ವಿನಯ್ ಕುಲಕರ್ಣಿ 
ರಾಜ್ಯ

ಬಿ-ರಿಪೋರ್ಟ್ ತಿರಸ್ಕೃತ: ಶಾಸಕ ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆ ಪ್ರವೇಶಿಸುವ ಸಾಧ್ಯತೆ ಮತ್ತಷ್ಟು ಕ್ಷೀಣ

ಬಿಜೆಪಿ ಸದಸ್ಯ ಯೋಗೀಶ್‌ಗೌಡ ಗೌಡರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಬೆಂಗಳೂರಿನ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆ ಪ್ರವೇಶಿಸುವ ಸಾಧ್ಯತೆ ಮತ್ತಷ್ಟು ಕ್ಷೀಣಿಸಿದೆ. 

ಹುಬ್ಬಳ್ಳಿ: ಬಿಜೆಪಿ ಸದಸ್ಯ ಯೋಗೀಶ್‌ಗೌಡ ಗೌಡರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಬೆಂಗಳೂರಿನ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆ ಪ್ರವೇಶಿಸುವ ಸಾಧ್ಯತೆ ಮತ್ತಷ್ಟು ಕ್ಷೀಣಿಸಿದೆ. 

ಗುರುನಾಥಗೌಡ ಅವರು ತಮ್ಮ ಸಹೋದರ ಯೋಗೀಶ್‌ಗೌಡನ ಕೊಲೆಗೆ ಸಾಕ್ಷಿ ಎಂದು ಹೇಳಿಕೊಂಡು ಖಾಸಗಿ ದೂರು ದಾಖಲಿಸಿದ್ದು, ಸಾಕ್ಷಿದಾರರಾಗದಂತೆ ಪ್ರಕರಣದ ಆರೋಪಿಗಳಿಂದ ತನಗೆ ಬೆದರಿಕೆ ಇದೆ. ಹತ್ಯೆಯ ತನಿಖೆಯಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳು ಮತ್ತು ಅಂದಿನ ಸಚಿವ ವಿನಯ್ ಕುಲಕರ್ಣಿ ತಮ್ಮನ್ನು ಬೆದರಿಸಿದ್ದಾರೆ ಎಂದು ಆರೋಪಿಸಿದ್ದರು ಮತ್ತು ತಮ್ಮ ದೂರಿಗೆ ಸಂಬಂಧಿಸಿದ ತನಿಖೆಯಲ್ಲಿ ಪೊಲೀಸರು ಸರಿಯಾದ ಕ್ರಮವನ್ನು ಅನುಸರಿಸಿಲ್ಲ ಎಂದು ದೂರಿದ್ದಾರೆ.

ನಂತರ ಹುಬ್ಬಳ್ಳಿ-ಧಾರವಾಡ ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿದ್ದರು. ಆದಾಗ್ಯೂ, ಜನಪ್ರತಿನಿಧಿ ನ್ಯಾಯಾಲಯವು ಪೊಲೀಸ್ ವರದಿಯಲ್ಲಿ ಹಲವಾರು ನ್ಯೂನತೆಗಳನ್ನು ಗಮನಿಸಿರುವ ನ್ಯಾಯಾಲಯ, ಸಂಪೂರ್ಣ ತನಿಖೆಯ ನಂತರ ತಕ್ಷಣವೇ ಅಂತಿಮ ಅಥವಾ ಹೆಚ್ಚುವರಿ ವರದಿಯನ್ನು ಸಲ್ಲಿಸುವಂತೆ ಕೇಳಿದೆ. ಹೀಗಾಗಿ, ವಿನಯ್ ಕುಲಕರ್ಣಿ ಅವರು ಯೋಗೀಶ್‌ಗೌಡ ಹತ್ಯೆಯಲ್ಲಿ ಭಾಗಿಯಾಗಿರುವ ಆರೋಪದ ಹೊರತಾಗಿ ಮತ್ತೊಂದು ಪ್ರಕರಣವನ್ನು ಎದುರಿಸಬೇಕಾಗುತ್ತದೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿತು ಮತ್ತು ಒಂಬತ್ತು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿಟ್ಟಿತ್ತು. ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತು ಹೈಕೋರ್ಟ್ ಜಾಮೀನು ನಿರಾಕರಿಸಿತ್ತು. ಬಳಿಕ ಅವರು, ಸುಪ್ರಿಂಕೋರ್ಟ್‌ಗೆ ಮೊರೆ ಹೋಗಿದ್ದರು. 2021ರ ಆಗಸ್ಟ್‌ನಲ್ಲಿ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದ್ದ ಸುಪ್ರೀಂಕೋರ್ಟ್, ನ್ಯಾಯಾಲಯದ ಅನುಮತಿ ಪಡೆಯದೆ ಧಾರವಾಡ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂಬುದು ಸೇರಿ 4 ಷರತ್ತು ವಿಧಿಸಿತ್ತು.

ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದು ಮತ್ತು ಎಚ್‌ಡಿಎಂಸಿ ಮೇಯರ್ ಚುನಾವಣೆಗೆ ಮತ ಚಲಾಯಿಸುವುದನ್ನು ಉಲ್ಲೇಖಿಸಿ ಅವರು ಈ ನಿರ್ಬಂಧದಿಂದ ಮುಕ್ತವಾಗಲು ಪ್ರಯತ್ನಿಸಿದರೂ, ವಿವಿಧ ನ್ಯಾಯಾಲಯಗಳು ಅವರ ಮನವಿಯನ್ನು ಪದೇ ಪದೆ ತಳ್ಳಿಹಾಕಿವೆ.

ಇನ್ನೊಂದು ಪ್ರಕರಣದಲ್ಲಿ ಸಲ್ಲಿಸಲಾಗಿದ್ದ ಬಿ-ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿರುವ ಹಿನ್ನೆಲೆಯಲ್ಲಿ, ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆಗೆ ಪ್ರವೇಶಿಸಲು ನ್ಯಾಯಾಲಯದಿಂದ ತಮ್ಮ ಪರವಾಗಿ ಆದೇಶ ಪಡೆಯುವುದು ಹೆಚ್ಚು ಕಷ್ಟವಾಗಬಹುದು ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ. 

ಮತ್ತೊಂದೆಡೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಇತ್ತೀಚಿನ ಬೆಳವಣಿಗೆಗಳ ನಂತರ ಸಿಬಿಐ ಕೂಡ ಸಾಕಷ್ಟು ಸಕ್ರಿಯವಾಗಿದ್ದು, ಮುಂದಿನ ದಿನಗಳು ವಿನಯ್ ಕುಲಕರ್ಣಿಗೆ ಹೆಚ್ಚು ಆರಾಮದಾಯಕವಲ್ಲ ಎಂದು ಅವರು ಹೇಳಿದರು.

ಆದರೆ, ವಿನಯ್ ಕುಲಕರ್ಣಿ ಅವರು ಪಕ್ಕದ ಜಿಲ್ಲೆಯಿಂದಲೇ ತಮ್ಮ ಕ್ಷೇತ್ರದ ಉಸ್ತುವಾರಿ ನೋಡಿಕೊಳ್ಳುತ್ತಿದ್ದು, ಅಧಿಕೃತ ಸಭೆ, ಸರ್ಕಾರಿ ಕಾರ್ಯಕ್ರಮಗಳನ್ನೂ ನಡೆಸುತ್ತಿದ್ದಾರೆ. ಈ ಕ್ರಮವನ್ನು ಬಿಜೆಪಿ ನಾಯಕರು ತೀವ್ರವಾಗಿ ಟೀಕಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT