ಆಹ್ವಾನ ಪತ್ರಿಕೆ ಬಿಡುಗಡೆ 
ರಾಜ್ಯ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ

ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಶುಭ ಸಂದೇಶ ಒಳಗೊಂಡ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ಭಾನುವಾರ ಬಿಡುಗಡೆ ಮಾಡಿದೆ.

ಮೈಸೂರು: ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಶುಭ ಸಂದೇಶ ಒಳಗೊಂಡ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ಭಾನುವಾರ ಬಿಡುಗಡೆ ಮಾಡಿದೆ.

ನಾಡದೇವತೆ ತಾಯಿ ಚಾಮುಂಡೇಶ್ವರಿ, ಚಾಮುಂಡಿಬೆಟ್ಟ, ಅರಮನೆ, ಗಜಪಡೆಯ ಭಾವಚಿತ್ರವನ್ನೊಳಗೊಂಡ ಆಕರ್ಷಕ ಆಹ್ವಾನ ಪತ್ರಿಕೆಯನ್ನು ಇಂದು ಬಿಡುಗಡೆ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ಶುಭ ಸಂದೇಶ
ಸಮಸ್ತ ಜನತೆಗೆ ನಾಡಹಬ್ಬ ದಸರಾದ ಶುಭಾಶಯಗಳು. ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬವನ್ನು ಅಕ್ಟೋಬರ್ 15 ರಿಂದ 24ರ ವರೆಗೆ ಆಚರಿಸಲಾಗುತ್ತಿದ್ದು, ಸರ್ವರಿಗೂ ಹೃತೂರ್ವಕ ಸ್ವಾಗತವನ್ನು ಬಯಸುತ್ತೇನೆ. ಕನ್ನಡ ನಾಡಿನ ಸಂಪ್ರದಾಯ, ಸಂಸ್ಕೃತಿ, ಕಲಾ ವೈಭವವನ್ನು ಅನಾವರಣ ಮಾಡುವ ದಸರಾ ಹಬ್ಬ ಮನಸ್ಸಿಗೂ, ಕಣ್ಣಿಗೂ ಮುದ ನೀಡುವ ಜೊತೆಗೆ ದುಷ್ಟರ ಶಿಕ್ಷೆ ಶಿಷ್ಟರ ರಕ್ಷಣೆ ಎನ್ನುವ ಮೌಲ್ಯವನ್ನು ಸಾರುವ, ಕೆಡುಕನ್ನು ಅಳಿಸಿ, ಒಳತನ್ನು ಪಸರಿಸುವ ಆಧ್ಯಾತ್ಮಿಕ ಮಹತ್ವದ ಹಬ್ಬವಾಗಿದೆ.

ಮೈಸೂರು ದಸರಾ ಈ ಬಾರಿ ನಮ್ಮ ನಾಡಿಗೆ ಬರದ ಸ್ಥಿತಿ ಆವರಿಸಿದ್ದರೂ ವೈಭವ, ಸಂಭ್ರಮ ಮತ್ತು ಪಾರಂಪಾರಿಕ ಮೆರುಗಿಗೆ ಕೊರತೆಯಾಗದಂತೆ ಅವ್ಯಾಹತವಾಗಿ ಸಾಂಪ್ರದಾಯಿಕ ರೀತಿಯಲ್ಲಿ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದೆ. ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯು ನಾಡನ್ನು ಎಲ್ಲಾ ಕೆಡುಕುಗಳಿಂದ ರಕ್ಷಿಸಲಿ ಎಂದು ಪ್ರಾರ್ಥಿಸೋಣ. ಬನ್ನಿ, ನಾಡಹಬ್ಬ ದಸರೆಯ ಸಂಭ್ರಮವನ್ನು ಕಣ್ತುಂಬಿಕೊಳ್ಳಿ, ಸವಿ ನೆನಪುಗಳನ್ನು ಮನದ ಭಿತ್ತಿಯಲ್ಲಿ ಅಚ್ಚಳಿಯದಂತೆ ದಾಖಲಿಸಿಕೊಳ್ಳಿ. ನಾಡಹಬ್ಬ ಮೈಸೂರು ದಸರಾ – 2023 ಕ್ಕೆ ಸರ್ವರಿಗೂ ಸ್ವಾಗತ ಎಂದಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಶುಭ ಸಂದೇಶ
ಸಮಸ್ತರಿಗೂ ನಾಡಹಬ್ಬ ದಸರಾ ಶುಭಾಶಯಗಳು. ಪಾರಂಪರಿಕ ನಗರಿ ಮೈಸೂರಿನಲ್ಲಿ ಪ್ರತಿವರ್ಷವೂ ನಮ್ಮ ನಾಡಿನ ಹೆಮ್ಮೆಯ ದಸರಾ ಹಬ್ಬವನ್ನು ಅರ್ಥಪೂರ್ಣ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಕರ್ನಾಟಕ ರಾಜ್ಯದ ಸಾಂಸ್ಕೃತಿಕ ಅಸ್ಮಿತೆಯ ಪ್ರತೀಕ ನಾಡಹಬ್ಬ ದಸರಾವನ್ನು ಈ ವರ್ಷ ಸಾಂಪ್ರದಾಯಿಕವಾಗಿ ಆಚರಣೆ ಮಾಡುತ್ತಿರುವುದು ಸಂತಸದ ಸಂಗತಿ. ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆಶೀರ್ವಾದ ನಾಡಿನ ಸಮಸ್ತ ಜನರ ಮೇಲಿರಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT