ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮಂಡ್ಯದ ಮನ್ ಮುಲ್​​ನಲ್ಲಿ ಬೆಂಕಿ ಅವಘಡ: ಕೂದಲೆಳೆ ಅಂತರದಲ್ಲಿ ತಪ್ಪಿದ ಪ್ರಾಣಹಾನಿ

ಅತ್ತಿಬೆಲೆ ಪಟಾಕಿ ಗೋಡೌನ್ ಅಗ್ನಿ ದುರಂತ ಮಾಸುವ ಮುನ್ನವೇ ಇತ್ತ ಮಂಡ್ಯದಲ್ಲೂ ಅಗ್ನಿ ಅವಘಡ ಘಟನೆ ವರದಿಯಾಗಿದ್ದು, ಮಂಡ್ಯದ ಮನ್ ಮುಲ್​​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಮಂಡ್ಯದ ಮನ್ ಮುಲ್​​ನಲ್ಲಿ ಬೆಂಕಿ ಅವಘಡ
Srinivasa Murthy VN
Updated On : 8 Oct 2023, 11:50 am

ಮಂಡ್ಯ: ಅತ್ತಿಬೆಲೆ ಪಟಾಕಿ ಗೋಡೌನ್ ಅಗ್ನಿ ದುರಂತ ಮಾಸುವ ಮುನ್ನವೇ ಇತ್ತ ಮಂಡ್ಯದಲ್ಲೂ ಅಗ್ನಿ ಅವಘಡ ಘಟನೆ ವರದಿಯಾಗಿದ್ದು, ಮಂಡ್ಯದ ಮನ್ ಮುಲ್​​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಇತ್ತೀಚೆಗೆ ಆರಂಭಗೊಂಡಿದ್ದ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿರುವ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ (ಮನ್​ ಮುಲ್) (ManMul)​​ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮನ್​ಮುಲ್​​ನ (Madya) ಪ್ಯಾಕಿಂಗ್​ ಸೆಕ್ಷನ್​ನಲ್ಲಿ ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡು ಆತಂಕ ಸೃಷ್ಟಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಬೆಂಕಿ ಹತ್ತಿರುವ ಕಟ್ಟಡದಲ್ಲಿ ಮಾರ್ನಿಂಗ್ ಶಿಫ್ಟ್​​ನಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಹೊರಕ್ಕೆ ಓಡಿಬಂದಿದ್ದಾರೆ. ಅದೃಷ್ಟವಶಾತ್​ ಯಾವುದೆ ಪ್ರಣಾಪಾಯ ಸಂಭವಿಸಿಲ್ಲ. ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement