ಬಿಗ್ ಬಾಸ್ ಮನೆ ಪ್ರವೇಶಿಸಿದ ಶಾಸಕ ಪ್ರದೀಪ್ ಈಶ್ವರ್ 
ರಾಜ್ಯ

ಒಬ್ಬ ಎಂಎಲ್‌ಎ ಬಿಗ್ ಬಾಸ್‌ಗೆ ಹೋಗಿ ಕುಣಿದಾಡಿರುವುದು ಇದೇ ಮೊದಲು, ಪ್ರದೀಪ್ ಈಶ್ವರ್ ಚಿಕ್ಕಬಳ್ಳಾಪುರದ ಮಾನ ಮರ್ಯಾದೆ ಕಳೆದಿದ್ದಾರೆ: ಡಾ ಸುಧಾಕರ್

ಕನ್ನಡ ಬಿಗ್ ಬಾಸ್ ಸೀಸನ್ 10’ ಆರಂಭ ಆಗಿದೆ. ವಿವಿಧ ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ನೀಡಿದ್ದಾರೆ. ಒಂದು ದಿನ ತಡವಾಗಿ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರು ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ. 

ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ 10’ ಆರಂಭ ಆಗಿದೆ. ವಿವಿಧ ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ನೀಡಿದ್ದಾರೆ. ಒಂದು ದಿನ ತಡವಾಗಿ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರು ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ. 

ಅವರ ಎಂಟ್ರಿ ಅನೇಕರಿಗೆ ಅಚ್ಚರಿ ತಂದಿದೆ. ಎಂಎಲ್​ಎ ಆಗಿ ದೊಡ್ಮನೆಗೆ ತೆರಳಿರೋ ಬಗ್ಗೆ ಕೆಲವರು ಅಪಸ್ವರ ತೆಗೆದಿದ್ದಾರೆ. ಅವರು ಬಿಗ್ ಬಾಸ್ ಮನೆಗೆ ಕೆಲವು ದಿನಗಳ ಅತಿಥಿಯಾಗಿ ಹೋಗಿದ್ದಾರೆಯೋ ಅಥವಾ ಉಳಿದ ಸ್ಪರ್ಧಿಗಳಂತೆಯೇ ಅವರು ಇರುತ್ತಾರಾ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. 

ಈ ವರ್ಷ ವಿಧಾನಸಭೆ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಪ್ರಬಲ ಪ್ರತಿಸ್ಪರ್ಧಿ ಬಿಜೆಪಿಯ ಡಾಕ್ಟರ್ ಸುಧಾಕರ್ ಅವರನ್ನು ಸೋಲಿಸಿದ್ದಾರೆ. ಈ ಬಗ್ಗೆ ಇಂದು ಸುದ್ದಿಗೋಷ್ಠಿಯಲ್ಲಿ ಡಾ ಸುಧಾಕರ್ ಪ್ರದೀಪ್ ಈಶ್ವರ್ ಅವರನ್ನು ಲೇವಡಿ ಮಾಡಿದ್ದಾರೆ.

ಒಬ್ಬ ರಾಜಕಾರಣಿ, ಜನಪ್ರತಿನಿಧಿಯಾಗಿ ಶಾಸಕರಾಗಿ ಈ ರೀತಿಯ ಶೋಗೆ ಹೋಗಿದ್ದು ಇದೆ ಮೊದಲು, ಬಿಗ್ ಬಾಸ್‌ಗೆ ಹೋಗುವ ಮೂಲಕ ನಗೆಪಾಟೀಲಿಗೆ ಈಡಾಗಿದ್ದಾರೆ. ಒಬ್ಬ ಎಂಎಲ್‌ಎ ಬಿಗ್ ಬಾಸ್‌ಗೆ ಹೋಗಿ ಕುಣಿದಾಡಿರುವುದು ಇದೇ ಮೊದಲು. ಇದೊಂದು ನಾಚಿಕೆಗೇಡಿನ ಸಂಗತಿ. ಬಿಗ್ ಬಾಸ್‌ನಲ್ಲಿ ಭಾಗಿಯಾಗುವ ಮೂಲಕ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾನ ಮರ್ಯಾದೆ ಕಳೆದಿದ್ದಾರೆ ಎಂದು ಸುಧಾಕರ್ ವ್ಯಂಗ್ಯವಾಡಿದರು.

ಆಯ್ಕೆ ತಪ್ಪು ಎಂದು ಜನರಿಗೆ ಮನವರಿಕೆಯಾಗಿದೆ: ಚಿಕ್ಕಬಳ್ಳಾಪುರ ಕ್ಷೇತ್ರದ ಹೆಸರನ್ನು ಹಾಳು ಮಾಡಿದ್ದಾರೆ. ಇಂತಹ ವ್ಯಕ್ತಿಯನ್ನು ಆಯ್ಕೆ‌ ಮಾಡಿದ ಜನರಿಗೆ ಆಗಲೇ ಮನವರಿಕೆಯಾಗಿದೆ.‌ ನಾವು ತಪ್ಪು ಮಾಡಿದ್ದೇವೆ ಎಂದು ಜನರಿಗೆ ಅರಿವಾಗಿದೆ. ಮುಂದಿನ ದಿನಗಳಲ್ಲಿ ಅವರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT