ಕರ್ನಾಟಕ ಹೈಕೋರ್ಟ್ 
ರಾಜ್ಯ

ಅನೈತಿಕ ಸಂಬಂಧ ಹೊಂದಿರುವ ಮಹಿಳೆಗೆ ಪತಿಯಿಂದ ಜೀವನಾಂಶ ನೀಡಲಾಗದು: ಹೈಕೋರ್ಟ್

ವಿವಾಹವಾಗಿದ್ದರೂ, ಮತ್ತೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಸಹಜೀವನ ನಡೆಸುತ್ತಿರುವ ಮಹಿಳೆಯು ಪತಿಯಿಂದ ಜೀವನಾಂಶ ನಿರೀಕ್ಷಿಸಲಾಗದು ಎಂದು ಹೈಕೋರ್ಟ್ ತಿಳಿಸಿದೆ.

ಬೆಂಗಳೂರು: ವಿವಾಹವಾಗಿದ್ದರೂ, ಮತ್ತೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಸಹಜೀವನ ನಡೆಸುತ್ತಿರುವ ಮಹಿಳೆಯು ಪತಿಯಿಂದ ಜೀವನಾಂಶ ನಿರೀಕ್ಷಿಸಲಾಗದು ಎಂದು ಹೈಕೋರ್ಟ್ ತಿಳಿಸಿದೆ.

ಚಿಕ್ಕಮಗಳೂರು 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ ಕ್ರಿಮಿನಲ್ ಪುನರ್ ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿ ವಜಾಗೊಳಿಸಿದೆ.

ಅರ್ಜಿದಾರರು ಅಕ್ರಮ ಸಂಬಂಧ ಹೊಂದಿದ್ದು, ಪ್ರಾಮಾಣಿಕರಲ್ಲದಿದ್ದಾಗ ಪತಿಯಿಂದ ಜೀವನಾಂಶ ನೀಡಬೇಕು ಎಂಬ ವಾದ ಒಪ್ಪಿಕೊಳ್ಳುವುದಿಲ್ಲ. ಪತಿಯ ಕಡೆಯಿಂದ ಯಾವುದೇ ನಿರೀಕ್ಷೆ ಮಾಡಬಾರದು ಎಂದು ತಿಳಿಸಿದೆ.

ಅರ್ಜಿದಾರರು ಮತ್ತೊಬ್ಬ ವ್ಯಕ್ತಿಯೊಂದಿಗೆ ಓಡಿಹೋಗಿರುವ ಸಂಬಂಧ ದೂರು ದಾಖಲಾಗಿದ್ದು, ತನಿಖೆ ವೇಳೆ ಆಪ್ತನೊಂದಿಗೆ ನೆಲೆಸಲು ಇಚ್ಚಿಸುತ್ತಿದ್ದಾರೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. ಇದೇ ಆಧಾರದಲ್ಲಿ ವಿಚ್ಛೇದನವೂ ಮಂಜೂರಾಗಿದೆ. ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿಲ್ಲ. ಈ ಸಂಬಂಧ ಹಿಂದೊಮ್ಮೆ ರಾಜಿ ಪಂಚಾಯತಿ ನಡೆಸಿದ ಬಳಿಕ ಗಂಡನ ಮನೆಗೆ ಕಳುಹಿಸಲಾಗಿತ್ತು. ಆದರೂ, ಅವರು ಗಂಡನನ್ನು ಬಿಟ್ಟು ಮತ್ತೊಬ್ಬ ವ್ಯಕ್ತಿ ಯೊಂದಿಗೆ ಸಹಜೀವನ ನಡೆಸುತ್ತಿದ್ದಾರೆ ಎಂಬುದಾಗಿ ಆಕೆಯ (ಅರ್ಜಿದಾರಳ) ಸಹೋದರ ತಿಳಿಸಿದ್ದಾರೆ.

ಅರ್ಜಿದಾರರನ್ನು ಪಾಟಿ ಸವಾಲಿಗೆ ಒಳಪಡಿಸಿದಾಗ ಜೀವನ ನಡೆಸುವುದಕ್ಕಾಗಿ ಯಾವುದೇ ಆದಾಯದ ಮೂಲಗಳಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಸಾಕ್ಷಿಗಳ ಪ್ರಕಾರ ಮತ್ತೊಂದು ವ್ಯಕ್ತಿಯೊಂದಿಗೆ ನೆಲೆಸಿದ್ದು, ಅವರೇ ಜೀವನ ನೋಡಿಕೊಳ್ಳುತ್ತಿದ್ದಾರೆ. ಎಲ್ಲ ಸಂದರ್ಭಗಳಲ್ಲಿಯೂ ಅವನೊಟ್ಟಿಗೆ ಇರುತ್ತಿರುವ ಅಂಶ ಸಾಕ್ಷ್ಯಾಧಾರಗಳಿಂದ ತಿಳಿದುಬಂದಿದೆ.  ಇದರಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿದ ನ್ಯಾಯಪೀಠ ಪುನರ್‌ ಪರಿಶೀಲನಾ ಅರ್ಜಿ ವಜಾಗೊಳಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!