ಡಿಸಿಎಂ ಡಿಕೆ ಶಿವಕುಮಾರ್ 
ರಾಜ್ಯ

'ಬೆಂಗಳೂರು ಕಂಬಳ'ಕ್ಕೆ ಭರದ ಸಿದ್ಧತೆ: ಸರ್ಕಾರದಿಂದ 1 ಕೋಟಿ ರೂ. ಆರ್ಥಿಕ ನೆರವು- ಡಿಸಿಎಂ ಡಿ.ಕೆ.ಶಿವಕುಮಾರ್

'ಕಾಂತಾರ' ಬಿಡುಗಡೆಯ ನಂತರ ದೇಶಾದ್ಯಂತ ಗಮನ ಸೆಳೆದಿರುವ ಕರಾವಳಿ ಕರ್ನಾಟಕದ ಜನಪ್ರಿಯ ಭಾರತೀಯ ಕ್ರೀಡೆಯಾದ  'ಕಂಬಳ' ಆಯೋಜಿಸಲು ಐಟಿ ಸಿಟಿ ಬೆಂಗಳೂರು ಸಜ್ಜಾಗಿದೆ.

ಬೆಂಗಳೂರು: 'ಕಾಂತಾರ' ಬಿಡುಗಡೆಯ ನಂತರ ದೇಶಾದ್ಯಂತ ಗಮನ ಸೆಳೆದಿರುವ ಕರಾವಳಿ ಕರ್ನಾಟಕದ ಜನಪ್ರಿಯ ಭಾರತೀಯ ಕ್ರೀಡೆಯಾದ  'ಕಂಬಳ' ಆಯೋಜಿಸಲು ಐಟಿ ಸಿಟಿ ಬೆಂಗಳೂರು ಸಜ್ಜಾಗಿದೆ. ನಗರದ ಅರಮನೆ ಮೈದಾನದಲ್ಲಿ ಬುಧವಾರ ಬೆಳಿಗ್ಗೆ 'ಬೆಂಗಳೂರು ಕಂಬಳ- ನಮ್ಮ ಕಂಬಳದ ಕೆರೆಪೂಜೆ (ಗುದ್ದಲಿ ಪೂಜೆ)ಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೆರವೇರಿಸಿದರು. 

ನಂತರ ಮಾತನಾಡಿದ ಡಿಕೆ ಶಿವಕುಮಾರ್,  ಈ ಹಿಂದಿನಂತೆ "20 ಕಂಬಳಗಳಿಗೆ ತಲಾ 5 ಲಕ್ಷದಂತೆ 1 ಕೋಟಿ ರೂ. ಸಹಾಯಧನವನ್ನು ನೀಡಲಾಗುವುದು. ದೇಸಿ ಹಾಗೂ ಐತಿಹಾಸಿಕವಾದ ಕಂಬಳ ಕ್ರೀಡೆಗೆ ಹೆಚ್ಚಿನ ಸಹಕಾರ ನೀಡಲಾಗುವುದು ಎಂದರು. ಕಂಬಳಕ್ಕೆ ಆರ್ಥಿಕ ನೆರವು ಬಿಡುಗಡೆ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಜೊತೆ ಚರ್ಚೆ ನಡೆಸಲಾಗುವುದು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಮಾಜಗಳ ಸಂಘಟನೆಗೆ ಒಂದು ನೆಲೆ ಬೇಕು ಎಂದು ಶಾಸಕ ಅಶೋಕ್ ರೈ ಮನವಿ ಮಾಡಿದ್ದು, ಎಲ್ಲರೂ ಒಟ್ಟಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿ ಎಂದು ಹೇಳಿದರು.

ಮನುಷ್ಯನ ಬಳಿ ತೆಗೆದುಕೊಂದು ಹೋಗಲು ಏನೂ ಇಲ್ಲ, ತನ್ನ ಬಳಿ ಇರುವುದನ್ನೆಲ್ಲಾ ಬಿಟ್ಟು ಹೋಗಲೇಬೇಕು. ಆದರೆ ನಮ್ಮ ಸಂಸ್ಕೃತಿಯನ್ನು ಉಳಿಸಿ, ಪರಿಚಯಿಸಬೇಕು ಎಂದು ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನರು ಒಂದಾಗಿರುವುದು ಸಂತೋಷದ ವಿಚಾರ ಎಂದರು.

ಉಳಿಪೆಟ್ಟು ಬೀಳದೆ ಯಾವುದೇ ಶಿಲೆ ಪ್ರತಿಮೆ ಆಗುವುದಿಲ್ಲ. ಭೂಮಿ ಉಳದೆ ಯಾವುದೇ ಬೆಳೆ ಬೆಳೆಯಲು ಆಗುವುದಿಲ್ಲ. ಅದರಂತೆ ಅರಮನೆ ಮೈದಾನದಲ್ಲಿ ಒಂದಷ್ಟು ಅಭಿವೃದ್ದಿ ಕೆಲಸಗಳನ್ನು ಈ ನೆಪದಲ್ಲಿ ಮಾಡಬೇಕು. ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂದಂತಹ ಸದಾನಂದ ಗೌಡರು, ಹ್ಯಾರಿಸ್ ಅವರು ಬೆಂಗಳೂರಿನಲ್ಲಿ ನಾಯಕರಾಗಿ ಬೆಳೆದಿದ್ದಾರೆ ಎಂದು ಹೇಳಿದರು.

ಕರ್ನಾಟಕದ ಕರಾವಳಿ ಭಾಗ ಈ ದೇಶದ ದೊಡ್ಡ ಆಸ್ತಿ. ಉದ್ದಿಮೆ, ಶಿಕ್ಷಣ, ಹೋಟೆಲ್ ಉದ್ಯಮ, ಪ್ರವಾಸೋಧ್ಯಮ, ಬ್ಯಾಂಕಿಂಗ್ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಹೆಸರು ಮಾಡಿದವರು. ತಮ್ಮ ಸಂಪ್ರದಾಯವನ್ನು ಬೆಂಗಳೂರಿನ ಜನತೆಗೂ ಪರಿಚಯಿಸಲು ಹೊರಟಿರುವ ಶಾಸಕ ಅಶೋಕ್ ರೈ ಅವರ ಕೆಲಸ ಶ್ಲಾಘನೀಯ ಎಂದು ತಿಳಿಸಿದರು.

ಈ ದೇಶಕ್ಕೆ ದೊಡ್ಡ ಆಸ್ತಿಯೇ ನಮ್ಮ ಸಂಸ್ಕೃತಿ. ಅದೇ ರೀತಿ ದಕ್ಷಿಣ ಕನ್ನಡ ಶ್ರೀಮಂತ ಜನಪದ ಆಚರಣೆಗಳನ್ನು ಹೊಂದಿದೆ. ದಕ್ಷಿಣ ಕನ್ನಡದ ಆಚರಣೆ ಬೆಂಗಳೂರಿನಲ್ಲೂ ನಡೆಯಬೇಕು ಎನ್ನುವ ಸಾಕ್ಷಿಗುಡ್ಡೆಯನ್ನು ಬಿಟ್ಟು ಹೋಗಲು ಎಲ್ಲರೂ ಒಗ್ಗಟ್ಟಾಗಿ ಸೇರಿ ಮಾದರಿ ಕೆಲಸ ಮಾಡುತ್ತಿದ್ದೀರಿ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಯುವಕರು ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದು. ಸಾವಿರಾರು ಯುವಕರು ಬೆಂಗಳೂರಿನಲ್ಲಿ ನೆಲೆ ಕಂಡುಕೊಂಡಿದ್ದಾರೆ.ಈ ಐತಿಹಾಸಿಕ ಕಂಬಳ ಆಯೋಜನೆ ಮಾಡುತ್ತಿರುವುದಕ್ಕೆ ನಮ್ಮ ಸಹಕಾರ ಎಂದಿಗೂ ಇರುತ್ತದೆ. ದೇವರು ವರ, ಶಾಪ ಎರಡೂ ನೀಡದೆ ಅವಕಾಶ ನೀಡುತ್ತಾನೆ, ಈ ಅವಕಾಶ ಬಳಸಿಕೊಳ್ಳಿ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT