ಜ್ಯೋತಿ ಯಾತ್ರೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ಮತ್ತಿತರರು 
ರಾಜ್ಯ

ಕಿತ್ತೂರು ಉತ್ಸವ: ಜ್ಯೋತಿ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಕಿತ್ತೂರು ಉತ್ಸವ 2023ರ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿ ಬೆಳಗಾವಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜ್ಯೋತಿ ಯಾತ್ರೆಗೆ ಚಾಲನೆ ನೀಡಿದ  ಮುಖ್ಯಮಂತ್ರಿ ಸಿದ್ದರಾಮಯ್ಯ, ಕಿತ್ತೂರು ಉತ್ಸವದ ಲಾಂಛನವನ್ನು ಬಿಡುಗಡೆಗೊಳಿಸಿದರು.

ಬೆಂಗಳೂರು: ಚನ್ನಮ್ಮ ಕಿತ್ತೂರು ಉತ್ಸವ 2023ರ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿ ಬೆಳಗಾವಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜ್ಯೋತಿ ಯಾತ್ರೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಿತ್ತೂರು ಉತ್ಸವದ ಲಾಂಛನವನ್ನು ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯದ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ವೀರ ನಾರಿ ಕಿತ್ತೂರು ರಾಣಿ ಚನ್ನಮ್ಮ ಯುವಜನರಿಗೆ ಸ್ಪೂರ್ತಿ ಮತ್ತು ಪ್ರೇರಣೆ. ಪ್ರತಿಯೊಬ್ಬರೂ ಈ ನಾಡು ಮತ್ತು ನೆಲವನ್ನು ಪ್ರೀತಿಸಬೇಕು. ಇದು ಪ್ರತಿ ಭಾರತೀಯರ ಜವಾಬ್ದಾರಿ ಎಂದರು.

ಯುವ ಜನರಿಗೆ ಕಿತ್ತೂರು ರಾಣಿ ಚನ್ನಮ್ಮನ ವೀರ ಆದರ್ಶ ಜೀವನದ ಕುರಿತು ಅರಿವು ಮೂಡಿಸುವ ಸಲುವಾಗಿ ಈ ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಜಯಂತಿಯನ್ನು ಆಚರಿಸಲು ಆದೇಶಿಸಿದೆ. ಅಂದಿನಿಂದ ಇಂದಿನವರೆಗೂ ಪ್ರತಿ ವರ್ಷ ಈ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.

ಎಲ್ಲರೂ ಕಿತ್ತೂರು ರಾಣಿ ಚನ್ನಮ್ಮ ಆಗಲು ಸಾಧ್ಯವಿಲ್ಲ. ಆದರೆ, ಅವರ ಧರ್ಯ, ಸಾಹಸ, ದೇಶಪ್ರೇಮ ಹಾಗೂ ಸ್ವಾಭಿಮಾನವನ್ನು ಜೀವನ ದಲ್ಲಿ ಬೆಳಸಿಕೊಳ್ಳಬೇಕು. ಅಕ್ಟೋಬರ್ 23, 24 ಹಾಗೂ 25 ರಂದು ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಚನ್ನಮ್ಮ ಕಿತ್ತೂರು ಉತ್ಸವ ಆಚರಿಸಲಾಗುತ್ತಿದ್ದು, ಕಾರ್ಯಕ್ರಮದ ಯಶಸ್ಸಿಗೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದರು. 

ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರುಗಳಾದ ವಿನಯ್ ಕುಲಕರ್ಣಿ, ಬಾಬಾ ಸಾಹೇಬ್ ಪಾಟೀಲ್, ಮಹಾಂತೇಶ ಕೌಜಲಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ.ಕೆ. ಧರಣಿದೇವಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ

3ನೇ T20: ಭಾರತಕ್ಕೆ 7 ವಿಕೆಟ್‌ಗಳ ಅಮೋಘ ಜಯ; ದಕ್ಷಿಣ ಆಫ್ರಿಕಾ ವಿರುದ್ಧ 2-1 ಮುನ್ನಡೆ!

Hardik Pandya ಐತಿಹಾಸಿಕ ದಾಖಲೆ: T20 ಕ್ರಿಕೆಟ್‌ನಲ್ಲಿ 1000 ರನ್, 100 ವಿಕೆಟ್‌ ಪಡೆದ ಭಾರತದ ಮೊದಲ ವೇಗಿ!

GOATS meet: ಒಂದೇ ವೇದಿಕೆಯಲ್ಲಿ ಮೆಸ್ಸಿ, ಸಚಿನ್, ಚೆಟ್ರಿ, ಮತ್ತೊಂದು ಚಾರಿತ್ರಿಕ ಘಟನೆಗೆ ಸಾಕ್ಷಿಯಾದ ವಾಂಖೆಡೆ ಕ್ರೀಡಾಂಗಣ! Video

News headlines 14-12-2025 | ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ; ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಸಿಬ್ಬಂದಿ ಮೇಲೆ ಉದ್ಯಮಿ ಹಲ್ಲೆ; ರಾಮನಗರ: ಕಾಡಾನೆ ದಾಳಿಗೆ ರೈತ ಸಾವು

SCROLL FOR NEXT