ನವೆಂಬರ್‌ನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಪೂರ್ವ ತಯಾರಿಯಾಗಿ ಇಂದು ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕರೆ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭೂಮಿ ಪೂಜೆ ನೆರವೇರಿಸಿದ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಇತರ ನಾಯಕರು 
ರಾಜ್ಯ

'ಫಿಲಂನವ್ರದ್ದು ಏನೋ ಇರ್ತದೆ, ಆ ಮೇಲೆ ಡ್ರಾಮಾ ಅರ್ಟಿಸ್ಟ್, ಸ್ಕ್ರಿಪ್ಟ್‌ ನೋಡೋಣ': ಮುನಿರತ್ನ ಕಂಡು ಛೇಡಿಸಿದ ಡಿಕೆ ಶಿವಕುಮಾರ್

ತುಳುಕೂಟಕ್ಕೆ 50 ವರ್ಷದ ಸಂಭ್ರಮ ಹಿನ್ನೆಲೆಯಲ್ಲಿ ಉದ್ಯಾನನಗರಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮುಂದಿನ ತಿಂಗಳು ನವೆಂಬರ್ ನಲ್ಲಿ ಕಂಬಳ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬುಧವಾರ ಅರಮನೆ ಮೈದಾನದಲ್ಲಿ ಕಂಬಳದ ಕರೆ ಪೂಜೆ ಅಂದರೆ ಭೂಮಿ ಪೂಜೆ ಕಾರ್ಯಕ್ರಮ ಏರ್ಪಟ್ಟಿತ್ತು. 

ಬೆಂಗಳೂರು: ತುಳುಕೂಟಕ್ಕೆ 50 ವರ್ಷದ ಸಂಭ್ರಮ ಹಿನ್ನೆಲೆಯಲ್ಲಿ ಉದ್ಯಾನನಗರಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮುಂದಿನ ತಿಂಗಳು ನವೆಂಬರ್ ನಲ್ಲಿ ಕಂಬಳ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬುಧವಾರ ಅರಮನೆ ಮೈದಾನದಲ್ಲಿ ಕಂಬಳದ ಕರೆ ಪೂಜೆ ಅಂದರೆ ಭೂಮಿ ಪೂಜೆ ಕಾರ್ಯಕ್ರಮ ಏರ್ಪಟ್ಟಿತ್ತು. 

ನವೆಂಬರ್ ತಿಂಗಳ 24, 25, 26ರಂದು ಕಂಬಳ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಈ ಹಿನ್ನೆಲೆ ಇಂದಿನಿಂದ ಕಂಬಳಕ್ಕಾಗಿ ಅಖಾಡ ಸಿದ್ಧಗೊಳ್ಳಲಿದೆ. ಕರೆ ಪೂಜೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸದಾನಂದ ಗೌಡ ಹಾಗೂ ಅಶ್ವತ್ ನಾರಾಯಣ್, ಸಂಗೀತ ನಿರ್ದೇಶನ ಗುರುಕಿರಣ್, ತುಳುಕೂಟದ ಅಧ್ಯಕ್ಷ ಸುಂದರ್ ರಾಜ್ ರೈ ಭಾಗಿಯಾಗಿದ್ದಾರೆ.

ಈ ವೇಳೆ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಪ್ರವೇಶಿಸಿ ಹೈಡ್ರಾಮಾ ನಡೆಯಿತು. ವೇದಿಕೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಷಣ ಮಾಡುತ್ತಿದ್ದ ವೇಳೆ ಏಕಾಏಕಿ ವೇದಿಕೆಯ ಮುಂಭಾಗಕ್ಕೆ ಬಂದ ಆರ್ ಆರ್ ನಗರ ಶಾಸಕ ಮುನಿರತ್ನ ಹೈಡ್ರಾಮಾ ಸೃಷ್ಟಿಸಿದರು. ಡಿಕೆಶಿ ಭಾಷಣದ ವೇಳೆ ವೇದಿಕೆಯ ಮುಂಭಾಗದಲ್ಲಿ ಕುಳಿತಿದ್ದ ಶಾಸಕ ಮುನಿರತ್ನ ಬೆಂಬಲಿಗರು ಗದ್ದಲ ಆರಂಭಿಸಿದರು.

ಈ ವೇಳೆ ಡಿಕೆ ಶಿವಕುಮಾರ್ ತಮ್ಮ ಭಾಷಣದ ಮಧ್ಯೆ, ಯಾರೋ ಡ್ರಾಮಾ ಮಾಡಲು ಬಂದಿದ್ದಾರೆ‌. ಡ್ರಾಮಾ ನೋಡೋಣ, ಅಶ್ವಥ್‌ ನಾರಾಯಣ್ ಅವರೇ ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ. ಇದು ಕಂಬಳದ ಕಾರ್ಯಕ್ರಮ. ಮಂಗಳೂರಿನಿಂದ ಬಂದು ಬೆಂಗಳೂರಿನಲ್ಲಿ ಕಂಬಳ ಮಾಡುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ತೊಂದರೆ ಆಗೋದು ಬೇಡ‌. ಫಿಲಂನವ್ರದ್ದು ಏನೋ ಒಂದು ಇರ್ತದೆ. ಆ ಮೇಲೆ ಡ್ರಾಮಾ ಅರ್ಟಿಸ್ಟ್, ಸ್ಕ್ರಿಪ್ಟ್‌ ನೋಡೋಣ ಎಂದು ಮುನಿರತ್ನಗೆ ತಿರುಗೇಟು ಕೊಟ್ಟರು.

ಪೊಲೀಸರ ಮಧ್ಯ ಪ್ರವೇಶ: ಮುನಿರತ್ನ ಬೆಂಬಲಿಗರು ಗದ್ದಲ ಆರಂಭಿಸುತ್ತಿದ್ದ ಪಕ್ಷಾತೀತವಾಗಿ ನಡೆಯುತ್ತಿದ್ದ ಕಾರ್ಯಕ್ರಮ ಹಾಳಾಗೋದು ಬೇಡ ಎಂದು ಕಂಬಳದ ಆಯೋಜನೆಯ ಕಾರ್ಯಕರ್ತರು ಎಲ್ಲರನ್ನೂ ತಡೆಯಲು ಪ್ರಯತ್ನಿಸಿದರು. ಈ ವೇಳೆ ಗದ್ದಲ ಹೆಚ್ಚಾಗುತ್ತಿದ್ದಂತೆ ಪೊಲೀಸರು ಎಲ್ಲರನ್ನೂ ಚದುರಿಸಿದರು.

ಭಾಷಣ ಮುಗಿಸಿ ವೇದಿಕೆಯಿಂದ ಕೆಳಗಿಳಿದು ಬಂದು ಮೈಸೂರಿಗೆ ಹೋಗಲು ತಯಾರಾಗುತ್ತಿದ್ದ ಡಿಕೆ ಶಿವಕುಮಾರ್ ಬಳಿ ಬಂದ ಶಾಸಕ ಮುನಿರತ್ನ, ಡಿಕೆ ಶಿವಕುಮಾರ್ ಕಾಲಿಗೆ ಬಿದ್ದು ಕೈಮುಗಿದು, ಆರ್ ಆರ್ ನಗರ ಕ್ಷೇತ್ರಕ್ಕೆ ಅನುದಾನ ನೀಡಿ ಎಂದು ಮನವಿ ಮಾಡಿ ಮನವಿ ಪತ್ರ ನೀಡಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!