ಧ KKR ಗೆ 8 ವಿಕೆಟ್ ಗಳ ಭರ್ಜರಿ ಜಯ!

ಹೌದು 2025 ರ ಯುದ್ಧದಲ್ಲಿ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ವಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ 1 ವರ್ಷದ ಬಳಿಕ ಚೀನಾ ಒಪ್ಪಿಗೆ!

ವಿಜಯ್ ಸಿಎಂ ಹಾದಿಗೆ 118 ವಿಘ್ನ: TVK ಗೆ ಬೆಂಬಲ ಇಲ್ಲ- ಮುಸ್ಲೀಂ ಲೀಗ್ ಅಧಿಕೃತ ಘೋಷಣೆ; ಮತ್ತೆ ಮ್ಯಾಜಿಕ್ ನಂಬರ್ ಕೊರತೆ!

SCROLL FOR NEXT