ರಾಜ್ಯ

ಮೈಸೂರು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎಂದು ಘೋಷಿಸಿದ ಸಿಎಂ ಸಿದ್ದರಾಮಯ್ಯ

Lingaraj Badiger

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಘೋಷಿಸಿದ್ದಾರೆ.

ಇಂದು ಮೈಸೂರಿನ ಪೊಲೀಸ್ ಅಕಾಡೆಮಿ ಸಭಾಂಗಣದಲ್ಲಿ ನಡೆದ 69ನೇ ವನ್ಯಿಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೈಸೂರು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎಂದು ಘೋಷಿಸಿದರು.

ಮೈಸೂರು ಪ್ರಮುಖ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಕೇಂದ್ರವಾಗಿರುವುದರಿಂದ ಅದನ್ನು ಪ್ಲಾಸ್ಟಿಕ್ ಮುಕ್ತವಾಗಿಡುವುದು ಮುಖ್ಯ. ಪ್ಲಾಸ್ಟಿಕ್ ಪರಿಸರ ಮಾಲಿನ್ಯವನ್ನು ಉಂಟುಮಾಡುತ್ತದೆ, ಪ್ರಾಣಿಗಳು ಮತ್ತು ಜನರ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದರು.

ಅರಣ್ಯ ಬೆಳೆಸಿ, ವನ್ಯಜೀವಿ ರಕ್ಷಣೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಅರಣ್ಯ ಉಳಿದರೆ ಮನುಕುಲ ಉಳಿಯಲಿದೆ. ಪ್ರಸ್ತುತ ಶೇ. 33 ರಷ್ಟು ಅರಣ್ಯ ಪ್ರದೇಶ ಇದ್ದರೆ ಪ್ರಕೃತಿ ಸಮತೋಲನ ಸಾಧ್ಯ. ಮನುಷ್ಯನ ದುರಾಸೆ, ದುರ್ಬುದ್ದಿಯಿಂದ ಅರಣ್ಯ ಪ್ರದೇಶ ಕಡಿಮೆಯಾಗಿದೆ ಎಂದು ಸಿಎಂ ಹೇಳಿದರು.

ಕಾರ್ಯಕ್ರಮದಲ್ಲಿ ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ ಎಚ್​.ಸಿ.ಮಹದೇವಪ್ಪ, ಶಾಸಕರಾದ ತನ್ವೀರ್ ಸೇಠ್​, ರವಿಶಂಕರ್, ದರ್ಶನ್​ ಧ್ರುವನಾರಾಯಣ್, ಅನಿಲ್ ಚಿಕ್ಕಮಾದು ಸೇರಿ ಹಲವರು ಭಾಗಿ ಆಗಿದ್ದರು.

SCROLL FOR NEXT