ಚಲ್ಲಘಟ್ಟ ಮೆಟ್ರೋ ನಿಲ್ದಾಣ 
ರಾಜ್ಯ

ಮೆಟ್ರೋ ನೇರಳೆ ಮಾರ್ಗ ಸಂಪೂರ್ಣ: ಚಲ್ಲಘಟ್ಟ - ವೈಟ್‌ಫೀಲ್ಡ್‌ ನಡುವೆ ನಾಳೆಯಿಂದ ರೈಲು ಸಂಚಾರ ಆರಂಭ!

ನಮ್ಮ ಮೆಟ್ರೊ ನೇರಳೆ ಮಾರ್ಗ ನಾಳೆಯಿಂದ  ಪೂರ್ಣ ಪ್ರಮಾಣದಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ. ಬೈಯಪ್ಪನಹಳ್ಳಿ- ಕೆಆರ್ ಪುರ ಮತ್ತು ಕೆಂಗೇರಿ- ಚಲ್ಲಘಟ್ಟ ನಡುವಿನ ವಿಸ್ತರಿತಾ ಮಾರ್ಗದ ಉದ್ಘಾಟನೆ ವಿಳಂಬದ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು.

ಬೆಂಗಳೂರು: ನಮ್ಮ ಮೆಟ್ರೊ ನೇರಳೆ ಮಾರ್ಗ ನಾಳೆಯಿಂದ  ಪೂರ್ಣ ಪ್ರಮಾಣದಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ. ಬೈಯಪ್ಪನಹಳ್ಳಿ- ಕೆಆರ್ ಪುರ ಮತ್ತು ಕೆಂಗೇರಿ- ಚಲ್ಲಘಟ್ಟ ನಡುವಿನ ವಿಸ್ತರಿತಾ ಮಾರ್ಗದ ಉದ್ಘಾಟನೆ ವಿಳಂಬದ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ನಂತರ ಈ ಎರಡು ಮಾರ್ಗಗಳನ್ನು ಸಾರ್ವಜನಿಕರಿಗೆ ಮುಕ್ತಗೊಳಿಸುವಂತೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಇತ್ತೀಚೆಗೆ ಕರ್ನಾಟಕ ನಗರಾಭಿವೃದ್ಧಿ ಇಲಾಖೆಗೆ ಸೂಚನೆ ನೀಡಿತ್ತು. 

ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಹೆಚ್ಚು ವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದ ಕೇಂದ್ರ ಸರ್ಕಾರದ ಅಧೀನ ಕಾರ್ಯದರ್ಶಿ ರವಿ ಚೌಧರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಎರಡು ವಿಭಾಗಗಳನ್ನು ಔಪಚಾರಿಕವಾಗಿ ಲೋಕಾರ್ಪಣೆ ಮಾಡಲಿದ್ದಾರೆ. ಬೆಂಗಳೂರಿನ ಪ್ರಯಾಣಿಕರ ದೃಷ್ಟಿಕೋನದಿಂದ ಈ ಎರಡು ವಿಭಾಗಗಳು ಪ್ರಮುಖವಾಗಿವೆ, ಏಕೆಂದರೆ ಎರಡೂ ನಗರದ ಪೂರ್ವದಿಂದ ಪಶ್ಚಿಮ ಭಾಗಕ್ಕೆ ತಡೆರಹಿತ ಸಂಪರ್ಕವನ್ನು ಒದಗಿಸುತ್ತವೆ ಎಂದು ತಿಳಿಸಿದ್ದರು.

ಈ ನಿಟ್ಟಿನಲ್ಲಿ ಯಾವುದೇ ಔಪಚಾರಿಕ ಅಥವಾ ಅನೌಪಚಾರಿಕ ಅಧಿಕೃತ ಕಾರ್ಯಕ್ರಮವಿಲ್ಲದೆ ಈ ಎರಡು ವಿಭಾಗಗಳನ್ನು ಅಕ್ಟೋಬರ್ 9, 2023 ರ ಬೆಳಿಗ್ಗೆ ತಕ್ಷಣವೇ ಪ್ರಯಾಣಿಕರ ಸೇವೆಗಾಗಿ ಮುಕ್ತಗೊಳಿಸಬೇಕು. ಇದರಿಂದ ದೈನದಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದರು.

ಈ ಬೆಳವಣಿಗೆಯ ನಂತರ 2.2 ಕಿಮೀ ಉದ್ದದ ಬೈಯಪ್ಪನಹಳ್ಳಿ-ಕೆಆರ್ ಪುರಂ ಮತ್ತು 2.1 ಕಿಮೀ ಉದ್ದದ ಕೆಂಗೇರಿ-ಚಲ್ಲಘಟ್ಟ ವಿಭಾಗಗಳು ಸೋಮವಾರ ಕಾರ್ಯನಿರ್ವಹಿಸಲಿವೆ ಎಂದು ಬಿಎಂಆರ್ ಸಿಎಲ್  ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು (CMRS) ಸೆಪ್ಟೆಂಬರ್ 25 ರಂದು ಬೈಯಪ್ಪನಹಳ್ಳಿ-ಕೆಆರ್ ಪುರಂ ಮತ್ತು ಸೆಪ್ಟೆಂಬರ್ 30 ರಂದು ಕೆಂಗೇರಿ-ಚಲ್ಲಘಟ್ಟ ಮಾರ್ಗಕ್ಕೆ ಅನುಮತಿ ನೀಡಿದ್ದರು. ಬಿಎಂಆರ್ ಸಿಎಲ್  ಆರಂಭದಲ್ಲಿ ಎರಡೂ ಮಾರ್ಗಗಳನ್ನು  ಅಕ್ಟೋಬರ್ 2 ರಂದು, ತದನಂತರ 6 ರಂದು ಉದ್ಘಾಟಿಸುವ ಉದ್ದೇಶ ಹೊಂದಿತ್ತು.  ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಅನುಮೋದನೆ ಪಡೆಯುವಲ್ಲಿ ವಿಳಂಬವಾದ ಕಾರಣ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT