ಸಂಗ್ರಹ ಚಿತ್ರ 
ರಾಜ್ಯ

ಬೆಳಗಾವಿ: ಗಾಂಧಿ ಜಯಂತಿ ವೇಳೆ ಡಿಎಚ್‌ಒ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ 7 ಮಂದಿ ನೌಕರರ ಅಮಾನತು

ನಗರದ ಟಿಳಕವಾಡಿಯ ವ್ಯಾಕ್ಸಿನ್ ಡಿಪೋ ಆವರಣದ ಜಿಲ್ಲಾ ಆರೋಗ್ಯಾಧಿಕಾರಿ ಕಾರ್ಯಾಲಯದ ಹಿಂದಿನ ಕಚೇರಿಯಲ್ಲೇ ಎಣ್ಣೆ ಪಾರ್ಟಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.  

ಬೆಳಗಾವಿ: ನಗರದ ಟಿಳಕವಾಡಿಯ ವ್ಯಾಕ್ಸಿನ್ ಡಿಪೋ ಆವರಣದ ಜಿಲ್ಲಾ ಆರೋಗ್ಯಾಧಿಕಾರಿ ಕಾರ್ಯಾಲಯದ ಹಿಂದಿನ ಕಚೇರಿಯಲ್ಲೇ ಎಣ್ಣೆ ಪಾರ್ಟಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.  

ಡಿಎಚ್‌ಒ ಅವರ ಕಾರು ಚಾಲಕ ಮಂಜುನಾಥ ಪಾಟೀಲ, ಮಹೇಶ ಹಿರೇಮಠ, ರಮೇಶ ನಾಯಿಕ, ಸತ್ಯಪ್ಪ ತಮ್ಮನ್ನವರ, ಅನಿಲ ತಿಪ್ಪನ್ನವರ, ದೀಪಕ ಗಾವಡೆ, ಯಲ್ಲಪ್ಪ ಮುನ್ನವಳ್ಳಿ ಎಂಬ ನೌಕರರನ್ನು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ ಕೋಣಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಪಾರ್ಟಿ ಮಾಡಿರುವ ನೌಕರರಲ್ಲೇ ಒಬ್ಬರು ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಗಾಂಧಿ ಜಯಂತಿ ದಿನ ಕಚೇರಿಯಲ್ಲೇ ಗಾಂಧೀಜಿ ಭಾವಚಿತ್ರದ ಎದುರು ಕುಡಿದು ಕುಪ್ಪಳಿಸಿರುವುದು, ಹಾಡು, ಡಾನ್ಸ್‌, ಹರಟೆ ಹೊಡೆದಿರುವುದು ವಿಡಿಯೋದಲ್ಲಿ ಕಂಡು ಬಂದಿತ್ತು. ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಗಾಂಧಿ ಜಯಂತಿ ದಿನ ಮದ್ಯ, ಮಾಂಸ ಮಾರಾಟ ನಿಷೇಧವಿರುತ್ತದೆ. ಆದರೆ, ಆರೋಗ್ಯ ಇಲಾಖೆ ಸಿಬ್ಬಂದಿ ಪಾರ್ಟಿ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್