ಕಂದಾಯ ಸಚಿವ ಕೃಷ್ಣಬೈರೇಗೌಡ 
ರಾಜ್ಯ

ತುರ್ತು ಪರಿಸ್ಥಿತಿ ಕುರಿತು ಮೊಬೈಲ್ ನಲ್ಲಿ ಪರೀಕ್ಷಾ ಸಂದೇಶ ಬರಬಹುದು, ಗಾಬರಿ ಬೇಡ!: ಕಂದಾಯ ಸಚಿವ ಕೃಷ್ಣ ಬೈರೇಗೌಡ

ವಿಭಿನ್ನ ಧ್ವನಿ ಮತ್ತು ಕಂಪನದೊಂದಿಗೆ ತುರ್ತು ಪರಿಸ್ಥಿತಿ ಕುರಿತು ನಿಮ್ಮ ಮೊಬೈಲ್ ನಲ್ಲಿ ಪರೀಕ್ಷಾ ಸಂದೇಶವನ್ನು ನೀವು  ಸ್ವೀಕರಿಸಬಹುದು. ದಯವಿಟ್ಟು ಗಾಬರಿಯಾಗಬೇಡಿ. ಈ ಸಂದೇಶ ನಿಜವಾದ ತುರ್ತು ಪರಿಸ್ಥಿತಿ ಸೂಚಿಸುವುದಿಲ್ಲ.

ಬೆಂಗಳೂರು: ವಿಭಿನ್ನ ಧ್ವನಿ ಮತ್ತು ಕಂಪನದೊಂದಿಗೆ ತುರ್ತು ಪರಿಸ್ಥಿತಿ ಕುರಿತು ನಿಮ್ಮ ಮೊಬೈಲ್ ನಲ್ಲಿ ಪರೀಕ್ಷಾ ಸಂದೇಶವನ್ನು ನೀವು  ಸ್ವೀಕರಿಸಬಹುದು. ದಯವಿಟ್ಟು ಗಾಬರಿಯಾಗಬೇಡಿ. ಈ ಸಂದೇಶ ನಿಜವಾದ ತುರ್ತು ಪರಿಸ್ಥಿತಿ ಸೂಚಿಸುವುದಿಲ್ಲ. ಪ್ರಾಕೃತಿಕ ವಿಪತ್ತುಗಳ ಸಮಯದಲ್ಲಿ ತುರ್ತು ಸಂವಹನವನ್ನು ಹೆಚ್ಚಿಸಲು ಮತ್ತು ನಮ್ಮ ನಾಗರಿಕರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ದೂರಸಂಪರ್ಕ ಇಲಾಖೆಯು ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಸಿಸ್ಟಮ್ ಪರೀಕ್ಷೆಯನ್ನು ನಡೆಸುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. 

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಸೆಲ್ ಬ್ರಾಡ್‌ಕಾಸ್ಟ್ ಎಚ್ಚರಿಕೆ ವ್ಯವಸ್ಥೆಯು ಅತ್ಯಾಧುನಿಕ ತಂತ್ರಜ್ಞಾನವಾಗಿದ್ದು, ಗೊತ್ತುಪಡಿಸಿದ ಭೌಗೋಳಿಕ ಪ್ರದೇಶದ ಎಲ್ಲಾ ನಿವಾಸಿಗಳ ಮೊಬೈಲ್ ಸಾಧನಗಳಿಗೆ ವಿಪತ್ತಿಗೆ ಸಂಬಂಧಿಸಿದಂತೆ ನಿರ್ಣಾಯಕ ಮತ್ತು ಸೂಕ್ಷ್ಮ ಸಂದೇಶಗಳ ಜೊತೆಗೆ ನಿಗದಿತ ಸಮಯವನ್ನೂ ಕಳುಹಿಸಲು ಸಹಾಯವಾಗಿದೆ. ಪ್ರಮುಖ ತುರ್ತು ಮಾಹಿತಿಯು ಸಕಾಲಿಕವಾಗಿ ಸಾಧ್ಯವಾದಷ್ಟು ಜನರನ್ನು ತಲುಪುತ್ತದೆ ಎಂಬುದನ್ನು ಇದು ಖಚಿತಪಡಿಸುತ್ತದೆ. ಸಂಭಾವ್ಯ ವಿಪತ್ತು ಮಾಹಿತಿ ತುರ್ತು ಎಚ್ಚರಿಕೆಯನ್ನು ಸಾರ್ವಜನಿಕರಿಗೆ ತಿಳಿಸಲು ಮತ್ತು ನಿರ್ಣಾಯಕ ಸಂದರ್ಭಗಳಲ್ಲಿ ಅವರಿಗೆ ಸರ್ಕಾರಿ ಸಂಸ್ಥೆಗಳ ಮೂಲಕ ತುರ್ತು ಸೇವೆಯನ್ನೂ ನೀಡಲೂ ಸಹ ಇದು ಸೆಲ್ ಬ್ರಾಡ್‌ಕಾಸ್ಟ್ ಸಹಕಾರಿಯಾಗಲಿದೆ ಎಂದಿದ್ದಾರೆ. 

ಉದಾಹರಣೆಗೆ ತೀವ್ರ ಹವಾಮಾನ ಎಚ್ಚರಿಕೆಗಳಾದ (ಉದಾ., ಸುನಾಮಿ, ಫ್ಲ್ಯಾಶ್ ಫ್ಲಡ್, ಭೂಕಂಪ, ಇತ್ಯಾದಿ). ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಸಿಸ್ಟಮ್‌ನ ಪರೀಕ್ಷೆಗಳನ್ನು ಪ್ರತಿ ಟೆಲಿಕಾಂ ಸೇವಾ ಪೂರೈಕೆದಾರರ ಮೇಲೆ ನಡೆಸಲಾಗುತ್ತಿದೆ. ವಿವಿಧ ಮೊಬೈಲ್ ಆಪರೇಟರ್‌ಗಳು ಮತ್ತು ಸೆಲ್ ಬ್ರಾಡ್‌ಕಾಸ್ಟ್ ಸಿಸ್ಟಮ್‌ಗಳ ತುರ್ತು ಎಚ್ಚರಿಕೆಯ ಪ್ರಸಾರ ಸಾಮರ್ಥ್ಯಗಳ ದಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಅಳೆಯಲು ಈ ಪರೀಕ್ಷೆಗಳನ್ನು ಕಾಲಕಾಲಕ್ಕೆ ದೇಶದಾದ್ಯಂತ ವಿವಿಧ ಪ್ರದೇಶಗಳಲ್ಲಿ ನಡೆಸಲಾಗುತ್ತದೆ. ಈ ಪ್ರಯತ್ನದ ಭಾಗವಾಗಿ, ಕರ್ನಾಟಕದಲ್ಲಿ ಅಕ್ಟೋಬರ್. 12 ರಂದು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. 

ಸಂದೇಶ ಹೀಗಿರುತ್ತದೆ:

ಪ್ರಮುಖ ಸಲಹೆ: ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ (DOT) ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ಸೆಲ್ ಬ್ರಾಡ್ಕಾಸ್ಟಿಂಗ್ ಸಿಸ್ಟಮ್ಗಾಗಿ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸುತ್ತಿದೆ. ಧ್ವನಿ ಮತ್ತು ಕಂಪನಗಳೊಂದಿಗೆ ನಿಮ್ಮ ಮೊಬೈಲ್ ಸಾಧನದಲ್ಲಿ ನೀವು ಪರೀಕ್ಷಾ ಅಲರ್ಟ್ ಗಳನ್ನು ಸ್ವೀಕರಿಸಬಹುದು. ಈ ಅಲರ್ಟ್ ಗಳು ಯೋಜಿತ ಪರೀಕ್ಷಾ ಪ್ರಕ್ರಿಯೆಯ ಭಾಗವಾಗಿದೆ, ನಿಜವಾದ ತುರ್ತುಸ್ಥಿತಿಯನ್ನು ಸೂಚಿಸುವುದಿಲ್ಲ ಮತ್ತು ದಯವಿಟ್ಟು ನಿಮ್ಮ ಕಡೆಯಿಂದ ಯಾವುದೇ ಕ್ರಮದ ಅಗತ್ಯವಿಲ್ಲ ಎಂದು ನಾವು ನಿಮಗೆ ಭರವಸೆ ನೀಡುತ್ತೇವೆ.

ಇದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್‌ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ ಸಂದೇಶವಾಗಿದೆ. ನಿಮ್ಮ ಕಡೆಯಿಂದ ಯಾವುದೇ ಕ್ರಿಯೆಯ ಅಗತ್ಯವಿಲ್ಲದ ಕಾರಣ ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ ಎಂದು ಸಚಿವರು ಮನವಿ ಮಾಡಿದ್ದಾರೆ.  

“ಈ ಸಂದೇಶವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಾರಿಗೊಳಿಸುತ್ತಿರುವ TEST ಪ್ಯಾನ್-ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಗೆ ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ತುರ್ತು ಸಂದರ್ಭಗಳಲ್ಲಿ ಸಕಾಲಿಕ ಎಚ್ಚರಿಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT