ಸಿದ್ದರಾಮಯ್ಯ 
ರಾಜ್ಯ

ನವೆಂಬರ್‌ನಲ್ಲಿ ಜಾತಿ ಗಣತಿ ವರದಿ ಸಲ್ಲಿಕೆ: ನಂತರ ಮುಂದಿನ ತೀರ್ಮಾನ; ಸಿಎಂ ಸಿದ್ದರಾಮಯ್ಯ

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿರುವ ಕೆ. ಜಯಪ್ರಕಾಶ್‌ ಹೆಗ್ಡೆ ಅವರು ನವೆಂಬರ್‌ನಲ್ಲಿ ವರದಿ ಸಲ್ಲಿಸುವುದಾಗಿ ಹೇಳಿದ್ದಾರೆ. ಅದು ಸಲ್ಲಿಕೆಯಾದ ಬಳಿಕ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರು: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿರುವ ಕೆ. ಜಯಪ್ರಕಾಶ್‌ ಹೆಗ್ಡೆ ಅವರು ನವೆಂಬರ್‌ನಲ್ಲಿ ವರದಿ ಸಲ್ಲಿಸುವುದಾಗಿ ಹೇಳಿದ್ದಾರೆ. ಅದು ಸಲ್ಲಿಕೆಯಾದ ಬಳಿಕ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ  ಮಾತನಾಡಿದ ಅವರು, ನಮ್ಮದು ಜಾತಿ ವ್ಯವಸ್ಥೆ ಆಧಾರಿತ ಸಮಾಜ. ಎಲ್ಲರಿಗೂ ಸಾಮಾಜಿಕ, ಆರ್ಥಿಕ, ರಾಜಕೀಯ ಸಮಾನತೆ ಕೊಡಬೇಕು. ಅದಕ್ಕೆ ಜಾತಿವಾರು ಅಂಕಿ ಅಂಶಗಳು ಬೇಕು. ಅದಕ್ಕಾಗಿ ನಾವು ಜಾತಿಗಣತಿ ಮಾಡಿಸಿದ್ದೆವು. ಜಾತಿ ಗಣತಿ ಆದಾಗ ಕಾಂತರಾಜ್ ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರಾಗಿದ್ದರು.

ಕಾಂತರಾಜ್ ವರದಿಯನ್ನು ಆಗ ಮುಖ್ಯಮಂತ್ರಿ ಆಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ತೆಗೆದುಕೊಳ್ಳಲಿಲ್ಲ. ಈಗಿನ ಅಧ್ಯಕ್ಷರೊಂದಿಗೆ ಮಾತನಾಡಿದ್ದೇನೆ. ನವೆಂಬರ್‌ನಲ್ಲಿ ವರದಿ ಕೊಡುತ್ತೇನೆ ಅಂತ ಹೇಳಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು. ʻʻವರದಿ ಸರ್ಕಾರದ ಕೈಸೇರಿದ ಮೇಲೆ ತೀರ್ಮಾನ ಮಾಡುತ್ತೇವೆ ಎಂದರು.

ಸರ್ಕಾರದ ಯೋಜನೆಗಳನ್ನು ಎಲ್ಲ ವರ್ಗಗಳ ಜನರಿಗೆ ತಲುಪಿಸಲು ಜಾತಿ ಮತ್ತು ಸಾಮಾಜಿಕ ಗಣತಿ, ಅದರ ಅಂಕಿ–ಅಂಶಗಳು ಅಗತ್ಯ. ಸಬ್‌ ಕ ಸಾಥ್ ಸಬ್‌ಕ ವಿಕಾಸ್ ಎನ್ನುವ ಪ್ರಧಾನಿ ಜಾತಿಗಣತಿಯನ್ನು ವಿರೋಧಿಸುವುದು ಏಕೆ ಎಂದು ಅವರು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿಮ್ಮ ಉದಾಸೀನ ಪ್ರವೃತಿಯಿಂದ ಸರ್ಕಾರಕ್ಕೆ ಮುಜುಗರ: ಸಚಿವರು-ಅಧಿಕಾರಿಗಳ ವಿರುದ್ಧ ಸಿಎಂ ಗರಂ, ಉತ್ತರಿಸುವಂತೆ ಖಡಕ್ ಸೂಚನೆ

UAE ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಕುರಿತು ಚರ್ಚೆ!

SSLC exam 2026: ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ; 8.65 ಲಕ್ಷ ವಿದ್ಯಾರ್ಥಿಗಳು ನೋಂದಣಿ, All the best

'ಅವರು ರಾಜೀನಾಮೆ ನೀಡಿದ್ದು ಒಳ್ಳೆಯದೇ ಆಯ್ತು': ಉನ್ನತ ಅಧಿಕಾರಿ Joseph Kent ಬಗ್ಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೀಗಂದಿದ್ದೇಕೆ?-Video

ವಿವಿಧ ರಾಜ್ಯಗಳ ಚುನಾವಣೆ ಬಳಿಕ ಸರ್ವಪಕ್ಷ ಸಂಸದರ ನಿಯೋಗದಿಂದ ಪ್ರಧಾನಿ ಭೇಟಿ ತೀರ್ಮಾನ- ಡಿಕೆ ಶಿವಕುಮಾರ್

SCROLL FOR NEXT