ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಚಿನ್ನಾಭರಣ ವ್ಯಾಪಾರಿಗಳು, ಕಾಫಿ ಬೋರ್ಡ್ ಕಾರ್ಯದರ್ಶಿಗೆ ಸಂಬಂಧಿಸಿದ 50 ಕಡೆಗಳಲ್ಲಿ ಐಟಿ ದಾಳಿ

ಆದಾಯ ತೆರಿಗೆ ಇಲಾಖೆ ಗುರುವಾರ ಬೆಂಗಳೂರಿನಲ್ಲಿ ಚಿನ್ನಾಭರಣ ವ್ಯಾಪಾರಿಗಳು ಮತ್ತು ಕಾಫಿ ಬೋರ್ಡ್ ಕಾರ್ಯದರ್ಶಿಗೆ  ಸಂಬಂಧಿಸಿದ 50 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ.

ಬೆಂಗಳೂರು: ಚಿನ್ನಾಭರಣ ವ್ಯಾಪಾರಿಗಳ ಕಚೇರಿಗಳು, ನಿವಾಸ ಮತ್ತು ಕಾಫಿ ಮಂಡಳಿಯ ಕಾರ್ಯದರ್ಶಿ ಎಂ. ಚಂದ್ರಶೇಖರ್‌ಗೆ ಸಂಬಂಧಿಸಿದ ಸ್ಥಳಗಳಲ್ಲಿಯೂ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ, ಆರ್‌ಎಂವಿ ಎಕ್ಸ್‌ಟೆನ್ಶನ್ ಮತ್ತು ಇತರ ಪ್ರದೇಶಗಳಲ್ಲಿ ದಾಳಿ ನಡೆಸಲಾಗಿದೆ.

ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಕಳೆದ ವಾರ ಬೆಂಗಳೂರಿನಲ್ಲಿಆಭರಣ ವ್ಯಾಪಾರಿಗಳ ಮೇಲೆ ಇದೇ ರೀತಿ ನಡೆಸಲಾಗಿತ್ತು. ದೊರೆತ ದಾಖಲೆಗಳ ಆಧಾರದ ಮೇಲೆ ಪ್ರಸ್ತುತ ದಾಳಿ ನಡೆಸಲಾಗುತ್ತಿದೆ ಎಂದು ಮೂಲಗಳು ವಿವರಿಸಿವೆ. ಕೆಲವು ಆಭರಣ ವ್ಯಾಪಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಮತ್ತೆ ದಾಳಿ ನಡೆಸಲಾಗಿದೆ. ಕಾಫಿ ಮಂಡಳಿ ಕಾರ್ಯದರ್ಶಿ ಚಂದ್ರಶೇಖರ್ ಅವರ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆದಿದೆ. ಚಿನ್ನಾಭರಣ ವ್ಯಾಪಾರಿಗಳೊಂದಿಗೆ ಚಂದ್ರಶೇಖರ್ ನಡೆಸಿದ ವಹಿವಾಟಿನ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

120 ಕಾರುಗಳಲ್ಲಿ ಆಗಮಿಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಗರದಾದ್ಯಂತ ಏಕಕಾಲದಲ್ಲಿ ದಾಳಿ ನಡೆಸಿದರು. ಚೆನ್ನೈ, ನವದೆಹಲಿಯಿಂದ ತಂಡಗಳನ್ನು ಸಜ್ಜುಗೊಳಿಸಲಾಗಿದೆ. ದಾಳಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್