ಸಿಎಂ ಸಿದ್ದರಾಮಯ್ಯ 
ರಾಜ್ಯ

ಇಸ್ರೇಲ್-ಹಮಾಸ್ ಯುದ್ಧ: ಕನ್ನಡಿಗರಿಗಾಗಿ ಪ್ರತ್ಯೇಕ ಸಹಾಯವಾಣಿ ಆರಂಭಿಸಿದ ರಾಜ್ಯ ಸರ್ಕಾರ..!

ಇಸ್ರೇಲ್‌-ಪ್ಯಾಲೆಸ್ತೀನ್‌ನ ಹಮಾಸ್‌ ಉಗ್ರರ ನಡುವಿನ ಕದನ ಭೀಕರ ಸ್ವರೂಪ ಪಡೆದುಕೊಂಡಿದೆ. ಎರಡೂ ಕಡೆ ದಾಳಿ-ಪ್ರತಿದಾಳಿಗಳು ತೀವ್ರಗೊಂಡಿದ್ದು, ಈ ವರೆಗೂ 1000ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಯುದ್ಧಪೀಡಿತ ಇಸ್ರೇಲ್ ನಲ್ಲಿ ಕನ್ನಡಿಗರೂ ಕೂಡ ಸಂಕಷ್ಟಕ್ಕೆ ಸಿಲುಕಿದ್ದು, ಅವರ ರಕ್ಷಣೆಗೆ ರಾಜ್ಯ ಸರ್ಕಾರ ಪ್ರತ್ಯೇಕ ಸಹಾಯವಾಣಿಯನ್ನು ಆರಂಭಿಸಿದೆ.

ಬೆಂಗಳೂರು: ಇಸ್ರೇಲ್‌-ಪ್ಯಾಲೆಸ್ತೀನ್‌ನ ಹಮಾಸ್‌ ಉಗ್ರರ ನಡುವಿನ ಕದನ ಭೀಕರ ಸ್ವರೂಪ ಪಡೆದುಕೊಂಡಿದೆ. ಎರಡೂ ಕಡೆ ದಾಳಿ-ಪ್ರತಿದಾಳಿಗಳು ತೀವ್ರಗೊಂಡಿದ್ದು, ಈ ವರೆಗೂ 1000ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಯುದ್ಧಪೀಡಿತ ಇಸ್ರೇಲ್ ನಲ್ಲಿ ಕನ್ನಡಿಗರೂ ಕೂಡ ಸಂಕಷ್ಟಕ್ಕೆ ಸಿಲುಕಿದ್ದು, ಅವರ ರಕ್ಷಣೆಗೆ ರಾಜ್ಯ ಸರ್ಕಾರ ಪ್ರತ್ಯೇಕ ಸಹಾಯವಾಣಿಯನ್ನು ಆರಂಭಿಸಿದೆ.

ದಕ್ಷಿಣ ಇಸ್ರೇಲ್‌ನ ಕೆಲವು ಭಾಗಗಳಲ್ಲಿಸೇನೆ ಹಾಗೂ ಹಮಾಸ್‌ ನಡುವೆ ಕದನ ಮುಂದುವರಿದಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಸಿಗುತ್ತಿಲ್ಲ ಎಂದು ಇಸ್ರೇಲ್‌ ಸೇನಾ ವಕ್ತಾರರು ತಿಳಿಸಿದ್ದಾರೆ. ಎರಡು ಗುಂಪುಗಳು ದಾಳಿ, ಪ್ರತಿ ದಾಳಿಯಿಂದಾಗಿ ಗಾಜಾ ಪಟ್ಟಿ ಅಕ್ಷರಶಃ ರಣರಂಗದಂತಾಗಿದೆ.

ಇಸ್ರೇಲ್ ನಲ್ಲಿನ ಪರಿಸ್ಥಿತಿ ತೀವ್ರವಾಗಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಕನ್ನಡಿಗರ ರಕ್ಷಣೆಗೆ ಮುಂದಾಗಿದೆ. ಕನ್ನಡಿಗರ ನೆರವಿಗಾಗಿ ಸಹಾಯವಾಣಿ ತೆರೆದಿದೆ.

ಯುದ್ಧಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ನಾವು ಸಹಾಯವಾಣಿಯನ್ನು ತೆರೆದಿದ್ದೇವೆ. ಇಸ್ರೇಲ್‌ನಲ್ಲಿರುವ ಕುಟುಂಬ ಸದಸ್ಯರು ನಿಮ್ಮ ಸಂಪರ್ಕಕ್ಕೆ ಸಿಗದಿದ್ದಲ್ಲಿ ಅಥವಾ ಯುದ್ಧದಿಂದಾಗಿ ಸಂಕಷ್ಟದಲ್ಲಿರುವ ನಿಮ್ಮವರಿಗೆ ತಕ್ಷಣದ ನೆರವಿನ ಅಗತ್ಯವಿದ್ದಲ್ಲಿ ಕೂಡಲೇ ಈ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆಮಾಡಿ, ಅಗತ್ಯ ನೆರವು ಪಡೆಯಬಹುದಾಗಿದೆ. ಜಗತ್ತಿನ ಯಾವುದೇ ಮೂಲೆಯಲ್ಲಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದೆ.

ಇಸ್ರೇಲ್ ನಲ್ಲಿ ಸಿಲುಕಿರುವ ಕನ್ನಡಿಗರು ಯಾವುದೇ ರೀತಿಯ ನೆರವಿಗಾಗಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಸಹಾಯವಾಣಿ 080 22340676, 080 22253707 ಸಂಪರ್ಕಿಸಬಹುದು. ಅದೇ ರೀತಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ +97235226748 ಸಂಖ್ಯೆಗೆ ಕರೆ ಮಾಡಬಹುದು ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

‘ಸದ್ಯದ ಪರಿಸ್ಥಿತಿ ಬಹಳ ಕಳವಳಕಾರಿಯಾಗಿದೆ. ಅಲ್ಲಿ ನೆಲೆಸಿರುವ ರಾಜ್ಯದ ನಾಗರಿಕರ ರಕ್ಷಣೆಗಾಗಿ ನಾವು, ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜತೆ ನಿಕಟ ಸಂಪರ್ಕದಲ್ಲಿದ್ದೇವೆ. ಸ್ಥಳೀಯು ಅಧಿಕಾರಿಗಳ ಸೂಚನೆ ಮತ್ತು ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸಬೇಕು.ಅನಗತ್ಯ ಪ್ರಯಾಣ ತಪ್ಪಿಸಿ, ಸುರಕ್ಷತಾ ಆಶ್ರಯಗಳಲ್ಲಿ ನೆಲೆ ಪಡೆಯಲು ವಿನಂತಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT