ರಾಜ್ಯ

ವಿದ್ಯುತ್ ಕೊರತೆ: ಹೆಚ್ಚು ಕಲ್ಲಿದ್ದಲು ಪೂರೈಕೆಗಾಗಿ ಕೇಂದ್ರದತ್ತ ಮುಖ ಮಾಡಿದ ರಾಜ್ಯ ಸರ್ಕಾರ!

Manjula VN

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಕಲ್ಲಿದ್ದರು ಪೂರೈಕೆಗಾಗಿ ರಾಜ್ಯ ಸರ್ಕಾರದ ಕೇಂದ್ರದ ಮೊರೆ ಹೋಗಿದೆ.

ನಿನ್ನೆಯಷ್ಟೇ ಇಂಧನ ಸಚಿವ ಕೆಜೆ ಜಾರ್ಜ್ ಅವರು, ಅಧಿಕಾರಿಗಳ ತಂಡದೊಂದಿಗೆ ದೆಹಲಿಗೆ ದೌಡಾಯಿಸಿ ಕೇಂದ್ರ ಸಚಿವಾಲಯದೊಂದಿಗೆ ಸಭೆ ನಡೆಸಿದ್ದು, ಈ ವೇಳೆ ಕಲ್ಲಿದ್ದಲು ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಹೆಚ್ಚುವರಿ ಎರಡು ರೇಕ್ ಕಲ್ಲಿದ್ದಲು ಪೂರೈಕೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ದಿನನಿತ್ಯ ಪೂರೈಕೆಯಾಗುವ ಕಲ್ಲಿದ್ದಲನ್ನು ಬಳಕೆ ಮಾಡುತ್ತಿದ್ದೇವೆ. ಆದರೆ, ಬೇಡಿಕೆ ಹೆಚ್ಚಾದಂತೆ ಬಳಕೆ ಹೆಚ್ಚಾಗಿದೆ. ಬೇಡಿಕೆ ಪೂರೈಸಲು ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರದ ಬಳಿಕ ಎರಡು ರೇಕ್ ಕಲ್ಲಿದ್ದಲು ಪೂರೈಕೆ ಮಾಡುವಂತೆ ಮನವಿ ಸಲ್ಲಿಸಿದ್ದೇವೆ. ಇದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಆದರೆ, ದೇಶದಾದ್ಯಂತ ಇದೇ ರೀತಿಯ ಪರಿಸ್ಥಿತಿ ಎದುರಾದರೆ ಪರಿಸ್ಥಿತಿ ಕಠಿಣವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದೆ. ನಾಗ್ಪುರದಲ್ಲಿ ಮಳೆಯಾಗುತ್ತಿದ್ದು, ಕಲ್ಲಿದ್ದಲಿನ ಗುಣಮಟ್ಟ ಕೂಡ ಕಳವಳಕಾರಿಯಾಗಿದೆ. ಉತ್ಪಾದನೆ ಇನ್ನೂ ಪೂರ್ಣವಾಗಿಲ್ಲ ಎಂದು ಇಂಧನ ಇಲಾಖೆಯ ಮೂಲಗಳು ಮಾಹಿತಿ ನೀಡಿದೆ.

“ರಾಜ್ಯದಲ್ಲಿ ಪ್ರಸ್ತುತ ಸುಮಾರು 1.7-2 ಲಕ್ಷ ಟನ್ ಕಲ್ಲಿದ್ದಲು ಇದೆ. ಇದನ್ನು ಪ್ರತಿದಿನ ಮೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಲ್ಲಿ ಬಳಸಲಾಗುತ್ತಿದೆ. ಕರ್ನಾಟಕವು ಒಡಿಶಾ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಿಂದ ದಿನಕ್ಕೆ 13-14 ರೇಕ್‌ಗಳಷ್ಟು ಕಲ್ಲಿದ್ದಲನ್ನು ಪಡೆಯುತ್ತಿದೆ (ಪ್ರತಿ ರೇಕ್‌ಗೆ ಸುಮಾರು 4,000 ಟನ್‌). ರಾಜ್ಯವು ಪ್ರತಿದಿನ 2,118MW ಉಷ್ಣ ವಿದ್ಯುತ್ ಉತ್ಪಾದಿಸುತ್ತಿದೆ. ಅಲ್ಲದೆ, ಜಲ ವಿದ್ಯುತ್‌ ಸೇರಿದಂತೆ 5,919MW ವಿದ್ಯುತ್ ಉತ್ಪಾದಿಸುತ್ತಿದೆ.

“ನಾವು ಈ ವರ್ಷ ಯಾವುದೇ ಥರ್ಮಲ್ ಸ್ಟೇಷನ್‌ಗಳನ್ನು ಮುಚ್ಚಿಲ್ಲ. ಈಗ, ಮಾನ್ಸೂನ್ ಮಳೆ ಸರಿಯಾಗಿ ಆಗದ ಕಾರಣ ಉಷ್ಣ ಶಕ್ತಿಯ ಬೇಡಿಕೆ ಹೆಚ್ಚಾಗಿದೆ. ಕಳೆದ ಐದು ವರ್ಷಗಳಲ್ಲಿ ಸ್ಥಾಪಿತ ಸಾಮರ್ಥ್ಯದಲ್ಲಿ ಯಾವುದೇ ಹೆಚ್ಚಳವಾಗಿಲ್ಲ ಎಂದು ಇಲಾಖೆ ತಿಳಿಸಿದೆ.

ಕೋವಿಡ್ ಬಳಿಕ ಆರ್ಥಿಕ ಬೆಳವಣಿಗೆಗಳು ಹೆಚ್ಚಾಗಿದ್ದು, ವಿದ್ಯುತ್ ಬೇಡಿಕೆಯೂ ಹೆಚ್ಚಾಗಿದೆ. ಆದರೆ, ಸೂಕ್ತ ಮಳೆಯಾಗದ ಕಾರಣ ನವೀಕರಿಸಬಹುದಾದ ಇಂಧನದ ಉತ್ಪಾದನೆಯಲ್ಲಿ ಇಳಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.

SCROLL FOR NEXT